ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ
ಜನರು ನಮ್ಮ ಸಂವಿಧಾನಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ.
Team Udayavani, Oct 28, 2021, 9:28 PM IST
ಗದಗ: ಪ್ರಬಲ ಮತ್ತು ಮುಂದುವರಿದ ಜಾತಿಗಳ ಜನರಿಗೆ ಪ್ರವರ್ಗ 2ಎ ಮೀಸಲಾತಿ ನೀಡಿದರೆ ಹಿಂದುಳಿದ ಪಟ್ಟಿಯಲ್ಲಿರುವ ಜಾತಿಯವರಿಗೆ ಅಸ್ತಿತ್ವವೇ ಇಲ್ಲದಂತಾಗುತ್ತದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ 197 ಜಾತಿಗಳ ಜನರು ಜಾಗೃತರಾಗಬೇಕು. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಕರೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಜಾತಿಗಳ ಜನರು ತಮ್ಮ ಹಕ್ಕುಗಳಿಗಾಗಿ ಯಾವತ್ತೂ ಹೋರಾಡಿದವರಲ್ಲ. ಹಿಂದುಳಿದ ವರ್ಗಗಳ ಜನರು ಮುಗ್ಧರು. ಹೀಗಾಗಿ ಮುಂದುವರಿದ ಜಾತಿ ಸಮುದಾಯಗಳ
ಜನರು ನಮ್ಮ ಸಂವಿಧಾನಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಹಿಂದುಳಿದವರ ಪರವಾಗಿ ಸದನದಲ್ಲಿ ಧ್ವನಿ ಎತ್ತಲು ನಿರೀಕ್ಷಿತ ಸಂಖ್ಯೆಯಲ್ಲಿ ನಮ್ಮ ಸಮುದಾಯಗಳ ಶಾಸಕರಿಲ್ಲ. ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಹಿಂದುಳಿದ ಜಾತಿಗಳ ನಾಯಕರಿಗೂ ಪ್ರಬಲ ಜಾತಿಗಳ ವಿರುದ್ಧ ಮಾತನಾಡುವ ಶಕ್ತಿ ಇಲ್ಲ ಎಂದು ಅಸಹಾಯಕತೆ ತೋಡಿಕೊಂಡರು.
ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬಹುದು ಎಂದು ಸಂವಿಧಾನದಲ್ಲಿ ಉಲ್ಲೇಖೀಸಿದೆ. ಇದನ್ನೇ ನೆಪವಾಗಿಕೊಟ್ಟುಕೊಂಡು ಬೆಂಗಳೂರು ಭಾಗದಲ್ಲಿ ಒಕ್ಕಲಿಗರು, ಬಲಿಜ ಮತ್ತಿತರೆ ಸಮುದಾಯಗಳು ಹಾಗೂ ಉತ್ತರ ಕರ್ನಾಟಕದ ಪ್ರಬಲರಾಗಿರುವ ಲಿಂಗಾಯತ ಸಮುದಾಯಗಳೂ ತಮ್ಮ ರಾಜಕೀಯ ಶಕ್ತಿ ಬಳಸಿ 2ಎ ಮೀಸಲಾತಿ ಪಡೆದುಕೊಂಡಿದ್ದಾರೆ ಎಂದರು.
ಅದರ ಮುಂದುವರಿದ ಭಾಗವಾಗಿ ವೀರೈಶವ ಲಿಂಗಾಯತದ ಹಲವು ಉಪಜಾತಿಗಳು ಹಿಂದುಳಿದ ವರ್ಗಗಳ 2ಎ ಮೀಸಲಾತಿಗಾಗಿ ಒತ್ತಾಯಿಸುತ್ತಿವೆ. ಅವರ ಮನವಿಯನ್ನು ಪುರಸ್ಕರಿಸುವುದು ಮತ್ತು ತಿರಸ್ಕರಿಸುವುದು ಹಿಂದುಳಿದ ವರ್ಗಗಳ ಆಯೋಗದ
ವಿವೇಚನೆಗೆ ಬಿಟ್ಟಿದ್ದು. ಆದರೆ, ಪ್ರತಿಯೊಂದು ಜಾತಿಯವರೂ 2ಎ ಮೀಸಲಾತಿಯನ್ನೇ ಕೇಳುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.
ಜಾತಿವಾರು ವರದಿ ಬಿಡುಗಡೆ ಮಾಡಿ: ರಾಜ್ಯದಲ್ಲಿ 1931ರ ನಂತರ ಜಾತಿವಾರು ಸ್ಥಿತಿಗತಿ ಕುರಿತ ಅಧ್ಯಯನ ಸಮೀಕ್ಷೆಗಳು ನಡೆದಿಲ್ಲ. ಹೀಗಾಗಿ ಸಿದ್ದರಾಮಯ್ಯ ಸರಕಾರ 170 ಕೋಟಿ ರೂ. ಖರ್ಚುಮಾಡಿ ಕಾಂತರಾಜ ಅವರ ನೇತೃತ್ವದಲ್ಲಿ 1.60 ಲಕ್ಷ ನೌಕರರು ಶ್ರಮಿಸಿ ವರದಿಯನ್ನು ತಯಾರಿಸಿದ್ದಾರೆ. ಅದನ್ನು ಪುರಸ್ಕರಿಸುವುದು, ತಿರಸ್ಕರಿಸುವುದು ಸರಕಾರದ ತೀರ್ಮಾನಕ್ಕೆ ಬಿಟ್ಟಿರುತ್ತದೆ. ಪ್ರಾಥಮಿಕವಾಗಿ ಅದನ್ನು ಪರಿಶೀಲಿಸಬೇಕು ಎಂದರು.
ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: 197 ಜಾತಿಗಳಿಗೆ ಸಂಬಂಧಿಸಿದ ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಈ ವರ್ಷ 80 ಕೋಟಿ ಘೋಷಿಸಿದ್ದು, ಅದರಲ್ಲಿ ಕೇವಲ 20 ಕೋಟಿ ಬಿಡುಗಡೆಯಾಗಿದ್ದು, ನಿಗಮ ಸಿಬ್ಬಂದಿಗಳ ವೇತನಕ್ಕೆ ಸಾಲದು. ಆದರೆ, ಇತ್ತೀಚೆಗೆ ರಚನೆಯಾದ ಒಕ್ಕಲಿಗರ ಅಭಿವೃದ್ಧಿ ನಿಗಮ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ತಲಾ 500 ಕೋಟಿ ರೂ. ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಿದೆ ಎಂದು ದೂರಿದ ಅವರು, ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ ಕನಿಷ್ಟ 2 ಸಾವಿರ ಕೋಟಿ ರೂ. ನೀಡಬೇಕು ಎಂದು ಒತ್ತಾಯಿಸಿದರು. ಆರ್.ಡಿ. ಕಡ್ಲಿಕೊಪ್ಪ, ಬಸವರಾಜ ಬಲಸಗುಂಡಿ, ಹರೀಶ ಪೂಜಾರ, ಪ್ರಕಾಶ ಬೊಮ್ಮನಹಳ್ಳಿ, ಬಿ.ಎನ್. ಯರನಾಳ ಇದ್ದರು.
ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ನ. 10ರಂದು ಜಿಲ್ಲಾ ಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಮತ್ತು ಮಾಜಿ ಹಿಂದುಳಿದ ಜಾತಿಗಳ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕೆ.ಎಂ. ರಾಮಚಂದ್ರಪ್ಪ, ಹಿಂದುಳಿದ ವರ್ಗಗಳ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.