Gadag; ಜಿಮ್ಸ್ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ; ತಪ್ಪಿದ ಅನಾಹುತ
Team Udayavani, Feb 16, 2024, 10:14 PM IST
ಗದಗ: ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿರುವ ಎಂಬಿಬಿಎಸ್ ವಿದ್ಯಾರ್ಥಿಗಳ ಹಾಸ್ಟೆಲ್‌ನ ಕೆಳಮಹಡಿಯಲ್ಲಿ ಪೇರಿಸಿಟ್ಟಿದ್ದ ಕಟ್ಟಿಗೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಮರದ ತುಂಡುಗಳು ಹೊತ್ತಿ ಉರಿದಿವೆ. ಬೆಂಕಿಯ ಕೆನ್ನಾಲಿಗೆ ಮೊದಲ ಮಹಡಿಗೂ ವಿಸ್ತರಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಚುರುಕಿನ ಕಾರ್ಯಾಚರಣೆ ನಡೆಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
‘ಹಾಸ್ಟೆಲ್‌ನ ಪಾರ್ಕಿಂಗ್ ಪ್ರದೇಶದಲ್ಲಿರುವ ವಿದ್ಯುತ್ ಕೊಠಡಿ ಪಕ್ಕದಲ್ಲಿ ಕಟ್ಟಿಗೆ ತುಂಡುಗಳನ್ನು ಜೋಡಿಸಿಡಲಾಗಿತ್ತು. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆಗಳು ಚೆನ್ನಾಗಿ ಒಣಗಿದ್ದರಿಂದ ಬೆಂಕಿ ಬೇಗ ಹರಡಿಕೊಂಡಿದೆ. ಮೊದಲ ಮಹಡಿಗೂ ಬೆಂಕಿಯ ರಾವು ಆವರಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿ.ಎಸ್.ಟಕ್ಕೇಕರ್ ಅವರ ಮಾರ್ಗದರ್ಶನದಲ್ಲಿ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದರು. ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ’ ಎಂದು ಗದಗ ಅಗ್ನಿಶಾಮಕ ಠಾಣೆಯ ಹವಾಲ್ದಾರ್ ಮುತ್ತಪ್ಪ ತಿಳಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿಯಾದ ಎಂ.ಐ.ದೊಡ್ಡಮನಿ, ನಜೀರ್ ಅಹ್ಮದ್ ಜಮಖಂಡಿ, ಕೆ.ಎಂ.ಹುಯಿಲಗೋಳ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.