Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ
Team Udayavani, Jul 7, 2024, 1:12 PM IST
ಗದಗ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿಯಾಗಿದೆ.
ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 5 ವರ್ಷದ ಬಾಲಕ ಸಾವಿಗೀಡಾಗಿದ್ದಾನೆ. ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯು ಹೊಸಮನಿ (5) ಮೃತ ಬಾಲಕ.
ಕಳೆದ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿರಾಯುನನ್ನು ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ನಂತರ ಕೆಲ ಗಂಟೆಗಳ ಕಾಲ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿತ್ತು. ತದನಂತರ ಮೃತ ಬಾಲಕನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಚಿಕಿತ್ಸೆ ಫಲಿಸದೆ ರವಿವಾರ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಗದಗ ನಗರದ ಜಿಮ್ಸ್ ನಲ್ಲಿ ಮೂವರು ಮಕ್ಕಳು ಸೇರಿ 12 ಡೆಂಘೀ ಪ್ರಕರಣಗಳ ಆಕ್ವಿವ್ ಇದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.