ಕಣ್ಮರೆಯಾಗುತ್ತಿದೆ ಅವಿಭಕ್ತ ಪರಂಪರೆ
Team Udayavani, May 20, 2019, 2:32 PM IST
ನರಗುಂದ: ಅವಿಭಕ್ತ ಕುಟುಂಬಗಳು ಈ ದೇಶದ ಸಾಂಸ್ಕೃತಿಕ ಹಿನ್ನೆಲೆಗೆ ಜೀವನಾಡಿ ಇದ್ದಂತೆ. ಅಂತಹ ಅವಿಭಕ್ತ ಕುಟುಂಬಗಳು ಮಾಯವಾಗುತ್ತಿರುವುದರಿಂದ ಸಮಾಜದಲ್ಲಿ ಸಾಮರಸ್ಯ ಬಾಂಧವ್ಯ ಕ್ಷೀಣಿಸುತ್ತಿದೆ. ವಿಭಕ್ತ ಕುಟುಂಬ ಇದು ಪಾಶ್ಚಿಮಾತ್ಯ ಸಂಸ್ಕೃತಿ. ಇಂತಹ ಸಂಸ್ಕೃತಿಯನ್ನು ಭಾರತೀಯರಾದ ನಾವು ಅನುಕರಣೆ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್ ಹಾಗೂ ಗುರು ಬ್ರಹ್ಮಾನಂದ ಶಿವಾನುಭವ ಧರ್ಮ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 294ನೇ ಮಾಸಿಕ ಶಿವಾನುಭವ ಹಾಗೂ ವಿಶ್ವ ಕುಟುಂಬ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಉತ್ತಮ ಕುಟುಂಬದಿಂದಲೇ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ. ಭಾರತೀಯ ಪರಂಪರೆಯಲ್ಲಿ ಕೌಟುಂಬಿಕ ವ್ಯವಸ್ಥೆಗೆ ವಿಶಿಷ್ಟ ಸ್ಥಾನವಿದೆ. ಜಗತ್ತಿಗೆ ಕೂಡಿ ಬಾಳುವ ಪರಂಪರೆಯನ್ನು ಹೇಳಿಕೊಟ್ಟ ಭಾರತದಲ್ಲಿಯೇ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ವಿದೇಶಿ ಸಂಸ್ಕೃತಿಯ ಪ್ರಭಾವದಿಂದ ಇತ್ತೀಚೆಗೆ ನಮ್ಮ ದೇಶದಲ್ಲಿ ಏಕ ಪೋಷಕ ಕುಟುಂಬ ನಿರ್ಮಾಣವಾಗುತ್ತಿರುವುದು ಆಶ್ಚರ್ಯದ ಸಂಗತಿ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದರು.
ಶಿಕ್ಷಕ ಜಿ.ಬಿ. ಕಂಠೆನ್ನವರ ಉಪನ್ಯಾಸ ನೀಡಿ, ಆಧುನಿಕ ಜೀವನ ಶೈಲಿಗೆ ಮಾರುಹೋದ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಮಾಯವಾಗಿ ವಿಭಕ್ತ ಕುಟುಂಬಗಳೆ ಹೆಚ್ಚಾಗುತ್ತಿವೆ. ಮಕ್ಕಳಲ್ಲಿ ಮಾನವೀಯ ಮೌಲ್ಯ, ಹೊಂದಾಣಿಕೆ ಸ್ವಭಾವದ ಕೊರತೆ ಇದಕ್ಕೆ ಮುಖ್ಯ ಕಾರಣ ಎಂದರು.
ಈ ಸಂದರ್ಭದಲ್ಲಿ ಕೊಣ್ಣೂರಿನ ಅವಿಭಕ್ತ ಕುಟುಂಬದ ಮುಖ್ಯಸ್ಥೆ ತುಳಸವ್ವ ಅನ್ನಪ್ಪಗೌಡ್ರ, ಚಿಕ್ಕನರಗುಂದದ ಪಾರಂಪರಿಕ ಪಶು ವೈದ್ಯ ಶಿವಾನಂದ ಭಾಚಿ ಅವರನ್ನು ಶ್ರೀಮಠದಿಂದ ಸತ್ಕರಿಸಲಾಯಿತು.
ತಾ.ಪಂ ಸದಸ್ಯ ಪಿ.ಬಿ.ಪಿ. ಶಿರಿಯಪ್ಪಗೌಡ್ರ, ತಾ.ಪಂ ಮಾಜಿ ಅಧ್ಯಕ್ಷ ಗುರಪ್ಪ ಆದೆಪ್ಪನವರ, ನಿವೃತ್ತ ಶಿಕ್ಷಕ ಪಿ.ಬಿ. ಕುಂಬಾರ, ಚಂದ್ರು ದಂಡಿನ, ಶಿಶು ಅಭಿವೃದ್ಧಿ ಇಲಾಖೆಯ ಬಸಮ್ಮ ಹೂಲಿ, ಜಗದೀಶ ಜ್ಞಾನೋಪಂಥ, ತಿರ್ಥಗೌಡ ಪಾಟೀಲ, ತುಳಸಿಗೇರಿ ಇದ್ದರು. ಪ್ರೊ| ಆರ್.ಬಿ. ಚಿನಿವಾಲರ ನಿರೂಪಿಸಿದರು. ಪ್ರೊ| ಆರ್.ಕೆ. ಐನಾಪುರ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.