ಜಾನುವಾರು ಆಹಾರ ಭದ್ರತೆಗೆ ಮೇವು ಬ್ಯಾಂಕ್
Team Udayavani, May 19, 2019, 12:18 PM IST
ನರೇಗಲ್ಲ: ಕೋಟುಮಚಗಿ ಗ್ರಾಪಂಗೆ ಗದಗ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಭೇಟಿ ನೀಡಿ ಮೇವು ಬ್ಯಾಂಕ್‌ನ ಮಾಹಿತಿ ಪರಿಶೀಲಿಸಿದರು.
ನರೇಗಲ್ಲ: ಜನರಿಗೆ ಆಹಾರ ಭದ್ರತೆ ಹೇಗಿದೆಯೋ ಅದೇ ಮಾದರಿಯಲ್ಲಿ ಜಾನುವಾರುಗಳಿಗೂ ಮೇವಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಂತೆ ಗದಗ ಜಿಲ್ಲೆ ವಿವಿಧ ಗ್ರಾಪಂಗಳಲ್ಲಿ ಮೇವು ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಗದಗ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದರು.
ಸಮೀಪದ ಕೋಟುಮಚಗಿ ಗ್ರಾಪಂನಲ್ಲಿನ ಮೇವು ಬ್ಯಾಂಕ್‌ಗೆ ಶನಿವಾರ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿ ಅವರು ಮಾತನಾಡಿದರು. ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಜಾನುವಾರುಗಳಿಗೆ ಮೇವು ಕೊರತೆಯಾಗಿರುವುದನ್ನು ಮನಗಂಡು ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದೆ. ಅದರ ಸದ್ಬಳಕೆಯನ್ನು ರೈತರು ಮಾಡಿಕೊಳ್ಳಬೇಕು. ಜಾನುವಾರುಗಳನ್ನು ಹೊಂದಿದವರು ಗ್ರಾಪಂನಲ್ಲಿ ದೊರೆಯುವ ಮೇವಿಗೆ ಪ್ರತಿ ಕೆಜಿಗೆ ಎರಡು ರೂ.ಗಳಂತೆ ಖರೀದಿಸಿ ಸರ್ಕಾರ ರೂಪಿಸಿರುವ ಮೇವು ಬ್ಯಾಂಕ್ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಗದಗ ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮಾತನಾಡಿ, ಬೇಸಿಗೆ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ತಾಲೂಕು ಆಡಳಿತವು ಮುಂಜಾಗ್ರತಾ ಕ್ರಮ ವಹಿಸಿ ಮೇವಿನ ದಾಸ್ತಾನು ಮಾಡಲಾಗಿದೆ. ಆಸಕ್ತ ರೈತರು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪಿಡಿಒ ರಾಜಕುಮಾರ ಎಚ್.ಬಿ. ಮಾತನಾಡಿ, ಕೋಟುಮಚಗಿ, ನಾರಾಯಣಪುರ ಗ್ರಾಮಗಳ ನಡುವೆ 10,370 ಕೆಜಿ ಮೇವು ಬಂದಿದ್ದು, ಈಗಾಗಲೇ ಬೆರಳೆಣಿಕೆಯಷ್ಟು ರೈತರು ಮೇವುವನ್ನು ಖರೀದಿ ಮಾಡಿದ್ದಾರೆ. ಗ್ರಾಪಂನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೇವು ಸಂಗ್ರಹವಿದ್ದು, ಅವಶ್ಯವಿರುವ ರೈತರು ಪಶು ವೈದ್ಯಾಧಿಕಾರಿಗಳಿಂದ ಶಿಫಾರಸು ಪತ್ರವನ್ನು ತೆಗೆದುಕೊಂಡು ಬಂದು ಹಣ ಕೊಟ್ಟು ಮೇವುವನ್ನು ಯಾವುದೇ ಸಂದರ್ಭದಲ್ಲಿ ತೆಗೆದುಕೊಂಡು ಹೋಗಬಹುದು ಎಂದರು.
ಗ್ರಾಮ ಲೆಕ್ಕಾಧಿಕಾರಿ ಜೆ.ಪಿ. ಜಯರಾಮ, ಪಶು ವೈದ್ಯಾಧಿಕಾರಿ ಪುಷ್ಪಾ ಮಾಲಗಿತ್ತಿಮಠ, ಬಿ.ಆರ್. ತಿಮ್ಮನಗೌಡ್ರ, ವಿಆರ್‌ಡಬ್ಲೂ ಮುತ್ತಣ್ಣ ಹವಾಜಿ, ನಜೀರ ಹಿರೇಹಾಳ, ಬಸವರಾಜ ಚಿಗರಿ, ರುದ್ರಗೌಡ ಸಂಕನಗೌಡ್ರ, ರಾಮಣ್ಣ ತಳವಾರ, ಮುಡಿಯಪ್ಪ ಕಮ್ಮಾರ, ಬೂದಪ್ಪ ಜಂತ್ಲಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.