ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Team Udayavani, Nov 11, 2024, 1:35 PM IST
ಉದಯವಾಣಿ ಸಮಾಚಾರ
ಗದಗ: ಕ್ರಿ.ಶ. 8ನೇ ಶತಮಾನದಿಂದ 17ನೇ ಶತಮಾನದವರೆಗಿನ ಗದಗ, ಬಾಗಲಕೋಟೆ ಸೇರಿದಂತೆ ವಿಜಯಪುರದಲ್ಲಿನ 400ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳನ್ನು ಹೊಂದಿರುವ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ ಒದಗಿಸಲಾಗುತ್ತಿದ್ದು, 6.97 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ವಸ್ತು ಸಂಗ್ರಹಾಲಯದ ಒಳಾಂಗಣ ವಿನ್ಯಾಸ ಕಾಮಗಾರಿ ಭೂಮಿಪೂಜೆ, ಶಿಲಾನ್ಯಾಸ
ನೆರವೇರಿಸಲಾಗಿದೆ.
ರಾಜ್ಯ ಸರ್ಕಾರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವ್ಯಾಪ್ತಿಗೊಳಪಡುವ ವಸ್ತು ಸಂಗ್ರಹಾಲಯ
ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಕುರಿತು ಸೂಕ್ತ ನಿರ್ವಹಣೆ, ಮಾಹಿತಿ ಫಲಕಗಳಿಲ್ಲದೆ, ಪ್ರಚಾರ ಕೊರತೆಯಿಂದ ಪ್ರವಾಸಿಗರು, ಇತಿಹಾಸಕಾರರಿಂದ ದೂರ ಉಳಿದಂತಾಗಿತ್ತು. ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಆಸಕ್ತಿ ವಹಿಸಿ ಪುರಾತನ ಶಿಲ್ಪಕಲೆಗಳಿಗೆ ಮರುಜೀವ ನೀಡುವ ಸಲುವಾಗಿ ವಿಶೇಷ ಯೋಜನೆ ಮೂಲಕ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ.
ಈಗಾಗಲೇ ಲಕ್ಕುಂಡಿಯಲ್ಲಿ 5 ಕೋಟಿಗೂ ಅಧಿಕ ವೆಚ್ಚದಲ್ಲಿ 13 ಅರಕ್ಷಿತ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊ ಳ್ಳುವ ಹಂತಕ್ಕೆ ತಲುಪಿವೆ. ಅಲ್ಲದೇ 1 ಕೋಟಿ ರೂ. ವೆಚ್ಚದಲ್ಲಿ ಐತಿಹಾಸಿಕ ಪುರಾತನ ವೀರನಾರಾಯಣ ದೇವಸ್ಥಾನ ಪುನರುತ್ಥಾನಗೊಳಿಸಿ ಐತಿಹಾಸಿಕ ಸ್ಮಾರಕಗಳ ರಕ್ಷಣೆಗೆ ಮುಂದಾಗಿದ್ದಾರೆ. ಸದ್ಯ ಶೈವ, ವೈಷ್ಣವ, ಜೈನ ಧರ್ಮ ಪ್ರತಿಬಿಂಬಿಸುವ ಆದಿನಾಥ, ಪಾರ್ಶ್ವನಾಥ, ಕೃಷ್ಣ, ಕಾಲಭೈರವ, ವೀರಭದ್ರ, ಗೋವರ್ಧನ, ಲಕ್ಷ್ಮೀ, ಶಿವ, ಸಪ್ತ ಮಾತೃಕೆಯರ ಶಿಲ್ಪಕಲೆಗಳಿರುವ ವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ ನೀಡಲಾಗುತ್ತಿದೆ.
ವಸ್ತು ಸಂಗ್ರಹಾಲಯದಲ್ಲಿ ಕ್ರಿ.ಶ. 9ನೇ ಶತಮಾನದ ರಾಷ್ಟ್ರಕೂಟರ ಕಾಲದ ಗಜಲಕ್ಷ್ಮೀ ಪಟ್ಟಿಕೆ, 11-12ನೇ ಶತಮಾನದ
ಕಲ್ಯಾಣ ಚಾಲುಕ್ಯರ ಕಾಲದ ವೀರಭದ್ರ, ಉಮಾಮಹೇಶ್ವರ, ಮಹಿಷಾಸುರ ಮರ್ದಿನಿ, ಕುಬೇರ, ಗರುಡನ ಮೇಲೆ ಕುಳಿತಿರುವ
ಲಕೀÒ$¾ನಾರಾಯಣ ಮೂರ್ತಿಯ ಶಿಲ್ಪಗಳಿವೆ. ಬೆಟಗೇರಿಯಲ್ಲಿ ದೊರೆತ ಧ್ಯಾನಮುದ್ರೆಯಲ್ಲಿ ಕುಳಿತ ಭಂಗಿಯಲ್ಲಿರುವ ಸಪ್ತ ಮಾತೃಕೆಯರ ಶಿಲ್ಪಗಳಿವೆ. ದಾನಚಿಂತಾಮಣಿ ಅತ್ತಿಮಬ್ಬೆ ಜೈನ ಬಸದಿ ಕಟ್ಟಿಸಲು ನೀಡಿದ ಶಾಸನ, ಡಂಬಳದಲ್ಲಿ ದೊರೆತ ಪಾರ್ಶ್ವನಾಥ ಶಿಲ್ಪ ಇದರ ಪಾದ ಪೀಠದ ಮೇಲೆ ಬಸದಿ ನಿರ್ಮಾಣ ತಿಳಿಸುವ 10ನೇ ಶತಮಾನದ ಕನ್ನಡ ಶಾಸನವನ್ನು ಸಂಗ್ರಹಾಲಯ ಹೊಂದಿದೆ.
ಕ್ರಿ.ಶ 17ನೇ ಶತಮಾನದಲ್ಲಿ ಮರದಿಂದ ಕೆತ್ತಲ್ಪಟ್ಟ ಗೋವರ್ಧನ, ಲಕ್ಷ್ಮೀ ಮೂರ್ತಿಗಳು, ಲಕ್ಕುಂಡಿ ಗ್ರಾಮ ಉತ್ಖನನದಲ್ಲಿ ದೊರೆತ ನೂತನ ಶಿಲಾಯುಗದ ಆಯುಧಗಳು, ಬೃಹತ್ ಶಿಲಾಯುಗದ ಮಣ್ಣಿನ ಪಾತ್ರೆಗಳು, ಶಾತವಾಹನರ ಕಾಲದ ಮಣ್ಣಿನ ಪಾತ್ರೆಗಳು, ವಿವಿಧ ಆಕಾರ-ಬಣ್ಣದ ಮಣಿಗಳ ರಕ್ಷಣೆಗೆ ಹಾಗೂ ವೀಕ್ಷಣೆಗೆ ವಿಶೇಷ ಯೋಜನೆ ರೂಪಿಸಲಾಗಿದೆ.
ರಾಜ್ಯ ಸರ್ಕಾರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವ್ಯಾಪ್ತಿಗೊಳಪಡುವ ವಸ್ತು ಸಂಗ್ರಹಾಲಯದಲ್ಲಿ ಒಳವಿನ್ಯಾಸದ ನವೀಕರಣ, ಶೋಕೇಸ್, ಹೊರಗಡೆ ಇರುವ ಶಿಲ್ಪಕಲೆ, ಶಾಸನಗಳನ್ನು ಕಟ್ಟಡದೊಳಗೆ ತರುವ ಮೂಲಕ ಅವುಗಳನ್ನು ಗ್ಯಾಲರಿಯೊಳಗೆ ಪ್ರದರ್ಶಿಸಲಾಗುತ್ತದೆ. ಇದರಿಂದ ಪ್ರವಾಸಿಗರಿಗೂ ಅನುಕೂಲವಾಗುತ್ತದೆ. ಬಿ.ಸಿ.ರಾಜಾರಾಮ್, ಕ್ಯೂರೇಟರ್, ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯ, ಗದಗ
*ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.