ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ
Team Udayavani, Jan 18, 2022, 10:11 PM IST
ಗಜೇಂದ್ರಗಡ: ನಾಗೇಂದ್ರಗಡ ಭಾಗದ ಗುಡ್ಡದಲ್ಲಿನ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ತ್ವರಿತಗತಿಯ ಕಾರ್ಯಚರಣೆಗೆ ಮುಂದಾಗಿ, ಚಿರತೆಯನ್ನು ಸೆರೆ ಹಿಡಿದು ಗ್ರಾಮಸ್ಥರಲ್ಲಿನ ಭೀತಿ ದೂರ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ಒತ್ತಾಯಿಸಿದರು.
ನಾಗೇಂದ್ರಗಡದ ರೈತ ನಿಂಗಪ್ಪ ಹಂಡಿ ಯವರಿಗೆ ಸೇರಿದ ಆಕಳನ್ನು ಚಿರತೆ ಕೊಂದ ಹಿನ್ನೆಲೆಯಲ್ಲಿ ಪಶುವಿನ ಮಾಲೀಕರಿಗೆ ಸಹಾ ಯಧನ ನೀಡಿ ಮಾತನಾಡಿದ ಅವರು, ಈಗಾಗಲೇ ಕಳೆದೊಂದು ತಿಂಗಳಿಂದ ಈ ಭಾಗದಲ್ಲಿ ಚಿರತೆಯ ಭೀತಿ ಶುರುವಾಗಿದೆ. ಹಲವಾರು ಪ್ರಾಣಿಗಳ ಸಾವು-ನೋವು ಸಹ ಸಂಭವಿಸಿದೆ. ಆದರೂ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೈಗೊಳ್ಳಬೇಕಾದ ಕ್ಷಿಪ್ರ ಕಾರ್ಯಾಚರಣೆ ನಡೆಸಿಲ್ಲ.
ಮನೆ ಮುಂದೆ ಕಟ್ಟಿರುವ ಮೆಕೆ, ಹಸು, ಕುದುರೆಗಳ ಮಾರಣಹೋಮವಾಗುತ್ತಿದೆ. ಸರ್ಕಾರ ಕೂಡಲೇ ರೈತ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾಗಬೇಕು ಎಂದರು. ವೈಯಕ್ತಿಕವಾಗಿ 10 ಸಾವಿರ ರೂ. ಸಹಾಯಧನ ನೀಡಿದರು. ರೋಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೆಟ್ಟರ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಭೀಮಪ್ಪ ಹಂಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.