ಗದಗ: ಮಗನಿಂದಲೇ ತಂದೆಯ ಬರ್ಬರ ಹತ್ಯೆ
Team Udayavani, Aug 17, 2022, 8:53 PM IST
ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಮಗನಿಂದಲೇ ತಂದೆಯ ಬರ್ಬರ ಹತ್ಯೆ ನಡೆದಿರುವ ಘಟನೆ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಹುಲಕೊಟಿ ಗ್ರಾಮದ 58 ವರ್ಷದ ಗಣೇಶ ಅಡಿವೆಪ್ಪ ಚಿಕ್ಕನಟ್ಟಿ ಕೊಲೆಯಾದವರು. ವಿಜಯ ಗಣೇಶ ಚಿಕ್ಕನಟ್ಟಿ ಕೊಲೆ ಮಾಡಿದ ಮಗ. ಕಳೆದ ಕೆಲ ವರ್ಷಗಳಿಂದ ಗಣೇಶ ಚಿಕ್ಕನಟ್ಟಿ, ಹೆಂಡತಿ ಹಾಗೂ ಮಗನಿಗೆ ನಿತ್ಯ ಕಿರುಕುಳ ನೀಡಿ, ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ತಿಳಿದು ಬಂದಿದೆ.
ಎಂದಿನಂತೆ ತಂದೆ ಗಣೇಶ ಮನೆಯಲ್ಲಿ ತಾಯಿಗೆ ಕಿರುಕುಳ ನೀಡುತ್ತಿದ್ದನ್ನು ಗಮನಿಸಿದ ಮಗ, ತಂದೆ ಮಲಗಿರುವ ವೇಳೆ ಕೊಡಲಿಯಿಂದ ಬಲವಾಗಿ ಕುತ್ತಿಗೆಗೆ ಹೊಡೆದಿದ್ದಾನೆ. ಪರಿಣಾಮ ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆ ನಂತರ ವಿಜಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ.
ಇದನ್ನೂ ಓದಿ:ವಾಟ್ಸ್ಆ್ಯಪ್ನಲ್ಲಿ ಹೊಸ ಫೀಚರ್ ಬಿಡುಗಡೆ: “ಅನ್ಡು’ ಆಯ್ಕೆ
ಘಟನಾ ಸ್ಥಳಕ್ಕೆ ಎಸ್ಪಿ ಶಿವಪ್ರಕಾಶ ದೇವರಜು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿ ವಿಜಯ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗದಗ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಚಂದ್ರಶೇಖರ ಹರಿಹರ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.