ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಪಾಟೀಲ
Team Udayavani, Apr 19, 2019, 4:12 PM IST
ನರಗುಂದ: ದೇಶದ ಜನರಲ್ಲಿ ದೇಶಾಭಿಮಾನ ಮೂಡಿಸುವ ಜೊತೆಗೆ ವಿಶ್ವದಲ್ಲೇ ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಪರಿಚಯಿಸಿದ ಪ್ರಧಾನಿ ನರೇಂದ್ರ ಮೋದಿ
ಅವರು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಬಿಜೆಪಿ ಮುಖಂಡ ಉಮೇಶಗೌಡ ಪಾಟೀಲ ಮನವಿ ಮಾಡಿದರು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಪಟ್ಟಣದ ದಂಡಾಪುರ ಓಣಿಯಲ್ಲಿ ಚುನಾವಣಾ ಪ್ರಚಾರಾರ್ಥ ಪಾದಯಾತ್ರೆಯಲ್ಲಿ ತೆರಳಿ ಮತಯಾಚನೆ ಮಾಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಇಂದು ಜನರನ್ನು ಸ್ವಾಭಿಮಾನದ ಬದುಕಿನತ್ತ ಹೊರಳಿಸಿವೆ. ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನ ಸೇವಕರನ್ನಾಗಿ ಆಯ್ಕೆಗೊಳಿಸಲು ಪಿ.ಸಿ. ಗದ್ದಿಗೌಡರ ಅವರನ್ನು ಗೆಲ್ಲಿಸಿ ಸಹಕರಿಸಬೇಕು ಎಂದರು.
ಪಟ್ಟಣದ ಜಮಲಾಪುರ, ದೇಸಾಯಿ ಗಲ್ಲಿ, ಲೋದಿಗಲ್ಲಿ, ಜವಳಿ ಬಜಾರ್, ತರಕಾರಿ ಮಾರುಕಟ್ಟೆ ಮುಂತಾದ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿದರು.
ಚಂದ್ರು ಪವಾರ, ಬಸು ಪಾಟೀಲ, ರವಿ ಹೊಂಗಲ, ನಾಗರಾಜ ಚಿತ್ರಗಾರ, ನಾಗೇಶ ಅಪೊ³àಜಿ, ಮಂಜು ಮೆಣಸಗಿ, ಪ್ರಕಾಶ ಪಟ್ಟಣಶೆಟ್ಟಿ, ಶಿವಾನಂದ ಮುತವಾಡ, ಚಂದ್ರಶೇಖರ ಕೋಟಿ, ಉಮೇಶ ಮೊರಬದ, ಎಲ್.ಎಂ. ಪಾಟೀಲ, ಅನಿಲ ಧರಿಯಣ್ಣವರ, ನಾಗರಾಜ ನೆಗಳೂರ, ಸಂತೋಷ ಹಂಚಿನಾಳ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.