ದಕ್ಷತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸಲಹೆ
Team Udayavani, Apr 22, 2019, 2:54 PM IST
ಗದಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.23ರಂದು ನಡೆಯುವ ಮತದಾನ ಕುರಿತಂತೆ ರೋಣ ವಿಧಾನಸಭೆ ಕ್ಷೇತ್ರದ ಮಸ್ಟರಿಂಗ್ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ರವಿವಾರ ಭೇಟಿ ನೀಡಿದರು.
ಲೋಕಸಭೆ ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳು ಹಾಗೂ ಕಾರ್ಯ ನಿರ್ವಹಣೆ ಮಹತ್ವದ್ದಾಗಿದ್ದು, ಜವಾಬ್ದಾರಿಯಿಂದ ಕಾರ್ಯನಿರ್ವಸಹಿಸಬೇಕು. ಚುನಾವಣೆ ಆಯೋಗದ ನಿರ್ದೇಶನದಂತೆ ತಮಗೆ ವಹಿಸಿದ ಎಲ್ಲ ಕಾರ್ಯ ದಕ್ಷತೆಯಿಂದ ನಿರ್ವಹಿಸಲು ಮತ್ತು ಸಕಾಲಕ್ಕೆ ಮತದಾನದ ವರದಿ ಸಂಗ್ರಹಿಸಿ ಸಲ್ಲಿಸಬೇಕು ಎಂದು ಸೂಚಿಸಿದರು.
ಮಸ್ಟರಿಂಗ್ ಕೇಂದ್ರದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಹಾಜರಾತಿ, ವಿದ್ಯುನ್ಮಾನ ಯಂತ್ರ ಹಾಗೂ ಮತದಾನ ಸಾಮಗ್ರಿ ಸುರಕ್ಷತೆಯೊಂದಿಗೆ ಸೂಚಿತ ವಾಹನದಲ್ಲಿ ಮತಗಟ್ಟೆ ಅಧಿಕಾರಿಗಳು ತೆರಳುವಂತೆ ನೋಡಿಕೊಳ್ಳಬೇಕು. ಮತಗಟ್ಟೆಗಳಲ್ಲಿ ಅಗತ್ಯ ಸುರಕ್ಷತಾ ಸಿಬ್ಬಂದಿ ಆಗಮಿಸಿದ ಕುರಿತು ಮತದಾನ ಪೂರ್ವಭಾವಿ ಸಿದ್ಧತೆ ಅಗತ್ಯದ ಹೆಚ್ಚುವರಿ ಸಿಬ್ಬಂದಿ ಕುರಿತು ವರದಿ ನೀಡಬೇಕು. ಸೂಕ್ಷ್ಮ ವೀಕ್ಷಕರಿಗೆ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಪ್ರತಿ ಎರಡು ಗಂಟೆಗೊಮ್ಮೆ ಮತದಾನ ಪ್ರಮಾಣ ಕುರಿತು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಮಾಹಿತಿ ನೀಡಬೇಕು. ಮತದಾನ ನಂತರ ಪ್ರತಿ ಮತಗಟ್ಟೆ ಮತಯಂತ್ರಗಳ ಸೀಲ್ ಮಾಡಿದ್ದನ್ನು ಖಚಿತಪಡಿಸಿಕೊಂಡು ಡಿ. ಮಸ್ಟರಿಂಗ್ ಕ್ಷೇತ್ರಕ್ಕೆ ಸುರಕ್ಷಿತವಾಗಿ ತಲುಪಿಸಲು ಕ್ರಮ ಜರುಗಿಸಬೇಕು. ಮತದಾನದ ಎಲ್ಲ ಲಕೋಟೆಗಳ ಸರಿ ನಿರ್ವಹಣೆ ಕುರಿತು ಖಚಿತಪಡಿಸಿಕೊಳ್ಳಬೇಕು. ಪ್ರಜಾಪ್ರತಿನಿಧಿ ಕಾಯ್ದೆಯಡಿ ಸಂಬಂಧಿತ ಸೆಕ್ಟರ್ ಅಧಿಕಾರಿಗಳು ತಮಗೆ ವಹಿಸಿಕೊಟ್ಟ ಜವಾಬ್ದಾರಿ ದಕ್ಷತೆಯಿಂದ ನಿರ್ವಹಿಸುವಂತೆ ತಿಳಿಸಿದರು.
ಹಾವೇರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರೋಣ ವಿಧಾನಸಭೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಡಿ. ಪ್ರಾಣೇಶರಾವ್, ರೋಣ ತಹಶೀಲ್ದಾರ್ ಶರಣಮ್ಮ ಕಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.