ಗ್ರಾಮೀಣ ಭಾಗದ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ
Team Udayavani, Nov 17, 2018, 4:14 PM IST
ನರೇಗಲ್ಲ: ರೋಣ ಮತಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಸಂಚರಿಸಲು ತೊಂದರೆಯಾಗುತ್ತಿರುವ ರಸ್ತೆ ಸುಧಾರಣೆಗೆ ಮೊದಲ ಆದ್ಯತೆ ನೀಡಿ, ಬಹುತೇಕ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ರೋಣ ಶಾಸಕ ಕಳಕಪ್ಪ ಬಂಡಿ ಹೇಳಿದರು.
ಪಟ್ಟಣದ ಯರೇಹಂಚಿನಾಳ ರಸ್ತೆಯಲ್ಲಿ ಶುಕ್ರವಾರ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 4.11 ಕೋಟಿ ರೂ. ವೆಚ್ಚದಲ್ಲಿ 7 ಕಿ.ಮೀ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನರೇಗಲ್ಲ ಹಾಗೂ ಯರೇಹಂಚಿನಾಳ ಗ್ರಾಮದ ಜನತೆ ಬಹು ದಿನಗಳ ಬೇಡಿಕೆಯಾದ ಈ ರಸ್ತೆಗೆ ಇಂದು ಕಾಯಕಲ್ಪ ಲಭಿಸಿದೆ. ರೈತರಿಗೆ, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿರುವ ರಸ್ತೆ ಸುಧಾರಣೆಗೆ ಎಲ್ಲರೂ ಸಹಕಾರ ನೀಡಬೇಕು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಬೇಕು. ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ನರೇಗಲ್ಲ ಬಿಜೆಪಿ ಘಟಕದ ಅಧ್ಯಕ್ಷ ಉಮೇಶ ಸಂಗನಾಳಮಠ, ಪ.ಪಂ ಸದಸ್ಯ ಈರಪ್ಪ ಜೋಗಿ, ಮಲ್ಲಿಕಸಾಬ ರೋಣದ, ಕುಮಾರಸ್ವಾಮಿ ಕೋರಧ್ಯಾನಮಠ, ಶ್ರೀಶೈಲಪ್ಪ ಬಂಡಿಹಾಳ, ಫಕೀರಪ್ಪ ಭೂಮ್ಮಲ್ಲಾಪುರ, ಫಕೀರಪ್ಪ ಮಳ್ಳಿ, ಮುಖಂಡರಾದ ಶಶಿಧರಗೌಡ ಸಂಕನಗೌಡ್ರ, ಯಲ್ಲಪ್ಪ ಮಣ್ಣೊಡ್ಡರ, ಬಸವರಾಜ ಕೊಟಗಿ, ನಿಂಗಪ್ಪ ಕಣವಿ, ಬಸವರಾಜ ವಂಕಲಕುಂಟಿ, ಮುತ್ತು ಕಡಗದ, ಬಸವರಾಜ ಒಳಕೋಟಿ, ರವಿ ಯತ್ನಟ್ಟಿ ಸೇರಿದಂತೆ ಇತರರು ಇದ್ದರು.
ಸಮಸ್ಯೆ ತೋಡಿಕೊಂಡ ಜನ
ಈ ವೇಳೆ ಶಾಸಕರ ಎದುರು ರೈತರು ಹಾಗೂ ಮಹಿಳೆಯರು ಸಮಸ್ಯೆ ತೋಡಿಕೊಂಡರು. ಆಶ್ರಯ ಮನೆಗಳನ್ನು ಕೂಡಲೇ ಹಂಚಿಕೆ ಮಾಡಿ ಬಡವರಿಗೆ ಸೂರು ನೀಡಬೇಕು. ಈ ವರ್ಷದ ಹಿಂಗಾರು ಹಾಗೂ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರೈತರಿಗೆ ಕೆಲಸ ಇಲ್ಲದಂತಾಗಿದೆ. ಬರಗಾಲ ಎಂದು ಘೋಷಣೆಯಾಗಿರುವ ನರೇಗಲ್ಲದ ಜನತೆಗೆ ಬರಗಾಲ ಕಾಮಗಾರಿ ಕೂಡಲೇ ಪ್ರಾರಂಭ ಮಾಡಬೇಕು ಎಂದು ಮಹಿಳೆಯರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ರೈತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಕೇಂದ್ರದ ನಮ್ಮ ನಾಲ್ಕೂವರೆ ವರ್ಷದ ಅವಧಿಯಲ್ಲಿ ರೋಣ ಮತಕ್ಷೇತ್ರದ ಪ್ರತಿಯೊಂದು ಗ್ರಾಮದ ಜನತೆಗೆ ವಸತಿ ಯೋಜನೆಯಡಿ ಮನೆ ನೀಡಲಾಗುತ್ತದೆ ಎಂದು ಶಾಸಕರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.