110 ಕುಟುಂಬಗಳಿಗೆಪರಿಹಾರ ಧನ ವಿತರಣೆ
Team Udayavani, Aug 16, 2019, 12:17 PM IST
ಹೊಳೆಆಲೂರು: ಪಟ್ಟಣದಲ್ಲಿ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಲಾಯಿತು.
ಹೊಳೆಆಲೂರು: ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿದ ಕುರುವಿನಕೊಪ್ಪ ಗ್ರಾಮದ ಪರಿಹಾರ ಕೇಂದ್ರದ ಆಶ್ರಯ ಮನೆಗಳಲ್ಲಿ ವಾಸವಿದ್ದ 110 ಕುಟುಂಬಗಳ ನೆರೆ ಸಂತ್ರಸ್ತರಿಗೆ ಗುರುವಾರ ತಾಲೂಕು ಆಡಳಿತದಿಂದ ತಲಾ ಫಲಾನುಭವಿಗೆ 10 ಸಾವಿರ ರೂ. ಪರಿಹಾರದ ಚೆಕ್ ವಿತರಿಸಲಾಯಿತು.
ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ ಮಾತನಾಡಿ, ಸರಕಾರ ಕಳೆದ ಹತ್ತು ವರ್ಷಗಳ ಹಿಂದೆಯೇ ಹೊಳೆಆಲೂರು ಭಾಗದ 11 ಗ್ರಾಮಗಳನ್ನು ಸ್ಥಳಾಂತರಗೊಳಿಸಲಾಗಿತ್ತು. ಜನರು ಮುಂಜಾಗ್ರತೆ ವಹಿಸಿದ್ದರೆ ಇಂತಹ ಅವಘಡವಾಗುತ್ತಿರಲಿಲ್ಲ. ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಅಪಾರ ಪ್ರಮಾಣದ ನೀರಿನಿಂದಾಗಿ ಬಹುತೇಕ ಗ್ರಾಮಗಳು ನೀರಿನಲ್ಲಿ ಮುಳುಗಡೆಗೊಂಡು ಸಾಕಷ್ಟು ಹಾನಿ ನೀವು ಅನುಭವಿಸಿದ್ದೀರಿ, ಮುಂದಿನ ದಿನಮಾನಗಳಲ್ಲಿ ನವಗ್ರಾಮದಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆ, ಅಸ್ಪತ್ರೆ ಸೇರಿದಂತೆ ಸಕಲ ಮೂಲ ಸೌಲಭ್ಯಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ಕಾರಣ ಎಲ್ಲರೂ ನವಗ್ರಾಮಕ್ಕೆ ಬಂದು ನೆಲೆಸಬೇಕು ಎಂದರು.
ತಹಶೀಲ್ದಾರ್ ಶರಣಮ್ಮ ಕಾರಿ ಮಾತನಾಡಿ, ಈಗಾಗಲೇ ಹಾನಿಗೊಂಡಿರುವ ಪ್ರತಿ ಮನೆಗಳಿಗೆ ಪರಿಹಾರವಾಗಿ 10 ಸಾವಿರ ಪರಿಹಾರ ಧನದ ಚೆಕ್ ನೀಡಲಾಗುತ್ತಿದ್ದು, ಸಂತ್ರಸ್ತರು ಪರಿಹಾರದ ಹಣ ಸದುಪಯೋಗಪಡಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬಿದ್ದ ಮನೆಗಳ ಹಾಗೂ ಹಾಳಾದ ಬೆಳೆಗಳ ಸರ್ವೇ ನಡೆಸಿ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಎಸ್.ಜಿ.ಸಲಗೇರಿ, ರೋಣ ಹಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶೆ ವಿ.ನಾಗಮಣಿ, ಜಿಪಂ ಸದಸ್ಯ ಪಡಿಯಪ್ಪ ಪೂಜಾರ, ಬಸವರಾಜ ಅಂಗಡಿ, ಕಂದಾಯ ನಿರೀಕ್ಷಕ ರವೀಂದ್ರ ಬಾರಕೇರ, ಪಿಎಸ್‌ಐ ಎಲ್.ಕೆ.ಜೂಲಕಟ್ಟಿ, ಮಂಜುನಾಥ ಗಣಿ, ಅಡಿಯಪ್ಪ ಮೇಟಿ, ಬಸವರಾಜ ಗಿರತಮ್ಮನ್ನವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.