ಶಿರಹಟ್ಟಿ ತಾಲೂಕಾಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ
Team Udayavani, Feb 27, 2020, 3:20 PM IST
ಶಿರಹಟ್ಟಿ: ಪಟ್ಟಣದಲ್ಲಿನ ತಾಲೂಕಾಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿರಹಟ್ಟಿ ಪಟ್ಟಣದಲ್ಲಿರುವ ತಾಲೂಕಾಸ್ಪತ್ತೆಯಲ್ಲಿ ಪ್ರತಿದಿನ ನೂರಾರು ರೋಗಿಗಳು ಮತ್ತು ಸಾರ್ವಜನಿಕರು ಆಗಮಿಸುತ್ತಿರುವುದರಿಂದ ಇಲ್ಲಿನ ವೈದ್ಯಾಧಿಕಾರಿಗಳು ರೋಗಿಗಳಿಗೆ ಔಷಧಿಯನ್ನು ಸಮಪರ್ಕವಾಗಿ ವಿತರಿಸುತ್ತಿಲ್ಲ. ಅವರಿಗೆ ಹೊರಗಡೆಯಿಂದ ಔಷಧಿ ತರುವಂತೆ ಸೂಚಿಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆಂದು ಆಗಮಿಸಿದ ಬಡ ರೋಗಿಗಳು ಹೊರಗಡೆಯಿಂದ ತರಲು ಹಣ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲವೆಂದರೆ ಹೇಗೆ? ಅಲ್ಲಿನ ಅಧಿಕಾರಿಗಳು ಈ ಕುರಿತು ಸಮರ್ಪಕವಾಗಿ ಉತ್ತರ ನೀಡುತ್ತಿಲ್ಲ. ಔಷಧಿಗಳನ್ನು ಪೂರೈಕೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಆಸ್ಪತ್ರೆಯಲ್ಲಿ ಅರೆ ಗುತ್ತಿಗೆಯಲ್ಲಿ ಡಿ ದರ್ಜೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವರಿಗೆ ಗುತ್ತಿಗೆದಾರರು ಸರಿಯಾಗಿ ವೇತನ ಪಾವತಿಸುತ್ತಿಲ್ಲ. ಅವರ ಗೋಳು ಕೇಳುವವರಿಲ್ಲ. ಡಿ ದರ್ಜೆ ನೌಕರರನ್ನು ಸ್ಥಳೀಯರನ್ನೇ ಅರೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಎಲ್ಲ ಬೇಡಿಕೆಗಳನ್ನು ಶೀಘ್ರ ಈಡೇರದೇ ಹೋದರೆ ಹೋರಾಟ ಅನಿವಾರ್ಯ ಎಂದು ಕರವೇ ಅಧ್ಯಕ್ಷ ಬಸವರಾಜ ವಡವಿ ಆಗ್ರಹಿಸಿ ಮನವಿ ಸಲ್ಲಿಸಿದರು.
ದೇವೇಂದ್ರ ಶಿಂಧೆ, ಪ್ರಕಾಶ ಬಡ್ಡಣ್ಣವರ, ನೂರಹ್ಮದ್ ಮುಳಗುಂದ, ಮಾಬುಸಾಬ್ ಡಾಲಾಯತ್, ಗೂಡುಸಾಬ್ ಚೋರಗಸ್ತಿ, ಮಂಜುನಾಥ ಕುಂದರಗಿ, ಹರೀಶ ದೇಸಾಯಿಪಟ್ಟಿ, ಚನ್ನವೀರ ನಡವಿನಗೇರಿ, ಅಭಿಷೇಕ ದಶಮನಿ, ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.