ಕಿವುಡು ಸರ್ಕಾರಗಳೆದುರು ಮೂಕ ವೇದನೆ
•ಮಹದಾಯಿ ಚಳವಳಿಗೆ ನಾಲ್ಕು ವರ್ಷ•ಇಂದು ಐದನೇ ವರ್ಷಕ್ಕೆ ದಾಪುಗಾಲು •ಕೈಕಟ್ಟಿ ಕುಳಿತ ಸರ್ಕಾರಗಳು
Team Udayavani, Jul 16, 2019, 10:14 AM IST
ನರಗುಂದ: 2017ರಲ್ಲಿ ಮಹದಾಯಿ ಜೀವಜಲಕ್ಕಾಗಿ ನರಗುಂದ ಹೋರಾಟ ವೇದಿಕೆಯಲ್ಲಿ ಸೇರಿದ್ದ ಜನಸ್ತೋಮ.
ನರಗುಂದ: ಕುಡಿಯುವ ನೀರಿಗಾಗಿ ನಡೆಯುತ್ತಿರುವ ಮಹದಾಯಿ ಮತ್ತು ಕಳಸಾ-ಬಂಡೂರಿ ಚಳವಳಿ ನಾಲ್ಕು ವರ್ಷ ಪೂರೈಸಿದೆ. ನ್ಯಾಯಾಧೀಕರಣ ಹಂಚಿಕೆ ಮಾಡಿದರೂ ಮಲಪ್ರಭೆಯ ಒಡಲು ತುಂಬದ ಮಹದಾಯಿ. ಕಿವುಡು ಸರ್ಕಾರಗಳೆದುರು ಮೂಕ ವೇದನೆಯೊಂದಿಗೆ ಮಲಪ್ರಭೆ ಮಕ್ಕಳ ಕೂಗು 5ನೇ ವರ್ಷಕ್ಕೆ ದಾಪುಗಾಲು ಇಡುತ್ತಿದೆ.
ಐದು ದಶಕಗಳ ಬೇಡಿಕೆಯ ಮಹದಾಯಿ ಮಲಪ್ರಭೆ ಜೋಡಣೆಗೆ 2015 ಜು.16ರಂದು ವಿವಿಧ ಸಂಘಟನೆಗಳೊಂದಿಗೆ ರೈತ ಸೇನಾ-ಕರ್ನಾಟಕ ಪಟ್ಟಣದ ಹೆದ್ದಾರಿ ಬದಿಗಿರುವ ಹುತಾತ್ಮ ರೈತ ದಿ.ಈರಪ್ಪ ಕಡ್ಲಿಕೊಪ್ಪರ ವೀರಗಲ್ಲಿನ ಎದುರು ವೇದಿಕೆ ನಿರ್ಮಿಸಿ ನಿರಂತರ ಚಳವಳಿ ಪ್ರಾರಂಭಿಸಿತು.
ಮಹದಾಯಿ ನದಿಯಲ್ಲಿ ರಾಜ್ಯದ ಪಾಲು, ಕಳಸಾ-ಬಂಡೂರಿ ನಾಲೆಗಳ 7.56 ಟಿಎಂಸಿ ಅಡಿ ನೀರಿನ ಬೇಡಿಕೆಯೊಂದಿಗೆ ಬೆರಳೆಣಿಕೆ ರೈತರಿಂದ ಚಾಲನೆ ಪಡೆದ ಈ ಹೋರಾಟದ ಮಹತ್ವ, ಉದ್ದೇಶ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಜಾಗೃತಿ ಮೂಡಿಸಿತು. ದಿನದಿಂದ ದಿನಕ್ಕೆ ಕಾವು ಪಡೆದು ದಿನ ಕಳೆದಂತೆ ಮಣ್ಣಿನ ಮಕ್ಕಳು ಸಮರೋಪಾದಿಯಲ್ಲಿ ಸಾಗಿಬಂದು ಹೋರಾಟದ ಸ್ವರೂಪವನ್ನೇ ಬದಲಿಸಿದ್ದು ದಾಖಲಾರ್ಹ ಚಳವಳಿ ಎನಿಸಿಕೊಂಡಿತು.
ಜನಾಂದೋಲನ ಸ್ವರೂಪ: ಚಳವಳಿ ಗಂಭೀರವಾದಂತೆ ರೈತರ ಕೂಗಿಗೆ ಎಚ್ಚೆತ್ತ ಕ್ಷೇತ್ರದ ಹಾಲಿ ಶಾಸಕ ಸಿ.ಸಿ. ಪಾಟೀಲ, ಮಾಜಿ ಶಾಸಕ ಬಿ.ಆರ್.ಯಾವಗಲ್ಲ ಜಂಟಿಯಾಗಿ ವೇದಿಕೆಯೇರಿ ರೈತ ಸಮುದಾಯಕ್ಕೆ ನೈತಿಕ ಬೆಂಬಲ ನೀಡಿದ್ದರಿಂದ ಚಳವಳಿ ಜನಾಂದೋಲನ ಸ್ವರೂಪ ಪಡೆಯಿತು.
ಚಳವಳಿ ಬಿರುಗಾಳಿ: ಹೋರಾಟ ಕಾವು ಪಡೆಯುತ್ತಿದ್ದಂತೆ ಅತ್ತ ನವಲಗುಂದ, ರಾಮದುರ್ಗ, ಸವದತ್ತಿ, ಅಣ್ಣಿಗೇರಿ, ಬೈಲಹೊಂಗಲ, ಹುಬ್ಬಳ್ಳಿ, ಧಾರವಾಡಗಳಲ್ಲೂ ವೇದಿಕೆ ಹುಟ್ಟಿಕೊಂಡವು. ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ತುಪ್ಪವಾದ ಹೋರಾಟ ವೇದಿಕೆಗಳು ಕೆಲವೆಡೆ ಸಂಪನ್ನವಾದರೂ ಬಂಡಾಯ ನಾಡು ಖ್ಯಾತಿಯ ನರಗುಂದ ವೇದಿಕೆ ಮಾತ್ರ 4 ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದ ಹೋರಾಟದ ಹಾದಿ ಸ್ಮರಣೀಯ.
‘ಪಕ್ಷಾತೀತ ಹೋರಾಟ’ ಎಂಬ ಹಣೆಪಟ್ಟಿ ಕಟ್ಟಿಕೊಂಡು ನಾಡಿನ ಎಲ್ಲ ರಾಜಕೀಯ ಪಕ್ಷಗಳು, ಕನ್ನಡಪರ, ರೈತಪರ ನೂರಾರು ಸಂಘಟನೆಗಳು, ನಾಡಿನಾದ್ಯಂತ ಮಠಾಧಿಧೀ ಶರ ಬೆಂಬಲ ಪಡೆದು ಏಳು, ಬೀಳುಗಳ ಮಧ್ಯೆ ಚಳವಳಿ ನರಗುಂದ ಇತಿಹಾಸದಲ್ಲೇ ಕಂಡರಿಯದ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದು ಗಮನಾರ್ಹ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳ ರೈತ ವಿರೋಧಿ ನೀತಿಗೆ ಈ ಹೋರಾಟ ಇಂದಿಗೂ ಸಾಕ್ಷಿಯಾಗಿ ನಿಂತಿದೆ.
ನೀರಿನ ಪ್ರತಿಪಾದನೆ: ಹೋರಾಟ ಬಲಗೊಳ್ಳುತ್ತಿದ್ದಂತೆ ಮಲಪ್ರಭೆ ಮಕ್ಕಳ ಕೂಗು ದೇಶವ್ಯಾಪಿ ಪಸರಿಸಿ ರಾಜಕೀಯ ಪಕ್ಷಗಳಿಗೆ ಮುಳುವಾಗತೊಡಗಿತು. ಹೋರಾಟ ಹತ್ತಿಕ್ಕುವ ಷಡ್ಯಂತ್ರಗಳನ್ನು ಮೆಟ್ಟಿನಿಂತು ಜೀವಜಲಕ್ಕಾಗಿ ನಡೆದ ಚಳವಳಿ ದೇಶದ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿದೆ.
ವರ್ಷದುದ್ದಕ್ಕೂ ನಿರಂತರ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್, ಧರಣಿ, ಪ್ರತಿಭಟನೆ ಸೇರಿ ಒಂದು ಹೋರಾಟದಲ್ಲಿ ಏನೆಲ್ಲಾ ಮಾಡಬಹುದು ಎಂಬುದನ್ನು ಮೀರಿ ಎಲ್ಲ ಹಂತದ ಹೋರಾಟಕ್ಕೆ ಸಾಕ್ಷಿಯಾದ ಮಹದಾಯಿ ಚಳವಳಿಯನ್ನು ಬೆಂಬಲಿಸಿ ಹಿಂದೆ ಸರಿದ ರಾಜಕೀಯ ನಾಯಕರ ಭವಿಷ್ಯವನ್ನು ನಿರ್ಧರಿಸುವ ಮಟ್ಟಕ್ಕೆ ಬೆಳೆದು ನಿಂತಿದೆ.
ಸನ್ಯಾಸ ದೀಕ್ಷೆ: ಹೋರಾಟ ಹುಟ್ಟುಹಾಕಿದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಯೋಜನೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟು 2016 ಅ.17ರಂದು ಪೂಜ್ಯರ ಸಮ್ಮುಖದಲ್ಲಿ ಹೋರಾಟ-ಸನ್ಯಾಸ ದೀಕ್ಷೆ ಸ್ವೀಕರಿಸಿದ್ದು ಮಹತ್ವದ ಘಟ್ಟಗಳಲ್ಲಿ ಒಂದು. ಸುದೀರ್ಘ 4 ವರ್ಷ ಕಳೆದರೂ ಹೋರಾಟಕ್ಕೆ ಜಯ ತಂದುಕೊಡುವಲ್ಲಿ ರಾಜ್ಯ, ಕೇಂದ್ರ ಸರ್ಕಾರಗಳ ನಿರ್ಲಕ್ಷ್ಯ ಧೋರಣೆ ಮಲಪ್ರಭಾ ನಾಡಿನ ಮಕ್ಕಳಲ್ಲಿ ಆಕ್ರೋಶದ ಅಲೆ ಹುಟ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.