ಭಯ ಬೇಡ, ಎಚ್ಚರವಿರಲಿ
Team Udayavani, May 15, 2020, 2:25 PM IST
ಗದಗ: ಕೋವಿಡ್ ರೋಗದ ಬಗ್ಗೆ ಆತಂಕಗೊಳ್ಳದೇ, ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಸತೀಶ ಬಸರೀಗಿಡದ ಹೇಳಿದ್ದಾರೆ.
ಸಾರ್ವಜನಿಕರು ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತಿ ಮುಖ್ಯವಾಗಿದೆ. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ಕೈಯನ್ನು ಆಗಾಗ ತೊಳೆದುಕೊಳ್ಳಬೇಕು. ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪ್ರಾಣಿಗಳ ನೇರ ಸಂಪರ್ಕ ಹಾಗೂ ಬೇಯಿಸದ, ಕಚ್ಚಾ ಮಾಂಸ ಸೇವನೆಯನ್ನು ಮಾಡಬಾರದು. ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು. ಶಂಕಿತ ರೋಗಿಯ ಮನೆಯಲ್ಲೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಉಸಿರಾಟದ ತೊಂದರೆಯಾದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಅಸುರಕ್ಷಿತವಲ್ಲದ ಕಾಡುಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟಬಾರದು. ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.