ರೈತರೇ ಕಾಲುವೆ ಗೇಟ್ ತೆರೆದು ನೀರು ಬಿಟ್ರಾ
Team Udayavani, Sep 12, 2018, 4:07 PM IST
ಮುಂಡರಗಿ: ತುಂಗಭದ್ರಾ ಜಲಾಶಯ ಭರ್ತಿಯಾಗಿ ಹರಿಯುತ್ತಿದ್ದರೂ ಶಿಂಗಟಾಲೂರ ಏತ ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ತೇವಾಂಶ ಕೊರತೆಯಿಂದಾಗಿ ಬೆಳೆಗಳು ಒಣಗುತ್ತಿವೆ ಎಂದು ಅಧಿಕಾರಿಗಳ ವಿರುದ್ಧ ಡಂಬಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಡಂಬಳ ಗ್ರಾಮಸ್ಥರು ಡೋಣಿ ಗ್ರಾಮದಿಂದ ಗದಗ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಶಿಂಗಟಾಲೂರ ಏತ ನೀರಾವರಿ ಯೋಜನೆಯ 3ನೇ ಕಾಲುವೆ ಮೂಲಕ ಡಂಬಳದ ವಿಕ್ಟೋರಿಯಾ ಮಹಾರಾಣಿ ಕೆರೆಗೆ ಸಮರ್ಪಕವಾಗಿ ನೀರು ಸರಬರಾಜು ಆಗುತ್ತಿಲ್ಲ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ, ಯುವ ಮುಖಂಡ ಗೋಣಿಬಸಪ್ಪ ಕೊರ್ಲಹಳ್ಳಿ ನೇತೃತ್ವದಲ್ಲಿ ಹಲವು ರೈತರು ಮಂಗಳವಾರ ಕಾಲುವೆಗೆ ತೆರಳಿ ಗೇಟನ್ನು ತಿರುಗಿಸಿ ಡಂಬಳ ಕೆರೆಗೆ ನೀರನ್ನು ಬಿಟ್ಟರು.
ಬೆಳೆಗಳು ತೇವಾಂಶ ಕೊರತೆಯಿಂದ ಒಣಗುತ್ತಿವೆ. ಹದಿನೈದು ದಿನಗಳಿಂದ ಅಧಿಕಾರಿಗಳಿಗೆ ಡಂಬಳ ಕೆರೆಗೆ ನೀರು ಭರ್ತಿ ಮಾಡಿ ಎಂದು ದೂರವಾಣಿ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ಗದಗ ನಗರಕ್ಕೆ ಮಾತ್ರ ನೀರು ಪೂರೈಕೆಯಾದರೆ ನಾವು ಬದುಕುವುದು ಹೇಗೆ. ಕೆರೆ ಖಾಲಿಯಾಗುತ್ತಿದೆ. ತುಂಗಭದ್ರಾ ಜಲಾಶಯದಲ್ಲಿ ನೀರು ಇದ್ದರೂ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಅಧಿಕಾರಿಗಳು ನಿರ್ಲಕ್ಷ್ಯತನದಿಂದ ಬೆಳೆಗಳು ಒಣಗುತ್ತಿವೆ. ಮೂರು ಸಾವಿರ ಏಕರೆ ನೀರಾವರಿ ಪ್ರದೇಶಕ್ಕೆ ಅನುಕೂಲವಾಗುವ ಬೃಹತ್ ಕೆರೆ ಇದ್ದು, ಇದನ್ನು ನಂಬಿ ರೈತರು ಸಾವಿರಾರೂ ರೂಪಾಯಿಗಳ ಮಾಡಿ ಸಾಲ ಬಿತ್ತನೆ ಮಾಡಿದ್ದಾರೆ. ಒಂದು ವೇಳೆ ನಮ್ಮೂರ ಕೆರೆಗೆ ನೀರು ಸಮರ್ಪಕವಾಗಿ ಸಂಗ್ರಹವಾಗದೆ ಹೋದರೆ ಎಲ್ಲ ರೈತರು ಸೇರಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಯುವ ಮುಖಂಡ ಗೋಣಿಬಸಪ್ಪ ಕೋರ್ಲಹಳ್ಳಿ, ಜಿಪಂ ಮಾಜಿ ಉಪಾಧ್ಯಕ್ಷ ಬೀರಪ್ಪ ಬಂಡಿ ಕರೆ ನೀಡಿದರು. ನಂತರ ಉಪಹಶೀಲ್ದಾರ್ ಡಿ.ಟಿ. ವಾಲ್ಮೀಕಿ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಪಂ ಅಧ್ಯಕ್ಷ ಬಸವರಾಜ ಎಂ. ಗಂಗಾವತಿ, ಹಿರಿಯರಾದ ಜಿ.ವಿ. ಹಿರೇಮಠ, ವೈ.ಎಚ್. ತಳವಾರ, ರೈತ ಮುಖಂಡರಾದ ವೀರೂಪಾಕ್ಷಪ್ಪ ಯಲಿಗಾರ, ಶೇಖಪ್ಪ ಗೋಡಿ, ಶೇಖಪ್ಪ ಕೊಂತಿಕೊಲ್ಲ, ಮಲ್ಲಪ್ಪ ಕರಡ್ಡಿ, ರೇವಣಸಿದ್ದಪ್ಪ ಕರಿಗಾರ, ರುದ್ರಪ್ಪ ಕೊರ್ಲಗಟ್ಟಿ, ಕುಮಾರಡ್ಡಿ ಪ್ಯಾಟಿ, ರವಿ ತಾರಿಕೊಪ್ಪ ಸೇರಿದಂತೆ ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.