ಒಳಚರಂಡಿ ಕಾಮಗಾರಿ: ಹೆಚ್ಚಿದ ಕಿರಿಕಿರಿ

•3 ವರ್ಷದಿಂದ ನಡೆಯುತ್ತಿರುವ ಕೆಲಸ •ಮರು ಡಾಂಬರೀಕರಣ ಕಳಪೆ

Team Udayavani, May 26, 2019, 11:24 AM IST

gadaga-tdy-3..

ಲಕ್ಷ್ಮೇಶ್ವರ: ರಸ್ತೆಯುದ್ದಕ್ಕೂ ಬಿದ್ದಿರುವ ತಗ್ಗುಗಳು.

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಕಳೆದ 3 ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯಿಂದಾಗಿ ಪಟ್ಟಣದ ಬಹುತೇಕ ರಸ್ತೆಗಳ ಸ್ಥಿತಿ ಅಯೋಮಯವಾಗಿದ್ದು ನಿತ್ಯವೂ ಒಂದಿಲ್ಲೊಂದು ಅವಘಡಗಳಿಗೆ ಕಾರಣವಾಗುತ್ತಿವೆ.

ಪಟ್ಟಣದ ಮುಖ್ಯ ಬಜಾರ್‌ ರಸ್ತೆಯಲ್ಲಿ 2 ದಿನಗಳ ಹಿಂದೆಯಷ್ಟೇ ಕಾಮಗಾರಿಗಾಗಿ ಅಗೆದಿದ್ದ ರಸ್ತೆಯ ಮರು ಡಾಂಬರೀಕರಣ ಮಾಡಲಾಗಿತ್ತು. ಆದರೆ ಶನಿವಾರ ಬೆಳ್ಳಂಬೆಳಗ್ಗೆ ಈ ರಸ್ತೆಯ ಬಹುತೇಕ ಕಡೆ ಕುಸಿದು ಬಿದ್ದು ಪುರಸಭೆಯ ಟ್ರ್ಯಾಕ್ಟರ್‌ ಸಿಲುಕಿಕೊಂಡಿತ್ತು. ಇದನ್ನು ಮೇಲೆತ್ತಲು ಬಂದ ಜೆಸಿಬಿಯೂ ಸಿಲುಕಿಕೊಂಡು ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಸಂಚಾರಕ್ಕೆ ಅಡಚಣೆಯುಂಟಾಯಿತು. ಅಲ್ಲದೇ ಪಟ್ಟಣಕ್ಕೆ ನಿತ್ಯ ಸಿಮೆಂಟ್, ಗೊಬ್ಬರ, ದಿನಸಿ, ತರಕಾರಿ ಇನ್ನಿತರ ಸರಕು ವಾಹನಗಳು ರಸ್ತೆಯಲ್ಲಿ ಸಿಲುಕಿ ಪರದಾಡುವ ಸ್ಥಿತಿ ಸಾಮಾನ್ಯವಾಗಿದೆ.

ನಿನ್ನೆಯಷ್ಟೇ ಪಟ್ಟಣದ ಮಾನ್ವಿಯರ ಪೆಟ್ರೋಲ್ ಬಂಕ್‌ ಹತ್ತಿರ ಟ್ರಕ್‌ವೊಂದು ಸಿಲುಕಿ ಇದನ್ನು ಹೊರ ತೆಗೆಯಲು ಜೆಸಿಬಿ, ಕ್ರೇನ್‌ ಬಳಸಲಾಯಿತು. ಒಟ್ಟಿನಲ್ಲಿ ಒಳಚರಂಡಿ ಕಾಮಗಾರಿಯಿಂದ ಸಾಕಷ್ಟು ಆವಾಂತರ,ಅಧ್ವಾನ ನಡೆಯುತ್ತಲೇ ಇವೆ. ಇದರಿಂದ ರೋಸಿ ಹೋಗಿರುವ ಪಟ್ಟಣದ ವ್ಯಾಪಾರಸ್ಥರ ಸಂಘದವರು ಶನಿವಾರ ತುರ್ತು ಪತ್ರಿಕಾಗೋಷ್ಠಿ ಕರೆದು ಒಳಚರಂಡಿಯ ಕಳಪೆ ಕಾಮಗಾರಿ ಅಧಿಕಾರಿಗಳ ಬೇಜವಾಬ್ದಾರಿ, ಪುರಸಭೆ ಮತ್ತು ಜನಪ್ರತಿಧಿನಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಆರ್‌.ಆರ್‌. ಬಾಳೇಹಳ್ಳಿಮಠ, ಉಪಾಧ್ಯಕ್ಷ ಅಶೋಕ ಬಟಗುರ್ಕಿ ಮಾತನಾಡಿ, ಕಳೆದ 3 ವರ್ಷಗಳಿಂದ ಪಟ್ಟಣದಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿಯಿಂದ ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳ ಜನರಿಗೆ ಸಾಕಷ್ಟು ತೊಂದರೆಯಾಗಿದ್ದರೂ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿಪಡಿಸಬಾರದು ಎಂದು ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿಕೊಂಡ ಅಧಿಕಾರಿಗಳು ಜನತೆಯ ಸಹನೆಯನ್ನು ಕೆಣಕುತ್ತಿದ್ದಾರೆ. ಗುತ್ತಿಗೆದಾರರು ಅಗೆದ ರಸ್ತೆಗಳನ್ನು ಬೇಕಾಬಿಟ್ಟಿ ಮಾಡಿದ್ದಾರೆ ಮತ್ತು ಮಾಡಿರುವ ಕಾಮಗಾರಿಯೂ ಕಳಪೆಯಾಗಿದ್ದು ಅಧಿಕಾರಿಗಳು ಕಣ್ಮುಚ್ಚಿ ಕುಳಿತ್ತಿದ್ದರೆ ಪುರಸಭೆಯವರು ಇದು ತಮಗೆ ಸಂಬಂಧಿಸಿದ್ದೇ ಅಲ್ಲ ಎಂಬ ಮನೋಭಾವನೆಯಲ್ಲಿ ತಾತ್ಸಾರ ಮಾಡುತ್ತಿದ್ದಾರೆ.

ಜನರ ಸೈರಣೆಗೂ ಒಂದು ಮಿತಿಯಿದ್ದು ಇದುವರೆಗೂ ಮೂಕವೇದನೆ ಅನುಭವಿಸಿರುವ ಎಲ್ಲರೂ ಇನ್ನೂ ಸುಮ್ಮನ್ನಿದ್ದರೆ ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿಸಿ ಕೈ ತೊಳೆದುಕೊಳ್ಳಲಿದ್ದಾರೆ. ನಂತರ ನಾವು ಯಾರನ್ನು ಪ್ರಶ್ನಿಸಬೇಕು ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ವಾರದೊಳಗಾಗಿ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಒಳಚರಂಡಿ ಯೋಜನೆಯ ಹಿರಿಯ ಅಧಿಕಾರಿಗಳೊಂದಿಗೆ ಕಾಮಗಾರಿ ಪರಿಶೀಲಿಸಿ ಮುಂದಾಗುವ ತೊಂದರೆಗಳ ಗಮನ ಹರಿಸದಿದ್ದರೆ ಪಕ್ಷಾತೀತವಾಗಿ ಸಾರ್ವಜನಿಕರು ಮತ್ತು ಸಂಘಟನೆಗಳೊಡಗೂಡಿ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಸಿದ್ದಾರೆ. ಮಾಲತೇಶ ಅಗಡಿ, ಶಕ್ತಿ ಕತ್ತಿ, ಮಹೇಶ ಹುಲಬಜಾರ್‌, ಗುರು ಬಾಳೇಹಳ್ಳಿಮಠ, ಮಾಣಿಕ ಶೇಟ, ಮಂಜಣ್ಣ ಸವಣೂರ, ಬಸಣ್ಣ ಮಹಾಂತಶೆಟ್ಟರ, ಭರತಣ್ಣ ಬರಿಗಾಲಿ, ವಿ.ಎಸ್‌. ಬಾಳೇಹಳ್ಳಿಮಠ ಇದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.