ನಾಲ್ಕು ಹೊಸ ಕಂಟೇನ್ಮೆಂಟ್‌ ಝೋನ್‌


Team Udayavani, Jun 25, 2020, 3:10 PM IST

ನಾಲ್ಕು ಹೊಸ ಕಂಟೇನ್ಮೆಂಟ್‌ ಝೋನ್‌

ಗದಗ: ಗದಗ-ಬೆಟಗೇರಿ ನಗರಸಭೆಯ ವಾರ್ಡ್‌ ನಂ.1ರ ವ್ಯಾಪ್ತಿಯ ಎಸ್‌.ಎಂ. ಕೃಷ್ಣಾ ನಗರ ಸೇರಿದಂತೆ ಹೊಸದಾಗಿಕೋವಿಡ್‌-19 ಪ್ರಕರಣಗಳು ದೃಢಪಟ್ಟಿರುವ ನಾಲ್ಕು ಪ್ರದೇಶಗಳನ್ನು ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ್‌ ಝೋನ್‌)ವನ್ನಾಗಿ ಘೋಷಿಸಿ, ಸಾರ್ವಜನಿಕರ ಸಂಚಾರ ನಿಷೇಧಿ ಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಎಸ್‌.ಎಂ.ಕೃಷ್ಣಾ ನಗರದ 100 ಮೀ ಪ್ರದೇಶವನ್ನು ನಿಯಂತ್ರಿತ(ಕಂಟೇನ್ಮೆಂಟ್‌) ಪ್ರದೇಶ ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿಮೀ ವ್ಯಾಪ್ತಿಯ ಸುತ್ತಲಿನ ಪ್ರದೇಶವನ್ನು ಬಫರ್‌ ಝೋನ್‌ ಎಂದು ಘೋಷಿಸಲಾಗಿದೆ. ಗದಗ ಬೆಟಗೇರಿ ನಗರಸಭೆಯ ಕಿರಿಯ ಅಭಿಯಂತರ ಎಚ್‌.ಎ.ಬಂಡಿವಡ್ಡರ ಅವರನ್ನು ಇನ್ಸಿಡೆಂಟ್‌ ಕಮಾಂಡರ್‌ ಎಂದು ನೇಮಿಸಲಾಗಿದೆ.

ರೋಣ ತಾಲೂಕಿನ ಕುರಡಗಿ ಗ್ರಾಮದ ವಾರ್ಡ್‌ ನಂ. 2ರ ವ್ಯಾಪ್ತಿಯ 100 ಮೀಟರ್‌ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಮತ್ತು ಆ ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್‌ ಝೋನ್‌ಎಂದು ಘೋಷಿಸಿ ರೋಣ ತಾಪಂ ಇಒ ಸಂತೋಷಕುಮಾರ್‌ ಪಾಟೀಲ ಅವರನ್ನು ಇನ್ಸಿಡೆಂಟ್‌ ಕಮಾಂಡರ್‌ ಎಂದು ನೇಮಿಸಲಾಗಿದೆ.

ಶಿರಹಟ್ಟಿ ಪಪಂ ವ್ಯಾಪ್ತಿಯ ವಾರ್ಡ್‌ ನಂ.6 ರ ವ್ಯಾಪ್ತಿಯಲ್ಲಿ ಬರುವ ಮಟ್ಟಿಭಾವಿ ಪ್ಲಾಟ್‌, ಆಝಾದ್‌ ಕಾಲೋನಿ ಭಾಗದ 100 ಮೀಟರ್‌ ಸುತ್ತಲಿನ ವ್ಯಾಪ್ತಿಯನ್ನು ನಿಯಂತ್ರಿತ ಪ್ರದೇಶವೆಂದು ಘೋಷಿಸಲಾಗಿದೆ. ಅದರ ಸುತ್ತಲಿನ 5 ಕಿಮೀ ವ್ಯಾಪ್ತಿಯನ್ನು ಬಫರ್‌ ಝೋನ್‌ ಎಂದು ಘೋಷಿಸಿ ಶಿರಹಟ್ಟಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆಣ್ಣವರ ಅವರನ್ನು ಇನ್ಸಿಡೆಂಟ್‌ ಕಮಾಂಡರ್‌ ಎಂದು ನೇಮಿಸಲಾಗಿದೆ.

ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಪಂ ವ್ಯಾಪ್ತಿಯ ವಾರ್ಡ್‌ ನಂ.1 ರಲ್ಲಿರುವ ಶಿವಾಜಿನಗರ ಭಾಗದ 100 ಮೀಟರ್‌ ಸುತ್ತಲಿನ ಪ್ರದೇಶವನ್ನು ನಿಯಂತ್ರಿತ ಪ್ರದೇಶ ಹಾಗೂ ಪ್ರದೇಶ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ ವ್ಯಾಪ್ತಿಯ ಸುತ್ತಳೆಯ ಪ್ರದೇಶವನ್ನು ಬಫರ್‌ ಝೋನ್‌ ಎಂದು ಘೋಷಿಸಿ ಶಿರಹಟ್ಟಿ ತಾಪಂ ಇಒ ನಿಂಗಪ್ಪ ಓಲೇಕಾರ್‌ ಅವರನ್ನು ಇನ್ಸಿಡೆಂಟ್‌ ಕಮಾಂಡರ್‌ ಎಂದು ನೇಮಿಸಲಾಗಿದೆ. ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಅಥವಾ ಇತರೆ ಪ್ರದೇಶಗಳಿಂದ ನಿಯಂತ್ರಿತ ಪ್ರದೇಶಕ್ಕೆ

ಕರ್ತರ್ವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದೆ. ಬಫರ್‌ ಝೋನ್‌ನ ಮೊದಲ ಒಂದು ಕಿಮೀ ವ್ಯಾಪ್ತಿಯಲ್ಲಿ ತೀವ್ರ ಬಫರ್‌ಝೋನ್‌ ಇರಲಿದ್ದು, ಅಲ್ಲಿ ಪ್ರತಿ ಮನೆ ಮನೆಗಳಲ್ಲೂ ಆರೋಗ್ಯ ತಪಾಸಣೆ ನಡೆಸಲಾಗುವುದು. ಆದೇಶ ಉಲ್ಲಂಘಿಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.