ಜೂನ್ ಪಡಿತರ ವಿತರಣೆ
Team Udayavani, Jun 11, 2020, 6:56 AM IST
ಗದಗ: ಕೋವಿಡ್ -19ರ ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್ಥಿಕ ಕ್ರಮಗಳ ಪ್ರಯುಕ್ತ ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ್ ಭಾರತ ಯೋಜನೆಯಡಿ ಪಡಿತರ ಆಹಾರ ಧಾನ್ಯ ನೀಡುತ್ತಿದ್ದು, ಜೂನ್ ತಿಂಗಳ ಪಡಿತರ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ. ಅಕ್ಕಿ (ಎನ್‌ಎಫ್‌ಎಸ್‌ಎ ಯೋಜನೆ ಅಡಿ) ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ) ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ. ತೊಗರಿಬೇಳೆ ನೀಡಲಾಗುತ್ತಿದೆ. ಬಿಪಿಎಲ್ ಪಡಿತರ ಚೀಟಿಗೆ ಉಚಿತವಾಗಿ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆ.ಜಿ. ಗೋಧಿ ಹಾಗೂ 2 ಕೆ.ಜಿ. ತೊಗರಿಬೇಳೆ ವಿತರಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಕಾರರು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನ್ಯಾಯ ಬೆಲೆ ಅಂಗಡಿ ತೆರೆದು, ಪಡಿತರ ಧಾನ್ಯ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.