ಸರಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಗದಗ ಜಿಲ್ಲಾಧಿಕಾರಿ ಪತ್ನಿ
Team Udayavani, Aug 9, 2020, 1:48 PM IST
ಗದಗ: ಸರಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ಇನ್ನು ಕೋವಿಡ್ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆ ಎಂದರೆ ಜನ ಮಾರು ದೂರ ಸರಿಯುತ್ತಾರೆ. ಆದರೆ, ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಪತ್ನಿಗೆ ಹೆರಿಗೆ ಮಾಡಿಸುವ ಮೂಲಕ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಮಾದರಿಯಾಗಿದ್ದಾರೆ.
ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಆರೋಗ್ಯ ಇಲಾಖೆಯ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರ ಪತ್ನಿ ಶಿವಶಂಕರಿ ಅವರು ಬೆಳಗ್ಗೆ 5.30 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಅವರಿಗೆ ಶನಿವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಇಲ್ಲಿನ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಸೂತಿ ಮತ್ತು ಮಕ್ಕಳ ತಜ್ಞರಾದ ಡಾ|ಶೃತಿ ಹಾಗೂ ಡಾ| ಶಿವನಗೌಡರ ಅವರು ಸಿಜೇರಿಯನ್ ಮೂಲಕ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ತಾಯಿ, ಮಗು ಆರೋಗ್ಯ ವಾಗಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ಸೇವೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಮೆಚ್ಚುಗೆ ಸೂಚಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.