ಕಾಂಗ್ರೆಸ್‌ನಿಂದ ಔಷಧ ಕಿಟ್ ವಿತರಣೆ
ದಿ|ರಾಜೀವ ಗಾಂಧಿ ಪುಣ್ಯಸ್ಮರಣೆ ಪ್ರಯುಕ್ತ ಮಾಜಿ ಶಾಸಕ ಜಿ.ಎಸ್.ಪಾಟೀಲರಿಂದ ಮಾತ್ರೆ ಕೊಡುಗೆ
Team Udayavani, May 23, 2021, 6:23 PM IST
ಗಜೇಂದ್ರಗಡ: ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಮಾರ್ಗಸೂಚಿಗಳು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರದ ಪರಿಣಾಮ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ, ಜನರ ನೆರವಿಗೆ ಕಾಂಗ್ರೆಸ್ ಧಾವಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಗಾರಗಿ ಹೇಳಿದರು.
ಸಮೀಪದ ಗೋಗೇರಿ ಗ್ರಾಮದಲ್ಲಿ ದಿ|ರಾಜೀವ ಗಾಂಧಿ ಅವರ ಪುಣ್ಯಸ್ಮರಣೆ ಪ್ರಯುಕ್ತ ಮಾಜಿ ಶಾಸಕ ಜಿ.ಎಸ್.ಪಾಟೀಲ ಅವರ ವತಿಯಿಂದ ಮತಕ್ಷೇತ್ರದಲ್ಲಿ ನೀಡಲಾಗುತ್ತಿರುವ ಔಷ ಧಗಳನ್ನು ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಮರಣ ಮೃದಂಗ ಬಾರಿಸುತ್ತಿದೆ. ಸೊಂಕಿತರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಬಡ ರೋಗಿಗಳು ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಬಡವರ ನೆರವಿಗೆ ಧಾವಿಸುವಲ್ಲಿ ವಿಫಲವಾಗಿದೆ. ಕೋವಿಡ್ ವ್ಯಾಕ್ಸಿನ್ ನೀಡುವಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ನೆರವು ಸಿಗುತ್ತಿಲ್ಲ. ರಾಜ್ಯದ ಸಂಸದರು ಮೌನಕ್ಕೆ ಶರಣಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ಸಮರೋಪಾದಿಯಲ್ಲಿ ಬಡವರಿಗೆ ನೆರವು ನೀಡಲಾಗುತ್ತಿದೆ ಎಂದರು.
ನ್ಯಾಯವಾದಿ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಪಿಡುಗನ್ನು ಪಕ್ಷಾತೀತವಾಗಿ ಎದುರಿಸಬೇಕಿದೆ. ಆದರೆ, ಸರ್ಕಾರದ ನಿಲುವುಗಳು ಮಾರಕವಾಗಿವೆ. ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಮತಕ್ಷೇತ್ರದಲ್ಲಿ ಮಾಜಿ ಶಾಸಕ ಜಿ.ಎಸ್.ಪಾಟೀಲ ಅವರು ಔಷಧ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ. ಆದರೆ ಆಡಳಿತ ಪಕ್ಷ ಬಡವರ ಕಷ್ಟ ಆಲಿಸದಿರುವುದು ನಾಚಿಕೆಗೇಡಿನ ಸಂಗತಿ ಎಂದರು. ಇದೇ ವೇಳೆ ಗ್ರಾಮದ ಬಡ ರೋಗಿಗಳಿಗೆ ಔಷ ಧಗಳ ಕಿಟ್‌ಗಳನ್ನು ವಿತರಿಸಲಾಯಿತು. ಇಮಾಮಸಾಬ ಬಾಗವಾನ, ಕಂಟೆಪ್ಪ ಮಾದರ, ಐ.ಎಚ್.ಬಾಗವಾನ, ಮಲ್ಲಪ್ಪ ಭೋಸಲೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.