ರೈತರ ಚಿತ್ತ ನವಿಲುತೀರ್ಥ ಜಲಾಶಯದತ್ತ

•2054 ಅಡಿ ನೀರು ಸಂಗ್ರಹ •ಉತ್ತಮ ಮಳೆಯಾದರೆ ಒಳ ಹರಿವು ಹೆಚ್ಚಳ

Team Udayavani, Jul 15, 2019, 10:21 AM IST

gadaga-tdy-3..

ನರಗುಂದ: ತುಂತುರು ಮಳೆಯಿಂದ ಕೆಲ ಭಾಗದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆಯುತ್ತಿದೆ.

ನರಗುಂದ: ಪ್ರಸಕ್ತ ಮುಂಗಾರು ಹಂಗಾಮು ಅವಧಿಯಲ್ಲಿ ತಾಲೂಕಿನಲ್ಲಿ ಮಳೆ ಕೊರತೆ ಕಾಣಿಸಿಕೊಂಡರೂ ಮಲಪ್ರಭೆ ಉಗಮ ಪ್ರದೇಶವಾದ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದರಿಂದ ನವಿಲುತೀರ್ಥ ಜಲಾಶಯ ನೀರಿನ ಮಟ್ಟ ಏರಿಕೆ ತಾಲೂಕಿನ ರೈತರಲ್ಲಿ ಆಶಾಕಿರಣ ಮೂಡಿಸಿದೆ.

ಮಲಪ್ರಭೆ ಮೇಲ್ಮಟ್ಟದ ದಟ್ಟ ಪ್ರದೇಶದಲ್ಲಿ ಸಕಾಲದಲ್ಲಿ ಮಳೆ ಸುರಿಯುತ್ತಿದ್ದರಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಲ್ಲಿ ಮುಂಗಾರು ಆಸೆ ಚಿಗುರಿಸಿದೆ. ಸುರಿಯುವ ಮಳೆ ಜೀವನಾಡಿ ಮಲಪ್ರಭೆ ಒಡಲು ತುಂಬಿಸಬಹುದು ಎಂಬ ಮಹದಾಸೆ ಇಲ್ಲಿನ ಅನ್ನದಾತರಲ್ಲಿ ಭರವಸೆ ಚಿಗುರೊಡೆಯುತ್ತಿದೆ.

ಪ್ರಸಕ್ತ ಮುಂಗಾರು ಸಹ ಕೈ ಕೊಡಬಹುದೇನೋ ಎಂಬ ಆತಂಕದಲ್ಲಿದ್ದ ತಾಲೂಕಿನ ರೈತರಿಗೆ ಕಳೆದ ಮೂರು ದಿನಗಳ ಮುಂಗಾರು ವಾತಾವರಣ ಅದರಲ್ಲೂ ಮಲಪ್ರಭೆ ಒಡಲು ನೀರಿಕ್ಷೆಗೂ ಮೀರಿ ತುಂಬಿ ಹರಿದು ಅಧಿಕ ನೀರು ನವಿಲುತೀರ್ಥ ಜಲಾಶಯ ಅಂಗಳಕ್ಕೆ ಬರುತ್ತಿರುವುದು ರೈತರ ಸಂತಸ ಇಮ್ಮಡಿಗೊಳಿಸಿದೆ.

ನೀರಿನ ಮಟ್ಟ: ರವಿವಾರ ನವಿಲುತೀರ್ಥ ಜಲಾಶಯ ಮಟ್ಟ ಏರಿಕೆಯಾಗಿದೆ.2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಇಂದಿಗೆ 2054.10 ಅಡಿ ನೀರು ಸಂಗ್ರಹವಾಗಿದೆ. 6796 ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಮಳೆ ವಾತಾವರಣ ಮೂಡಿದ್ದರಿಂದ ಜಲಾಶಯಕ್ಕೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. ಕಳೆದ 3 ವರ್ಷ ಸತತ ಮುಂಗಾರು ವೈಪಲ್ಯ ರೈತರನ್ನು ಕಾಡಿತ್ತು.

ಆದರೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮೇಲೆ ಅಪಾರ ವಿಶ್ವಾಸದಿಂದ ತೇವಾಂಶ ಇಲ್ಲದೇ ಇದ್ದರೂ ದೇವರ ಮೇಲೆ ಭಾರ ಹಾಕಿ ಭೂಮಿಗೆ ಬೀಜ ಹಾಕಿ ಕುಳಿತ ರೈತನಿಗೆ ಜಲಾಶಯ ಮಟ್ಟ ಏರಿಕೆ ಹರ್ಷದಾಯಕವಾಗಿದೆ. ಆದರೆ ಮಳೆ ಕೊರತೆ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ಗ್ರಾಮ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಇನ್ನೂ ಚಾಲನೆ ಸಿಕ್ಕಿಲ್ಲ್ಲ ಎಂಬ ಕೊರಗೂ ಇದೆ.

ಒಟ್ಟಾರೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜೀವನಾಡಿ ಮಲಪ್ರಭೆ ಜಲಾಶಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ನೀರು ಹರಿದು ಬರುತ್ತಿರುವುದು ಆಶಾದಾಯಕ ವಾತಾವರಣ ಮೂಡಿಸಿದೆ.

•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.