ಬೇಡ-ಜಂಗಮರಿಗೆ ಎಸ್‌ಸಿ ಪ್ರಮಾಣ ಪತ್ರ ನೀಡದಿರಿ
Team Udayavani, Jul 13, 2019, 4:36 PM IST
ಲಕ್ಷ್ಮೇಶ್ವರ: ಬೇಡ, ಜಂಗಮ ಜನಾಂಗದವರಿಗೆ ಎಸ್‌ಸಿ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದ ಅಂಬೇಡ್ಕರ್ ಸೇನೆ ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪುರಸಭೆ ಸದಸ್ಯ ರಾಮಣ್ಣ ಗಡದವರ ಮತ್ತು ಸುರೇಶ ಬೀರಣ್ಣವರ ಮಾತನಾಡಿ, ಅಖಂಡ ಧಾರವಾಡ ಜಿಲ್ಲೆಯಲ್ಲಿ ಮೂಲ ಎಸ್‌ಸಿ ಜನಾಂಗದವರನ್ನು ಹೊರತುಪಡಿಸಿ ಬೇರೆ ಯಾರೂ ಈ ಜಾತಿಯ ಪ್ರಮಾಣ ಪತ್ರ ಪಡೆದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಬೇಡ ಜಂಗಮರು ಎಸ್‌ಸಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಒಂದೊಮ್ಮೆ ಈ ಪ್ರಮಾಣ ಪತ್ರ ನೀಡಿದ್ದರೆ ಅದನ್ನು ಅಸಿಂಧುಗೊಳಿಸಬೇಕು. ನಿಜವಾದ ಎಸ್‌ಸಿ ಜನಾಂಗದವರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು ದಲಿತಪರ ಸಂಘಟನೆಗಳು ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಎಚ್ಚರಿಸಿದರು.
ಹುಲ್ಲೇಶ ಗಡದವರ, ಬಸವರಾಜ ಹಿರೇಮನಿ, ಪೃಥ್ವಿರಾಜ ನಂದೆಣ್ಣವರ, ಸದಾಶಿವ ನಂದೆಣ್ಣವರ, ಮಂಜುನಾಥ ಗಡದವರ, ಮಂಜುನಾಥ ಅಯ್ಯಣ್ಣವರ, ಪ್ರಕಾಶ ಹಿತ್ತಲಮನಿ, ಸುರೇಶ ಬೀರಣ್ಣವರ, ವಿಶ್ವ ಭಜಕ್ಕನವರ, ಶಿವಾನಂದ ಅಡಗಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.