ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ವಿತರಿಸಿ
ವಸತಿ ರಹಿತರಿಂದ ಗದುಗಿನಲ್ಲಿ ಬೃಹತ್ ಪ್ರತಿಭಟನೆ- ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ
Team Udayavani, Jun 30, 2019, 11:19 AM IST
ಗದಗ: ನಗರದ ಹೊರವಲಯದ ಗಂಗಿಮಡಿ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳ ವಿತರಣೆಯಲ್ಲಿ ಪಕ್ಷ ರಾಜಕೀಯ ಮಾಡದೇ, ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಇಲ್ಲಿನ ವಸತಿ ರಹಿತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಒಕ್ಕಲಗೇರಿ ರಾಚೋಟೇಶ್ವರ ದೇವಸ್ಥಾನದಿಂದ ಪ್ರಾರಂಭಗೊಂಡ ಬೃಹತ್ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ನಗರಸಭೆ ಆವರಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ ಅಂಗಡಿ, ಗಂಗಿಮಡಿ ಪ್ರದೇಶದಲ್ಲಿ ಕೇಂದ್ರ ಸರಕಾರದ ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಮನೆಗಳಿಗೆ ಶೇ. 50ರಷ್ಟು ಅನುದಾನವನ್ನು ಕೇಂದ್ರ ಸರಕಾರ ಭರಿಸುತ್ತಿದೆ. ಇನ್ನುಳಿದಂತೆ ರಾಜ್ಯ ಸರಕಾರ ಹಾಗೂ ಸ್ಥಳೀಯ ನಗರಸಭೆ ವಂತಿಗೆಯಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಶಾಸಕ ಎಚ್.ಕೆ. ಪಾಟೀಲ ಮತ್ತು ಅವರ ಬೆಂಬಲಿಗರು ಮಾತ್ರ ತಾವೇ ಈ ಯೋಜನೆಯ ಮಾಲೀಕರು, ಯೋಜನೆಯ ರೂವಾರಿಗಳು ಎಂಬಂತೆ ´ೋಸು ಕೊಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಅವಳಿ ನಗರದಲ್ಲಿ ತಮಗೆ ಬೇಕಾದವರಿಗೆ ಮನೆ ನೀಡುವುದಾಗಿ ಹೇಳುವ ಮೂಲಕ ಯೋಜನೆ ದುರುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ, ಕೇಂದ್ರ ಸರಕಾರದ ಆರ್ಥಿಕ ನೆರವಿನಿಂದ ನಿರ್ಮಾಣಗೊಳ್ಳುತ್ತಿರುವ ಮನೆಗಳು ಕಾಂಗ್ರೆಸ್ ಕಾರ್ಯಕರ್ತರು, ಅವರು ಹಿಂಬಾಲಕರು, ಮರಿ ಪುಡಾರಿಗಳ ಪಾಲಾಗಬಾರದು. ಮನೆ ವಿತರಣೆಗೆ ಸರಕಾರ ರೂಪಿಸಿದ ಮಾನದಂಡಗಳ ಪ್ರಕಾರವೇ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಅರ್ಹರಿಗೆ ಸೂರು ಕಲ್ಪಿಸುವ ಮೂಲಕ ಯೋಜನೆಯ ಮೂಲ ಉದ್ದೇಶ ಈಡೇರುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಎಸ್.ಎಂ. ಕೃಷ್ಣಾ ನಗರದ ಆಶ್ರಯ ಮನೆಗಳಂತೆ ಗಂಗಿಮಡಿ ಮನೆಗಳೂ ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ, ಏಜೇಂಟರಿಗೆ ವಿತರಿಸಿದ್ದೇ ಆದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಗರಸಭೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಶ್ರೀರಾಮ ಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜೂ ಖಾನಪ್ಪನವರ, ಸುರೇಶ ಹೆಬಸೂರ, ವಿನಾಯಕ ಕಿರೇಸೂರು, ಚೇತನ್ ಅಬ್ಬಿಗೇರಿ, ನಾಗರಾಜ ದೊಡ್ಡಮನಿ, ಅಂದಪ್ಪ ಕುಂಬಾರ, ಅರುಣ, ನಾಗರತ್ನಾ ಅಂಗಡಿ, ನೀಲಾ ಮೆಣಸಿನಕಾಯಿ, ಹಮೀದಾಬೇಗಂ ದಖನಿ, ಶಿವಲೀಲಾ ಮುಗುಳಿ, ಶೋಭಾ ಪಿಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.