ಜೈನ್‌ ಇಂಟರ್‌ ಕ್ಯಾಂಪ್‌ ಪಂದ್ಯಾವಳಿಗೆ ಚಾಲನೆ

ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ: ಬಾಗಮಾರ ಸೇವಾ ಸಮಿತಿ ಅಧ್ಯಕ್ಷ ಅಶೋಕ ಬಾಗಮಾರ

Team Udayavani, May 26, 2022, 2:35 PM IST

14

ಗಜೇಂದ್ರಗಡ: ಕ್ರಿಕೆಟ್‌ ಇಡೀ ವಿಶ್ವವನ್ನು ಆಕರ್ಷಿಸುವ ಕ್ರೀಡೆಯಾಗಿದೆ. ಯುವಕರು ಕ್ರೀಡೆಯಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆ ವಿನಃ, ನೆಮ್ಮದಿ ಕದಡುವಂತೆ ಮಾಡಿಕೊಳ್ಳಬಾರದು. ಈ ನಿಟ್ಟಿನಲ್ಲಿ ಯುವ ಪೀಳಿಗೆ ದೇಶದ ಕ್ರೀಡಾ ಶಕ್ತಿ ಎತ್ತಿ ಹಿಡಿಯುವ ಮೂಲಕ ಜಗತ್ತಿನೆಲ್ಲೆಡೆ ಭಾರತದ ಕೀರ್ತಿ ಪತಾಕೆ ಹಾರಿಸುವಂತಾಗಲಿ ಎಂದು ಬಾಗಮಾರ ಸೇವಾ ಸಮಿತಿ ಅಧ್ಯಕ್ಷ ಅಶೋಕ ಬಾಗಮಾರ ಹೇಳಿದರು.

ಪಟ್ಟಣದ ಭಗವಾನ ಮಹಾವೀರ ಜೈನ್‌ ಆರ್ಯುವೇದಿಕ ಮೆಡಿಕಲ್‌ ಕಾಲೇಜು ಮೈದಾನದಲ್ಲಿ ಗಜೇಂದ್ರಗಡ ನ್ಪೋರ್ಟ್ಸ್ ಅಕಾಡೆಮಿ ವತಿಯಿಂದ ನಡೆದ ಅಂಡರ್‌ 16-ಮಹಾವೀರ ಜೈನ್‌ ಇಂಟರ್‌ ಕ್ಯಾಂಪ್‌ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಭಾರತ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗೈದು ಎಲ್ಲ ರಾಷ್ಟ್ರಗಳನ್ನು ಮೀರಿ ವಿಶ್ವ ಮಟ್ಟದಲ್ಲಿ ಅಗ್ರ ಸ್ಥಾನಕ್ಕೆರಲು ಪ್ರತಿಯೊಬ್ಬ ಭಾರತೀಯನ ಪ್ರೋತ್ಸಾಹ ಅಗತ್ಯವಾಗಿದೆ. ಈ ದಿಸೆಯಲ್ಲಿ ಕ್ರೀಡಾಕೂಟಗಳು ಎಲ್ಲೆಡೆ ಹೆಚ್ಚೆಚ್ಚು ನಡೆಯುತ್ತಿವೆ. ಪ್ರಸಕ್ತ ಭಾರತದ ಕ್ರೀಡಾ ರಂಗ ಉನ್ನತ ಮಟ್ಟಕ್ಕೇರುವ ನಿಟ್ಟಿನಲ್ಲಿ ಎಲ್ಲ ಹಂತದಲ್ಲೂ ಉತ್ತಮ ಸಾಧನೆ ಮಾಡುತ್ತಿದೆ. ವಿಶ್ವದ ಹಲವಾರು ರಾಷ್ಟ್ರಗಳು ಕ್ರೀಡಾ ಕ್ಷೇತ್ರದಲ್ಲಿ ಬಲಿಷ್ಠವಾಗಿವೆ. ಅಂಥ ರಾಷ್ಟ್ರಗಳನ್ನು ಹಿಮ್ಮೆಟಿಸಿ ಭಾರತ ಮುನ್ನಗ್ಗುತ್ತಿದೆ ಎಂದರು.

ಭಗವಾನ್‌ ಮಹಾವೀರ ಜೈನ್‌ ಆಯುರ್ವೆàದಿಕ್‌ ಮೆಡಿಕಲ್‌ ಕಾಲೇಜು ಕಾರ್ಯದರ್ಶಿ ಅಜೀತ ಬಾಗಮಾರ ಮಾತನಾಡಿ, ಮುಂದಿನ ದಿನಗಳಲ್ಲಿ ವಿಶ್ವ ಮಟ್ಟದ ಯುವ ರಾಷ್ಟ್ರವೆಂದು ಪರಿಗಣಿಸಲಾಗುತ್ತಿರುವ ಭಾರತದ ಯುವ ಜನರ ದೈಹಿಕ ಬೆಳವಣಿಗೆಯನ್ನು ವೃದ್ಧಿಗೊಳಿಸಿ, ಅವರಲ್ಲಿ ಚೈತನ್ಯ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಹೆಚ್ಚೆಚ್ಚು ಕ್ರೀಡೆಗಳನ್ನು ಏರ್ಪಡಿಸುವ ಅಗತ್ಯತೆಯಿದೆ. ಯುವ ಜನತೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವೂ ಇದೆ. ಅವರಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಸೌಲಭ್ಯಗಳನ್ನು ಒದಗಿಸಿದಲ್ಲಿ ಮಾತ್ರ ಭವಿಷ್ಯದ ಭಾರತವನ್ನು ಶಕ್ತಿಶಾಲಿಯಾಗಿ ನಿರ್ಮಿಸಬಹುದು. ಪ್ರಸ್ತುತ ದಿನಮಾನಗಳಲ್ಲಿ ಬೌದ್ಧಿಕ ಬೆಳವಣಿಗೆಯಲ್ಲಿ ಅಪಾರ ಸಾಧನೆ ಮಾಡಿರುವುದನ್ನು ಕಾಣುತ್ತಿರುವ ಬೆನ್ನಲ್ಲೇ ಅದಕ್ಕೆ ಹೆಚ್ಚಿನ ಜನ ಮಾನಸಿಕ ಒತ್ತಡ ಹಾಗೂ ದೈಹಿಕ ತೊಂದರೆಗಳಿಂದ ಬಳಲುತ್ತಿರುವುದು ಕಳವಳಕಾರಿ ಎಂದರು.

ಯುವಕರು ಕ್ರೀಡೆಯನ್ನು ಟೈಂಪಾಸ್‌ ಚಟುವಟಿಕೆಯನ್ನಾಗಿ ಸ್ವೀಕರಿಸದೇ, ಬದುಕಿನ ಅವಿಭಾಜ್ಯ ಅಂಗವೆಂದು ತಿಳಿಯಬೇಕು. ಅಂದಾಗ ಮಾತ್ರ ಏನನ್ನಾದರೂ ಸಾಧನೆಗೈಯಲು ಸಾಧ್ಯವಾಗುತ್ತದೆ. ಇದೇ ಮೊದಲ ಬಾರಿಗೆ ಅಂಡರ್‌ 16 ಕ್ರಿಕೆಟ್‌ ಪಂದ್ಯಾವಳಿ ನಡೆಸುವ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಈ ವೇಳೆ ಅಭಿನಂದನ ಪಾಟೀಲ, ಎ.ಡಿ.ಕೋಲಕಾರ, ರವಿ ಗಡೇದವರ, ಕೆ.ಕೆ. ಸರಕಾವಸ ಇತರರಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.