ಜನಮನ ಸೆಳೆದ ಜಾನಪದ ಕಲಾ ಉತ್ಸವ
ಜೀವನ ಕ್ರಮ ಕಲಿಸುತ್ತೆ ಜಾನಪದ ಸಂಗೀತ-ಕಲೆ: ಡಾ|ಕೊಟ್ಟೂರೇಶ್ವರ ಸ್ವಾಮೀಜಿ ಅಭಿಮತ
Team Udayavani, Apr 22, 2022, 4:35 PM IST
ಗದಗ: ನಮ್ಮ ನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಒಳಗೊಂಡಿರುವ ಜಾನಪದ ಸಂಗೀತ, ಕಲೆ ನಮ್ಮ ಜೀವನ ಕ್ರಮಗಳನ್ನು ಕಲಿಸುತ್ತದೆ ಎಂದು ಹರ್ಲಾಪೂರ ಕೊಟ್ಟೂರೇಶ್ವರ ಮಠದ ಡಾ|ಕೊಟ್ಟೂರೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ನೂಲಿಚಂದಯ್ಯ ಜಾನಪದ ಕಲಾ ಮೇಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ತಾಲೂಕಿನ ಲಕ್ಕುಂಡಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಜಾನಪದ ಕಲಾ ಉತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ದೇಶದಲ್ಲಿ ಅಸ್ಥಿತ್ವದಲ್ಲಿರುವ ಜಾನಪದದ ವಿವಿಧ ಪ್ರಕಾರಗಳು ಜಗತ್ತಿನ ಯಾವುದೇ ದೇಶದಲ್ಲಿ ಕಾಣಸಿಗುವುದಿಲ್ಲ. ಜಾನಪದ ಕಲೆ ಜಾಗತೀಕರಣವಾಗಿದ್ದು, ಮಾನವೀಯ ಮೌಲ್ಯಗಳನ್ನು ಒತ್ತಿ ಹೇಳುತ್ತವೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನರಗುಂದದ ಬಿಜೆಪಿ ಯುವ ನಾಯಕ ಉಮೇಶಗೌಡ ಪಾಟೀಲ, ವಿವಿಧ ಸಂಸ್ಕೃತಿ, ಸಂಪ್ರದಾಯಗಳನ್ನು ಒಳಗೊಂಡಿರುವ ಜಾನಪದಕ್ಕೆ ಹುಟ್ಟು-ಸಾವಿಲ್ಲ. ಈ ದಿಸೆಯಲ್ಲಿ ಯುವಕರು ಇಂದಿನ ಯಾಂತ್ರಿಕ ಜೀವನ ಶೈಲಿಯನ್ನು ಬದಿಗಿಟ್ಟು, ಜಾನಪದ ಶೈಲಿಯ ಬದುಕನ್ನು ಕಟ್ಟಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಈಗ ಯಂತ್ರಗಳೇ ಎಲ್ಲ ಕೆಲಸಗಳನ್ನು ಮಾಡುತ್ತಿರುವುದರಿಂದ ಜಾನಪದ ಕಲೆ ಉಳಿಯುತ್ತಿಲ್ಲ. ಆದ್ದರಿಂದ, ಪ್ರತಿ ಮನೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಅಳವಡಿಸಿಕೊಂಡರೆ ಅದೇ ನಿಜವಾದ ಜಾನಪದ ಸಂಪತ್ತು ಎಂದು ಸಾಹಿತಿ ಡಾ|ಅರ್ಜುನ ಗೊಳಸಂಗಿ ಹಾಗೂ ಡಾ|ವೈ. ವೈ. ಭಜಂತ್ರಿ ಅಭಿಪ್ರಾಯಪಟ್ಟರು.
ಗ್ರಾಪಂ ಅಧ್ಯಕ್ಷೆ ಶ್ರೇಯಾ ಕಟಿಗ್ಗಾರ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಗ್ರಾಪಂ ಉಪಾಧ್ಯಕ್ಷ ಪೀರಸಾಬ ನದಾಫ, ನೀಲಕಂಠ ಮರಡಿ, ಚನ್ನಬಸಪ್ಪ ಹಡಗಲಿ, ಮಹೇಶಕುಮಾರ ಮುಸ್ಕಿನಭಾವಿ, ನಿಂಗಪ್ಪ ಮಣ್ಣೂರು, ದತ್ತಾತ್ರೇಯ ಜೋಶಿ, ಪ್ರದೀಪ ನವಲಗುಂದ, ಮರಿಯಪ್ಪ ವಡ್ಡರ, ಸಮೀರಸಾಬ ನದಾಫ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಬಸವರಾಜ ಮುಳ್ಳಾಳ, ಸ್ವಾಗತಿಸಿ, ಎಂ.ವಿ. ಗಡ್ಡಿ ನಿರೂಪಿಸಿ, ಶಿವು ಭಜಂತ್ರಿ ವಂದಿಸಿದರು.
ಮನ ಸೆಳೆದ ಜೋಗುತಿ ನೃತ್ಯ-ಕೋಲಾಟ: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡಿದ ಕೋತಬಾಳ ಗ್ರಾಮದ ಶಂಕ್ರಣ್ಣ ಸಂಕಣ್ಣವರ ನೇತೃತ್ವದ ಅರುಣೋದಯ ಕಲಾ ತಂಡದ ಜೋಗುತಿ ಮತ್ತು ದೀಪ ನೃತ್ಯ, ಕುರ್ತುಕೋಟಿ ವಿರೂಪಾಕ್ಷಪ್ಪ ಗುರನವರ ಕಲಾ ತಂಡದ ಕೋಲಾಟ ಜನಮನ ಸೆಳೆಯಿತು.
ಅಸುಂಡಿಯ ಪುಟ್ಟರಾಜ ಕಲಾ ತಂಡದ ಲಂಬಾಣಿ ನೃತ್ಯ, ಎನ್.ಎಚ್.ಗುಡ್ಡದ ಅವರ ರಂಗ ಗೀತೆಗಳು, ಸಾವಿತ್ರಿ ಲಮಾಣಿ ಅವರ ಸುಗಮ ಸಂಗೀತ, ಗೌಡಪ್ಪ ಬೊಮ್ಮಪ್ಪನವರ ಜನಪದ ಗೀತೆ, ಲಕ್ಕುಂಡಿ ಜ್ಯೋತಿ ಕಮದೋಡ ಅವರ ಭರತ ನಾಟ್ಯ, ನಿಂಗಪ್ಪ ಗುಡ್ಡದ ಅವರ ಡೊಳ್ಳಿನ ಪದ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಅಗಮಿಸಿದ್ದ ಜಾನಪದ ಕಲಾವಿದರ ಸಂಗೀತ ಸಾವಿರಾರು ಜನರ ಮನ ತಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.