ಡಾ|ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ಪ್ರಶಸ್ತಿಗೆ ಡಾ|ಎಸ್.ಎಂ ಜಾಮದಾರ ಆಯ್ಕೆ
Team Udayavani, Oct 15, 2023, 5:24 PM IST
ಗದಗ: ನಗರದ ಜಗದ್ಗುರು ತೋಂಟದಾರ್ಯ ಮಠದ ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಶಿವಾನುಭವ ಮಂಟಪದಲ್ಲಿ ಲಿಂ. ಡಾ| ತೋಂಟದ ಸಿದ್ಧಲಿಂಗ ಶ್ರೀಗಳ 5ನೇ ಪುಣ್ಯಸ್ಮರಣೆ, ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮವನ್ನು ಅ. 25ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟರ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡಾ| ಎಸ್.ಎಂ. ಜಾಮದಾರ ಅವರಿಗೆ ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ಗ್ರಂಥಗಳ ಬಿಡುಗಡೆ ಮತ್ತು ಶಾಲಾ ಕೊಠಡಿಗೆ ಶಂಕುಸ್ಥಾಪನೆ ನೆರವೇರಲಿದೆ ಎಂದು ಹೇಳಿದರು.
ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ| ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಕಾನೂನು, ಸಂಸದೀಯ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಅವರು ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡುವರು. ಪ್ರಶಸ್ತಿ ಮೊತ್ತ 5 ಲಕ್ಷ ರೂ. ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದರು.
ಮುಂಡರಗಿ-ಬೈಲೂರು ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ಆಳಂದದ ಸಿದ್ಧಲಿಂಗ ಮಹಾಸ್ವಾಮಿಗಳ ಅನುಭವ ಮಂಟಪದ ಕೋರಣೇಶ್ವರ ಮಹಾಸ್ವಾಮಿಗಳು, ಶಿರೋಳ ತೋಂಟದಾರ್ಯ ಮಠದ ಗುರುಬಸವ ಮಹಾಸ್ವಾಮಿಗಳು, ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಮಹಾಸ್ವಾಮಿಗಳು, ಸಂಡೂರು ವಿರಕ್ತಮಠದ ಪ್ರಭು ಮಹಾಸ್ವಾಮಿಗಳು, ಅರಸಿಕೆರೆಯ ಶಾಂತಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳು, ಬಸವಕಲ್ಯಾಣದ ಶಿವಾನಂದ ಮಹಾಸ್ವಾಮಿಗಳು, ಯಶವಂತನಗರದ ಗಂಗಾಧರ ಮಹಾಸ್ವಾಮಿಗಳು ಹಾಗೂ ಹರ-ಗುರು-ಚರಮೂರ್ತಿಗಳು ಸಮ್ಮುಖ ವಹಿಸುವರು ಎಂದು ಹೇಳಿದರು.
ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಸಿ.ಸಿ. ಪಾಟೀಲ, ಜಿ.ಎಸ್. ಪಾಟೀಲ, ಡಾ| ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಮಾಜಿ ಶಾಸಕರಾದ ಕಳಕಪ್ಪ ಬಂಡಿ, ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡಮನಿ ಪಾಲ್ಗೊಳ್ಳುವರು.
ತೋಂಟದ ಶ್ರೀಗಳ ಕುರಿತಾದ `ಕರುಣಾಮಯಿ’, `ಮಾತೃಹೃದಯಿ’ ಹಾಗೂ ವಚನ ಸಾಹಿತ್ಯ ಅಧ್ಯಯನಗಳ ಸಮೀಕ್ಷೆ, ಲಿಂಗಾಯತ ಧರ್ಮದ ತತ್ವ ಸಿದ್ಧಾಂತ, ಕನ್ನಡ ಸಾಹಿತ್ಯದಲ್ಲಿ ಸತ್ಯೇಂದ್ರ ಚೋಳ ಎಂಬ ಗ್ರಂಥಗಳು ಕಾರ್ಯಕ್ರಮದಲ್ಲಿ ಬಿಡುಗಡೆಗೊಳ್ಳಲಿವೆ. ಜೊತೆಗೆ ಪಾಲಾ-ಬದಾಮಿ ರಸ್ತೆಗೆ ಹೊಂದಿಕೊಂಡಿರುವ ಸಂಸ್ಥೆಯ ನಿವೇಶನದನಲ್ಲಿ ಜಗದ್ಗುರು ತೋಂಟದಾರ್ಯ ಪ್ರೌಢಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಲಿದೆ ಎಂದು ಆಡಳಿತಾಧಿಕಾರಿ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ತೋಂಟದಾರ್ಯ ಜಾತ್ರಾ ಸಮಿತಿ ಅಧ್ಯಕ್ಷ ಡಾ| ಎಸ್.ಬಿ. ಶೆಟ್ಟರ್, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ಅಮರೇಶ ಅಂಗಡಿ, ಕೊಟ್ರೇಶ ಮೆಣಸಿನಕಾಯಿ, ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಮಂಜುನಾಥ ಕೊಟ್ನೆಕಲ್, ಸಂತೋಷ ಕಬಾಡರ, ಅಶೋಕ ಹಾದಿ, ಉಮೇಶ ನಾಲವಾಡದ ಇದ್ದರು.
ಶ್ರೀಗಳ ಹೆಸರಿನಲ್ಲಿ ಕಸಾಪ ದತ್ತಿನಿಧಿ ಪುರಸ್ಕಾರ
ಕನ್ನಡದ ಕುಲಗುರುಗಳೆಂದೇ ಖ್ಯಾತರಾಗಿದ್ದ ಡಾ| ತೋಂಟದ ಸಿದ್ಧಲಿಂಗ ಶ್ರೀಗಳ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಕವಿಗಳು-ಕಲಾವಿದರು ಹಾಗೂ ಸಾಧಕರಿಗೆ ಪ್ರತಿ ವರ್ಷ ಪುರಸ್ಕಾರ ನೀಡಲು ದತ್ತಿನಿಧಿಯನ್ನು ಸ್ಥಾಪಿಸಲು ಡಾ| ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸಮಿತಿಯವರು ಒಪ್ಪಿಕೊಂಡಿದ್ದು, ಮುಂದಿನ ವರ್ಷದಿಂದ ಡಾ| ತೋಂಟದ ಸಿದ್ಧಲಿಂಗ ಶ್ರೀಗಳ ಹೆಸರಿನಲ್ಲಿ 10 ಸಾವಿರ ರೂ. ಮೊತ್ತ ದತ್ತಿನಿಧಿ ಪ್ರಶಸ್ತಿಯನ್ನು ಸಾಧಕರಿಗೆ ಕೊಡಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಶಿವಾನುಭವ ಸಮಿತಿ ಚೇರಮನ್ ವಿವೇಕಾನಂದಗೌಡ ಪಾಟೀಲ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.