ಗದಗ: ಪೌರಾಯುಕ್ತ ಹುದ್ದೆ ಸೇರಿ 240 ಹುದ್ದೆಗಳು ಖಾಲಿ


Team Udayavani, Jul 17, 2024, 4:17 PM IST

ಗದಗ: ಪೌರಾಯುಕ್ತ ಹುದ್ದೆ ಸೇರಿ 240 ಹುದ್ದೆಗಳು ಖಾಲಿ

ಉದಯವಾಣಿ ಸಮಾಚಾರ
ಗದಗ: ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಹುದ್ದೆ ಸೇರಿ 240 ಹುದ್ದೆಗಳು ಖಾಲಿಯಿದ್ದು, ನಗರಸಭೆಯಲ್ಲಿ ಆಗಬೇಕಾದ ಸಣ್ಣ ಕೆಲಸಗಳಿಗೂ ಅವಳಿನಗರ ಜನತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರ ಸಮಸ್ಯೆಗಳ ಪರಿಹಾರ ಮಾಡಬೇಕಾದ ನೂರಾರು ಅಧಿಕಾರಿ ಹುದ್ದೆಗಳು ಖಾಲಿ ಉಳಿದಿರುವುದೇ ಪ್ರಮುಖ ಕಾರಣವಾಗಿದ್ದು, ಇದಕ್ಕೆ ಸ್ಪಂದಿಸಬೇಕಾದ ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳ ಉದ್ದೇಶ ಪೂರ್ವಕ ನಿರ್ಲಕ್ಷ್ಯದಿಂದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು 457 ವಿವಿಧ ಹುದ್ದೆಗಳಿಗೆ ಸರ್ಕಾರ ಮಂಜೂರಾತಿ ನೀಡಿದೆ. ಆದರೆ ಕೇವಲ 217 ಜನ ಮಾತ್ರ ಕಾರ್ಯ  ನಿರ್ವಹಿಸುತ್ತಿದ್ದು, 240 ಹುದ್ದೆಗಳು ಖಾಲಿ ಉಳಿದಿವೆ. ಇದರ ನೇರ ಪರಿಣಾಮ ಸಾರ್ವಜನಿಕರ ಮೇಲಾಗಿದ್ದು, ಜನರ ಸಮಸ್ಯೆಗಳು ವರ್ಷಗಳೇ ಕಳೆದರೂ ಇತ್ಯರ್ಥವಾಗುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಅವಳಿ ನಗರದಲ್ಲಿ ಕಸ ಸಂಗ್ರಹಣೆ, ಅದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ.

ಪೌರಾಯುಕ್ತರ ಹುದ್ದೆಯೂ ಖಾಲಿ:
ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರ ಹುದ್ದೆ ಖಾಲಿ ಇದ್ದು ವರ್ಷವೇ ಗತಿಸಿದೆ. ಪ್ರಭಾರ ಅಧಿಕಾರಿಗಳಾಗಿ ಮೂವರು ಅಧಿಕಾರಿಗಳು ಬದಲಾದರೂ ಕಾಯಂ ಅಧಿಕಾರಿಗಳ ನೇಮಕವಾಗುತ್ತಿಲ್ಲ. ಇದರಿಂದ ಪ್ರಭಾರಿ ಅಧಿಕಾರಿಗಳೇ ಕಾರ್ಯ ನಿರ್ವಹಿಸುವಂತಾಗಿದೆ. ಪ್ರಭಾರಿ ಅಧಿ ಕಾರಿಗಳಾಗಿ ನಿಯೋಜನೆಗೊಂಡಿರುವ ಅನ್ಯ ಇಲಾಖೆ ಅ ಧಿಕಾರಿಗಳು ತಮ್ಮ ಮೂಲ ಇಲಾಖೆ ಕೆಲಸ ಪೂರ್ಣಗೊಳಿಸಿ ನಂತರ ನಗರಸಭೆಯ ಕೆಲಸ ಕಾರ್ಯಗಳಿಗೆ ಆದ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆರಂಭವಾಗದೇ ಅವಳಿ ನಗರದ ಆಡಳಿತ ನಿಂತ ನೀರಾಗಿದೆ.

136 ಪೌರಕಾರ್ಮಿಕರ ಹುದ್ದೆಗಳು ಖಾಲಿ:
ಗದಗ- ಬೆಟಗೇರಿ ಅವಳಿ ನಗರವನ್ನು ನಿತ್ಯವೂ ಸ್ವಚ್ಛವಾಗಿಡುವ, ಸಾರ್ವಜನಿಕರ ಆರೋಗ್ಯದೊಂದಿಗೆ ನೇರ ಸಂಪರ್ಕ
ಹೊಂದಿರುವ ಪೌರ ಕಾರ್ಮಿಕರ 264 ಹುದ್ದೆಗಳಿಗೆ ಮಂಜೂರಾತಿ ಇದೆ. ಸದ್ಯ ಕೇವಲ 128 ಜನರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 136 ಹುದ್ದೆಗಳು ಖಾಲಿ ಇವೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. 35 ವಾರ್ಡ್‌ಗಳನ್ನು ಹೊಂದಿರುವ ಅವಳಿ ನಗರವನ್ನು ಸ್ವತ್ಛಗೊಳಿಸುವಂತಹ ಹೆಚ್ಚಿನ ಹೊರೆ, ಕಡಿಮೆ ಸಂಖ್ಯೆಯಲ್ಲಿರುವ ಪೌರ ಕಾರ್ಮಿಕರ ಮೇಲೆಯೇ ಬಿದ್ದಿರುವ ಹಿನ್ನೆಲೆಯಲ್ಲಿ ಅವರು ಕೂಡಾ ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ.

141 ಹೊರ ಗುತ್ತಿಗೆ ನೌಕರರು: ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ಮಂಜೂರಾತಿ ಪಡೆದ ಹುದ್ದೆಗಳನ್ನು ಹೊರತು ಪಡಿಸಿ 141
ಜನ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವುಗಳಲ್ಲಿ ಪ್ರಮುಖವಾಗಿ 59 ಜನ ಕಸದ ಗಾಡಿಗಳ ವಾಹನ ಚಾಲಕರು, 64 ಜನ ಕಸವನ್ನು ಗಾಡಿಗಳಿಗೆ ಸಂಗ್ರಹಿಸುವವರು(ಲೋಡರ್‌)4 ಜನ ಕಂಪ್ಯೂಟರ್‌ ಆಪರೇಟರ್‌ಗಳಿದ್ದಾರೆ.

ನಗರಸಭೆಯಲ್ಲಿನ ಅಧಿಕಾರಿಗಳ ಕೊರತೆಯನ್ನು ನೀಗಿಸಬೇಕಾದದ್ದು, ಸರ್ಕಾರದ ಕರ್ತವ್ಯ. ಈ ವಿಷಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚು ಗಮನ ನೀಡಿ ಖಾಲಿ ಇರುವ ಹುದ್ದೆಗಳಿಗೆ ಅಧಿಕಾರಿಗಳ ನೇಮಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ
ಮೊದಲೇ ಜಿಡ್ಡುಗಟ್ಟಿರುವ ನಗರಸಭೆ ಆಡಳಿತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇನ್ನುಳಿದ ಅಧಿಕಾರಿಗಳು ಸಿಬ್ಬಂದಿ ಕೊರತೆ
ಹೇಳುತ್ತಲೇ ಕಾಲಹರಣ ಮಾಡುತ್ತಿದ್ದಾರೆ. ತಮ್ಮದಲ್ಲದ ತಪ್ಪಿನಿಂದ ಅವಳಿ ನಗರದ ಜನರು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಅಧಿಕಾರಿಗಳ ಹಾಗೂ ಸಿಬ್ಬಂದಿ ನೇಮಕ ರಾಜ್ಯ ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸ, ಇರುವ ಸಿಬ್ಬಂದಿಯಿಂದಲೇ ಸಮರ್ಪಕ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.
●ಉಷಾ ದಾಸರ, ಅಧ್ಯಕ್ಷರು,
ಗದಗ-ಬೆಟಗೇರಿ ನಗರಸಭೆ

ಉಳಿದಂತೆ ಇಲೆಕ್ಟ್ರಿಷಿಯನ್‌, ಪ್ಲಂಬರ್‌, ಹೆಡ್‌ ಗಾರ್ಡನ್‌ ಮಂಜೂರಾಗಿರುವ ಒಂದೊಂದು ಹುದ್ದೆಗಳು ಖಾಲಿ ಇವೆ. ಉಳಿದಂತೆ ವಾಟರ್‌ ಸಪ್ಲೈ ವಾಲ್‌ವುನ್‌, ಹೆಲ್ಪರ್‌ ಸೇರಿದಂತೆ ಒಟ್ಟು 50 ಹುದ್ದೆಗಳ ಮಂಜೂರಾತಿ ಇದ್ದರೂ ಕಾರ್ಯ ನಿರ್ವಹಿಸುತ್ತಿರುವವರು 16 ಜನ ಮಾತ್ರ ಇನ್ನುಳಿದ 34 ಹುದ್ದೆಗಳು ಖಾಲಿಯೇ ಉಳಿದಿವೆ.

■ ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

Gadag; ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಬಳಿ ಶೀಘ್ರ ಸರ್ವಪಕ್ಷಗಳ ನಿಯೋಗ: ಎಚ್.ಕೆ. ಪಾಟೀಲ್

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

ಕಾಯಕ ಸಂಸ್ಕೃತಿ ಪಾಲನೆಯಲ್ಲಿ ಮುನ್ನಡೆಯಿರಿ-ಶಾಸಕ ಜಿ.ಎಸ್‌. ಪಾಟೀಲ

Gadag; ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Gadag; ಹಬ್ಬದ ಖರೀದಿಗೆಂದು ಮಾರುಕಟ್ಟೆಗೆ ಹೋಗಿದ್ದ ಪೊಲೀಸ್‌ ಸಿಬ್ಬಂದಿ ಅಪಘಾತದಲ್ಲಿ ಸಾವು!

Mundargi: Bike rider went to Kochi without overbridge; Protest by villagers

Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಗೂಳಿಗಳ ಉಪಟಳ… ವಿದ್ಯಾರ್ಥಿನಿಗೆ ಗಾಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.