ಗದಗ ಜಿಲ್ಲೆಯಲ್ಲಿ 70 ಜನರಿಗೆ ಕೋವಿಡ್ ಸೋಂಕು
Team Udayavani, Oct 1, 2020, 3:03 PM IST
ಗದಗ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 70 ಜನರಿಗೆ ಕೊರೊನಾ ಸೋಂಕು ಖಚಿತವಾಗಿದೆ. ಅದರೊಂದಿಗೆ 116 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9108ಕ್ಕೆ ಏರಿಕೆಯಾಗಿದೆ. ಆ ಪೈಕಿ ಈವರೆಗೆ 8,407 ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 570 ಜನರು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ಗದಗ-40, ಮುಂಡರಗಿ-6, ನರಗುಂದ-3, ರೋಣ-8, ಶಿರಹಟ್ಟಿ-10, ಹೊರಜಿಲ್ಲೆಯ ಮೂವರಿಗೆ ಸೋಂಕು ಖಚಿತವಾಗಿದೆ. ಈ ನಡುವೆ ಮತ್ತೆ ಇಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 131 ಜನರು ಬಲಿಯಾದಂತಾಗಿದೆ. ಮುಂಡರಗಿ ಪಟ್ಟಣ್ಣದ 59 ವರ್ಷದ ಪುರುಷ, ಗದಗ ತಾಲೂಕಿನ ಹೊಂಬಳ ನಿವಾಸಿ 67 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿ ಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.