ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ
Team Udayavani, Jul 13, 2021, 8:43 PM IST
ಗಜೇಂದ್ರಗಡ: ರಸ್ತೆ ಅಗಲೀಕರಣಕ್ಕಾಗಿ ಮರಗಳನ್ನು ನಾಶಮಾಡುವ ಬದಲು ಬುಡಸಮೇತ ಮರ ಸ್ಥಳಾಂತರಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಸೋಮವಾರ ಚಾಲನೆ ನೀಡಿದೆ.
ರಾಮಾಪುರ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯದಲ್ಲಿನ 52 ಬೃಹತ್ ಅರಳಿ, ಆಲ ಮತ್ತು ಹತ್ತಿ ಮರಗಳು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಕತ್ತರಿಸಲಾಗುತ್ತಿತ್ತು. ಅದನ್ನು ತಪ್ಪಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಮರಗಳ ಸ್ಥಳಾಂತರಕ್ಕೆ ಮುಂದಾಗಿದ್ದು, ಈಗಾಗಲೇ ಮರಗಳ ಸ್ಥಳಾಂತರ ಕಾರ್ಯ ಪ್ರಾರಂಭಿಸಲಾಗಿದೆ.
ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ ಎಚ್. ಸುದ್ದಿಗಾರರೊಂದಿಗೆ ಮಾತನಾಡಿ, ಗಜೇಂದ್ರಗಡದಲ್ಲಿ ಪ್ರಾರಂಭವಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಮೃದ್ಧವಾಗಿ ಬೆಳೆದಿರುವ ಮರಗಳು ನಾಶವಾಗುತ್ತಿದ್ದವು. ಶಾಸಕರು ಮತ್ತು ಸ್ಥಳೀಯ ಆಡಳಿತ ಸಹಕಾರದಿಂದ ಪಟ್ಟಣದ ಗುಡ್ಡದ ಕೆಳಭಾಗದಲ್ಲಿನ ಕೆರೆಯಲ್ಲಿ ಮರ ಸ್ಥಳಾಂತರಿಸಲು ಅವಕಾಶ ದೊರೆತಿದೆ. ಹೀಗಾಗಿ 48 ಮರಗಳ ಸ್ಥಳಾಂತರ ಕಾರ್ಯಾಚರಣೆ ಆರಂಭವಾಗಿದೆ.
ಮರಗಳ ಸ್ಥಳಾಂತರಕ್ಕೆ ಕ್ರೇನ್, ಹಿಟ್ಯಾಚಿ, ಜೆಸಿಬಿ ಮತ್ತು ಲಾರಿಗಳ ಬಳಕೆ ಮಾಡಲಾಗುತ್ತಿದೆ. ಈಗಾಗಲೇ ಕೆರೆಯಲ್ಲಿ ಮರಗಳ ಸ್ಥಳಾಂತರಕ್ಕೆ ಗುಂಡಿ ತೋಡಲಾಗಿದ್ದು, ಮರಗಳ ಬೇರುಗಳಿಗೆ ತೊಂದರೆಯಾದಂತೆ ಕೊಂಡೊಯ್ಯಲಾಗುತ್ತಿದೆ ಎಂದರು. ಸ್ಥಳಕ್ಕೆ ಶಾಸಕರ ಭೇಟಿ: ಪಟ್ಟಣದ ಗುಡ್ಡದ ಕೆಳಭಾಗದಲ್ಲಿರುವ ಮರಗಳ ಸ್ಥಳಾಂತರ ಪ್ರದೇಶಕ್ಕೆ ಶಾಸಕ ಕಳಕಪ್ಪ ಬಂಡಿ ಭೇಟಿ ನೀಡಿ, ಪರಿಶೀಲಿಸಿ, ಮರಗಳ ಪುನರ್ ಸ್ಥಾಪನೆಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.
ಈ ವೇಳೆ ವಲಯ ಅರಣ್ಯಾ ಧಿಕಾರಿ ರಾಜು ಗೋಂಧಕರ, ಅರಣ್ಯಾಧಿ ಕಾರಿ ಅನ್ವರ್ ಕೊಲ್ಹಾರ, ತಾಪಂ ಇಒ ಸಂತೋಷ ಪಾಟೀಲ, ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.