ಬಂಡಾಯದ ನೆಲೆಯ ರೈತನ ಪ್ರಯತ್ನಕ್ಕೆ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಮೆಚ್ಚುಗೆ
ಸಿದ್ದಪ್ಪ ತಯಾರಿಸಿದ ಜಲ ವಿದ್ಯುತ್‌ಗಾರದ ಚಿತ್ರ ಮತ್ತೆ ವೈರಲ್
Team Udayavani, Jan 4, 2021, 12:03 PM IST
ಗದಗ: ಬಂಡಾಯದ ನೆಲೆ ನರಗುಂದ ತಾಲೂಕಿನ ಪ್ರಗತಿಪರ ರೈತರೊಬ್ಬರು ತಯಾರಿಸಿದ್ದ ಜಲ ವಿದ್ಯುತ್‌ಗಾರದ ಫೋಟೋವನ್ನು ಖ್ಯಾತ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇದರಿಂದಾಗಿ ರೈತ ನಿರ್ಮಿಸಿದ್ದ ಜಲವಿದ್ಯುತ್‌ಗಾರದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನರಗುಂದ ಸಮೀಪದ ಬಂಡೆಮ್ಮ ನಗರ ನಿವಾಸಿ ಸಿದ್ದಪ್ಪ ಹುಲಜೋಗಿ ಎಂಬುವವರು ತಯಾರಿಸಿದ್ದ ಜಲವಿದ್ಯುತ್‌ಗಾರದ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್, ರೈತ ವಿನೂತನ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಕೇವಲ 5 ಸಾವಿರ ರೂ. ವೆಚ್ಚ ಮಾಡಿರುವ ರೈತ, 150 ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದಾರೆ. ವರ್ಷದ ಕೆಲವೇ ತಿಂಗಳು ಹರಿಯುವ ಕಾಲುವೆ ನೀರಿನಿಂದ ರೈತರು ವಿದ್ಯುತ್ ತಯಾರಿಸುವುದಾದರೆ, ವರ್ಷವಿಡೀ ನೀರು ಹರಿದರೆ ಇಡೀ ಗ್ರಾಮಕ್ಕೆ ವಿದ್ಯುತ್ ಪೂರೈಸಬಹುದು. ಹೆಚ್ಚಿನ ಸಂಪನ್ಮೂಲವಿಲ್ಲದೇ, ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಬದಲಾವಣೆ ತರಲು ಸಿದ್ದಪ್ಪ ಅವರ ಪ್ರಯತ್ನ ಮಾದರಿಯಾಗಿದೆ ಎಂದು ಶ್ಲಾಘಿಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ: ಗೆದ್ದ-ಸೋತ ಅಭ್ಯರ್ಥಿಗಳ ನೂರಾರು ಬೆಂಬಲಿಗರ ಮಧ್ಯೆ ಹೊಡೆದಾಟ, ವಿಡಿಯೋ ವೈರಲ್
ಕ್ರಿಕೆಟಿಗ ವಿ.ವಿ.ಎಸ್.ಲಕ್ಷ್ಮಣ್ ಅವರು ಇದನ್ನು ಟ್ವೀಟ್ ಮಾಡಿದ ಒಂದೇ ದಿನದಲ್ಲಿ ಸುಮಾರು 15 ಸಾವಿರ ಜನರು ಲೈಕ್ ಮಾಡಿದ್ದಾರೆ. ಜೊತೆಗೆ ಸಚಿವ ಸುರೇಶ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಕೂಡಾ ರಿಟ್ವೀಟ್ ಮಾಡಿದ್ದಾರೆ.
Incredible- A farmer from rural Karnataka, Siddappa has designed a water mill to generate electricity and operates it in the canal near his house. He spent just Rs. 5,000 on the construction, and gets 150 watts of power from this water mill when water flows in the canal. pic.twitter.com/tFN5JHmqBo
— VVS Laxman (@VVSLaxman281) January 3, 2021
ಕ್ರಿಕೆಟಿಗ ಲಕ್ಷ್ಮಣ್ ಅವರು ಟ್ವೀಟ್ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ರೈತ ಸಿದ್ದಪ್ಪ ಹುಲಜೋಗಿ, 2011-12 ರಲ್ಲಿ ಜಲ ವಿದ್ಯುತ್‌ಗಾರವನ್ನು ಸಿದ್ಧಪಡಿಸಿ, ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಪ್ರಯೋಗಿಸಿದ್ದೆವು. ಪ್ಲಾಸ್ಟಿಕ್ ಪುಟ್ಟಿಗಳನ್ನು ಅವಳಡಿಸಿದ್ದ ಚಕ್ರ ತಿರುಗುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈ ವಿದ್ಯುತ್‌ನ್ನು ಬಂಡೆಮ್ಮನಗರದ ನಮ್ಮ ತೋಟದ ಮನೆಗೆ ಬಳಕೆ ಮಾಡುತ್ತಿದ್ದೆವು. ಆದರೆ, ಕಾಲುವೆಯಲ್ಲಿ ನೀರಿನ ಕೊರತೆ ಹಾಗೂ ಹೆಸ್ಕಾಂ ಲೈನ್ ಬಂದಿದ್ದರಿಂದ ವಿದ್ಯುತ್ ಉತ್ಪಾದನೆಯನ್ನು ಕೈಬಿಟ್ಟಿದ್ದೇವೆ ಎಂದರು.
ರೈತರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಇದರಲ್ಲಿ ಮತ್ತಷ್ಟು ಸುಧಾರಣೆ ತಂದು, ಹೊಸ ಮಾದರಿಯಲ್ಲಿ ವಿದ್ಯುತ್ ಉತ್ಪಾದನಾ ಉಪಕರಣಗಳನ್ನು ಆವಿಷ್ಕರಿಸುವುದಾಗಿ ಸಿದ್ದಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.