Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ಬಸ್ ಡಿಪೋದಲ್ಲಿ ಡೀಸೆಲ್ ಕಳ್ಳರು!
Team Udayavani, Dec 25, 2024, 1:09 PM IST
ಗದಗ: ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಪಾರ್ಕಿಂಗ್ ಮಾಡಿದ್ದ ಬಸ್ ಗಳಲ್ಲಿನ ಡೀಸೆಲ್ ಕಳ್ಳತನವಾಗಿರುವ ಘಟನೆ ಬೆಟಗೇರಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋದಲ್ಲಿ ನಡೆದಿದೆ.
ಡಿ. 19ರ ಗುರುವಾರ ರಾತ್ರಿ ಈ ಕಳ್ಳತನ ನಡೆದಿದ್ದು, ಬಸ್ ಗಳನ್ನು ರಾತ್ರಿ ವೇಳೆ ಪಾರ್ಕ್ ಮಾಡುವಾಗ ಡೀಸೆಲ್ ಟ್ಯಾಂಕನ್ನು ತುಂಬಿಸಿ ಇಡಲಾಗಿತ್ತು. ಆದರೆ ಬೆಳಿಗ್ಗೆ ಚಾಲಕ ಬಂದು ನೋಡಿದಾಗ ಡೀಸೆಲ್ ಕಳ್ಳತನವಾಗಿರುವ ಬಗ್ಗೆ ತಿಳಿದು ಬಂದಿದೆ.
ಬೆಟಗೇರಿ ಡಿಪೋದಲ್ಲಿನ ಬಸ್ ನಿಂದ 200 ಲೀ., 135 ಲೀ. ಹಾಗೂ 186 ಲೀ. ಡೀಸೆಲ್ ಕಳ್ಳತನವಾಗಿದ್ದು, ಒಟ್ಟು 3 ಬಸ್ ಗಳಲ್ಲಿ 44,806 ರೂ. ಗಳ ಒಟ್ಟು 521 ಲೀ. ಡೀಸೆಲ್ ಅನ್ನು ಖದೀಮರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಘಟಕದಲ್ಲಿ ಯಾವುದೇ ಸಿಸಿ ಕ್ಯಾಮರಾಗಳು ಇಲ್ಲದಿರುವುದು ಕೆ.ಎಸ್.ಆರ್.ಟಿ.ಸಿ. ಘಟಕದ ಭದ್ರತಾಲೋಪಕ್ಕೆ ಸಾಕ್ಷಿಯಾಗಿದೆ.
ಕಳ್ಳತನದ ಪ್ರಕರಣದ ಕುರಿತಂತೆ ಘಟಕದ ವ್ಯವಸ್ಥಾಪಕ ರಾಜಶೇಖರ ಧನ್ಯಾಳ ಅವರು ಡಿ. 22ರಂದು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬೆಟಗೇರಿ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.