ಟೊಮೆಟೊ ಬೆಲೆ ಗಗನಕ್ಕೆ: ಗ್ರಾಹಕರ ಜೇಬಿಗೆ ಕತ್ತರಿ
Team Udayavani, May 22, 2019, 1:01 PM IST
ಗಜೇಂದ್ರಗಡ: ವಾರದ ಸಂತೆಯಲ್ಲಿ ಟೊಮೆಟೊ ಮಾರಾಟಕ್ಕಿಟ್ಟಿರುವುದು.
ಗಜೇಂದ್ರಗಡ: ಪಟ್ಟಣದ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಕಳೆದೊಂದು ವಾರದಿಂದ ನಿರಂತರವಾಗಿ ಹೆಚ್ಚಾಗುತ್ತಿದೆ. ಕಳೆದ ಹಂಗಾಮಿನಲ್ಲಿ ಟೊಮೆಟೊ ಬೆಳೆದ ನೇಗಿಲ ಯೋಗಿಗೆ ಲಾಭವಾಗದೇ ಕಣ್ಣೀರಧಾರೆ ಹರಿಸಿತ್ತು. ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಅದೇ ಟೊಮೆಟೊ ಬೆಲೆ ಮೂರಂಕಿ ತಲುಪುವ ಹಂತಕ್ಕೆ ಬಂದಿದೆ.
ಕಳೆದ ಏಪ್ರಿಲ್ ಮತ್ತು ಮೇ ತಿಂಗಳ ಮೊದಲ ವಾರದಲ್ಲಿ ಕೆಜಿಗೆ 30ರಿಂದ 40 ಇತ್ತು. ಆದರೀಗ ಟೊಮೆಟೊ ಬೆಲೆ ಹೆಚ್ಚಾಗುತ್ತಲೇ ಇದ್ದು, ಕೆಜಿಗೆ 60 ರಿಂದ 70ಕ್ಕೆ ಏರಿಕೆಯಾಗಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಕಂಗೆಡಿಸಿದೆ.
ಮಳೆ ಕೊರತೆಯೇ ಕಾರಣ: ಸತತ ಮಳೆಯ ಕೊರತೆಯಿಂದಾಗಿ ಬೋರ್‌ವೆಲ್ಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾದ ಪರಿಣಾಮ ಬೋರ್‌ವೆಲ್ ಆಶ್ರಿತ ಜಮೀನುಗಳಲ್ಲಿ ಬೆಳೆದ ಟೊಮೆಟೊ ಇಳುವರಿ ಕುಸಿದೆ. ಈ ಬಾರಿ ಮುಂಗಾರು ಪ್ರವೇಶದಲ್ಲಿ ವಿಳಂಬವಾಗಲಿದೆ ಎನ್ನುವ ಹವಾಮಾನ ಇಲಾಖೆಯ ವರದಿ ಅನ್ನದಾತರ ನಿದ್ದೆಗೆಡಿಸಿದೆ.
ಕೊಳ್ಳಲು ಗ್ರಾಹಕರ ಹಿಂದೇಟು:
ನೀರಿನ ಸಮಸ್ಯೆಯಿಂದ ಇಳುವರಿ ಕುಂಠಿತಗೊಂಡಿದೆ. ಬಿಸಿಲಿನ ಪ್ರತಾಪಕ್ಕೆ ಟೊಮೆಟೊ ಗಿಡಗಳು ಒಣಗುತ್ತಿವೆ. ಹೀಗಾಗಿ ಕಡಿಮೆ ದರದಲ್ಲಿ ತರಕಾರಿ ಸಿಗುವುದೇ ಕಷ್ಟ ಸಾಧ್ಯವಾಗಿದೆ. ಆದ್ದರಿಂದ ತರಕಾರಿ ಖರೀದಿಗೆ ಬರುವ ಗ್ರಾಹಕರು ಇಷ್ಟೊಂದು ದರವಾ ಎಂದು ಪ್ರಶ್ನಿಸುತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಟೊಮೆಟೊ ಸೇರಿ ಇನ್ನಿತರ ತರಕಾರಿ ಕೊಳ್ಳಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.
ಆಹಾರ ಪದಾರ್ಥಗಳ ತಯಾರಿಕೆಗೆ ಟೊಮೆಟೊ ಅಗತ್ಯವಾಗಿರುವುದರಿಂದ ಜನರು ಸ್ವಲ್ಪ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.