Gadag; ಬಸ್ ಗಳ ನಡುವೆ ಅಪಘಾತ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Aug 17, 2024, 5:43 PM IST
ಗದಗ: ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಗಳಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇದರಿಂದಾಗಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ತಾಲೂಕಿನ ಅಡವಿಸೋಮಾಪೂರ ಕ್ರಾಸ್ ಬಳಿ ಶನಿವಾರ(ಆ17) ಸಂಭವಿಸಿದೆ.
ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇನ್ನುಳಿದ 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗದಗನಿಂದ ಮುಂಡರಗಿಗೆ ತೆರಳುವ ವಾಹನಗಳು ರಾಷ್ಟ್ರೀಯ ಹೆದ್ದಾರಿಯನ್ನು ಕ್ರಾಸ್ ಮಾಡಿ ತೆರಳಬೇಕಾದ ಅನಿವಾರ್ಯತೆ ಇದೆ. ಈ ಸ್ಥಳದಲ್ಲಿ ಈಗಾಗಲೇ ಹಲವಾರು ಬಾರಿ ಗಂಭೀರ ಸ್ವರೂಪದ ಅಪಘಾತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.