17 ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ
ವಿಧಾನಸಭಾ ಕ್ಷೇತ್ರವಾರು ನಾಲ್ಕೈದು ಶಾಲೆಗಳ ಆಯ್ಕೆ ಜೂನ್ 1ರಿಂದ ಪ್ರವೇಶಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ
Team Udayavani, May 10, 2019, 2:12 PM IST
ಗದಗ: ಎಸ್.ಎಂ. ಕೃಷ್ಣಾ ನಗರದ ಆಶ್ರಯ ಕಾಲೋನಿಯಲ್ಲಿ ಉದ್ದೇಶಿತ ಸರಕಾರಿ ಆಂಗ್ಲ ಮಾಧ್ಯಮ ಶಾಲೆ
ಗದಗ: ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಬೇಕು. ಸರಕಾರಿ ಶಾಲೆ ಮಕ್ಕಳೂ ಇಂಗ್ಲಿಷ್ ಕಲಿಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುತ್ತಿದ್ದು, ಜಿಲ್ಲೆಯ 17 ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳು ತಲೆ ಎತ್ತಲಿವೆ. ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ದುಬಾರಿ ಶುಲ್ಕ, ಡೊನೇಷನ್ ತೆರಲಾಗದೇ ಅನೇಕರು ಅನಿವಾರ್ಯವಾಗಿ ಕನ್ನಡ ಮಾಧ್ಯಮಕ್ಕೆ ಸೇರಿಸುತ್ತಿದ್ದರು. ಇನ್ನೂ, ಕೆಲ ಬಡವರು ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಮಹದಾಸೆ ಹೊಂದಿದ್ದರೂ ಆರ್ಥಿಕ ಸಮಸ್ಯೆಯಿಂದ ತಮ್ಮ ಕನಸು ಕೈಬಿಡುವಂತಾಗಿತ್ತು. ಅಂಥವರ ಕನಸು ನನಸಾಗಿಲು ರಾಜ್ಯ ಸರಕಾರವೇ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿದೆ. ಸರಕಾರದ ನಿರ್ಧಾರದಿಂದಾಗಿ ಪ್ರಸಕ್ತ ಸಾಲಿನಿಂದಲೇ ಜಿಲ್ಲೆಯ 17 ಇಂಗ್ಲಿಷ್ ಮಾಧ್ಯಮ ಶಾಲೆಗಳು ಬಾಗಿಲು ತೆರೆಯಲಿದ್ದು, ಅದಕ್ಕಾಗಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ನಡೆಸಿದ್ದಾರೆ.
ಎಲ್ಲೆಲ್ಲಿ ಇಂಗ್ಲಿಷ್ ಶಾಲೆಗಳು?: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರವಾರು ನಾಲ್ಕೈದು ಶಾಲೆಗಳಂತೆ ಒಟ್ಟು 17 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಗದಗ ಶಹರ ವಲಯದ ಗದಗಿನ ಆಶ್ರಯ ಕಾಲೋನಿ ಶಾಲೆ ನಂ.12, ಗದಗ ಗ್ರಾಮೀಣ ವಲಯದ ನಾಗಾವಿ, ಮುಳಗುಂದ, ಸೊರಟೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭವಾಗಿದೆ. ನರಗುಂದ ವಲಯದ ನರಗುಂದ ಪಟ್ಟಣದ ಶಾಲೆ ನಂ.1, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಣಸಿಕಟ್ಟಿ, ಚಿಕ್ಕನರಗುಂದ, ಬನಹಟ್ಟಿ, ಮುಂಡರಗಿ ವಲಯದ ಚಿಕ್ಕವಡ್ಡಟ್ಟಿ, ಡೋಣಿ ಹಾಗೂ ರೋಣ ವಲಯದ ದಿಂಡೂರ, ರೋಣ, ಮುಶಿಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅಣಿಯಾಗಲಿವೆ. ಶಿರಹಟ್ಟಿ ವಲಯದಲ್ಲಿ ಕಡಕೋಳ, ಮ್ಯಾಗೇರಿ, ಬೆಳ್ಳಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಚಬ್ಬಿ ಆರ್‌ಎಂಎಸ್‌ಎ ಶಾಲಾ ಆವರಣದಲ್ಲಿ ನೂತನವಾಗಿ 1ನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳು ಜೂ.1 ರಿಂದ ಪ್ರವೇಶ ಪ್ರಕ್ರಿಯೆ ಆರಂಭಗೊಳ್ಳಲಿವೆ.
ಶಿಕ್ಷಕರಿಗೆ ವಿಶೇಷ ತರಬೇತಿ: ಇದೇ ಮೊದಲ ಬಾರಿಗೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಆಯಾ ಶಾಲೆ ಶಿಕ್ಷಕಕರೊಬ್ಬರಿಗೆ ಈ ಕುರಿತು ತರಬೇತಿ ನೀಡಲಾಗುತ್ತಿದೆ. 1ನೇ ತರಗತಿ ಮಗುವಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲು ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಡಯಟ್ ಮೂಲಕ ಜಿಲ್ಲೆಯ 6 ಜನ ಶಿಕ್ಷಕರ ತಂಡವೊಂದನ್ನು ತರಬೇತಿಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಅವರು ಹಿಂದುರುಗಿದ ಬಳಿಕ ಮೇ 13ರಿಂದ ಜಿಲ್ಲೆಯ 17 ಉದ್ದೇಶಿತ ಇಂಗ್ಲಿಷ್ ಶಾಲೆಗಳ ಶಿಕ್ಷಕರಿಗೆ ತರಬೇತಿ ಕೊಡಿಸಲಾಗುತ್ತಿದೆ ಎಂದು ಇಲಾಖೆಗಳ ಮೂಲಗಳು ತಿಳಿಸಿವೆ.
ಶಾಲೆಗಳ ಆಯ್ಕೆ ಮಾನದಂಡವೇನು?: ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆಗಳು ಎಂದರೆ ವಿವಿಧ ಕಾರಣಗಳಿಂದಾಗಿ ಮಾರು ದೂರ ಹೋಗುವವರೇ ಹೆಚ್ಚು. ಆದರೂ, ಕಳೆದ ಎರಡ್ಮೂರು ವರ್ಷಗಳಿಂದ 1ನೇ ತರಗತಿಗೆ ಕನಿಷ್ಠ 30 ಮಕ್ಕಳು ದಾಖಲಾತಿ ಇರಬೇಕು. ಶಾಲೆಯಲ್ಲಿ ಸುಸಜ್ಜಿತ ಕಟ್ಟಡ, ಮೂಲ ಸೌಕರ್ಯ ಹೊಂದಿರಬೇಕು. ಅಂತಹ ಶಾಲೆಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಶಾಲೆ ಆರಂಭಿಸಲಾಗುತ್ತಿದೆ. ಅದರೊಂದಿಗೆ ಇಂಗ್ಲಿಷ್ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಸುಣ್ಣ- ಬಣ್ಣದೊಂದಿಗೆ ಶಾಲೆಯನ್ನು ಸಿದ್ಧಗೊಳಿಸುವಂತೆ ಆಯಾ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎನ್ನಲಾಗಿದೆ.
•ವೀರೇಂದ್ರ ನಾಗಲದಿನ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.