ಗದಗ: ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಶಿಕ್ಷಕರಿಂದಲೇ ಸಾಧ್ಯ-ಎಚ್.ಕೆ. ಪಾಟೀಲ
ಭವಿಷ್ಯಕ್ಕಾಗಿ ಶಿಕ್ಷಕ ವೃಂದ ಮತ್ತು ಪಾಲಕರು ಶ್ರಮಿಸಲು ಮುಂದಾಗಿ
Team Udayavani, Jul 9, 2024, 6:05 PM IST
■ ಉದಯವಾಣಿ ಸಮಾಚಾರ
ಗದಗ: ದೇಶ ಕಟ್ಟುವ, ಸೃಜನಶೀಲ ಸಮಾಜ ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ಅರ್ಪಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಿ ಸೇವಾ ನಿವೃತ್ತರಾಗುತ್ತಿರುವ ಪ್ರಾಚಾರ್ಯ ಡಾ| ಎಸ್.ಎಫ್.
ಸಿದೆ°ಕೊಪ್ಪ ಅವರ ಕಾರ್ಯ ಪ್ರಶಂಸನೀಯ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ತಾಲೂಕಿನ ನಾಗಸಮುದ್ರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ಡಾ| ಎಸ್.ಎಫ್. ಸಿದೆ°ಕೊಪ್ಪ ಹೃದಯಸ್ಪರ್ಶಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರು ತಮ್ಮ ತ್ಯಾಗ ಮತ್ತು ಸಮರ್ಪಣಾ ಮನೋಭಾವದಿಂದಲೇ ತಮ್ಮ ಶಿಷ್ಯರ ಮನಃ ಪಟಲದಲ್ಲಿ ಸದಾ ಕಾಲ ನಿಲ್ಲುತ್ತಾರೆ. ಇವತ್ತು ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಶಿಕ್ಷಕರಿಂದಲೇ ಸಾಧ್ಯ. ಆ ಹಿನ್ನೆಲೆಯಲ್ಲಿ ಶ್ರಮಿಸಿರುವ ಸಿದೆ°àಕೊಪ್ಪ ದೀರ್ಘ ಸೇವೆ ಜನಮಾನಸದಲ್ಲಿ ನೆಲೆ ನಿಲ್ಲುವಂತಹದು ಎಂದರು.
ವಿಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಶಿಕ್ಷಣದ ನಿಜವಾದ ಗುರಿ ಚಾರಿತ್ರ್ಯ ನಿರ್ಮಾಣ. ಶಿಕ್ಷಣವೆಂದರೆ ಪಠ್ಯ ಕಲಿಕೆಯಲ್ಲ, ಜೀವನದ ಮೌಲ್ಯಗಳ ಶಿಸ್ತು ಸಂಸ್ಕಾರ ತುಂಬುವ ಕೆಲಸ ನಡೆದಾಗ ಮಾತ್ರ ಶಿಕ್ಷಣ ಪರಿಪೂರ್ಣವೆನಿಸುವ ಆದರ್ಶ ವಿದ್ಯಾರ್ಥಿಗಳಿಗೆ ಸದಾ ತಮ್ಮ ವೃತ್ತಿ ಜೀವನದುದ್ದಕ್ಕು ಜ್ಞಾನದಾಸೋಹ ಮಾಡಿರುವ ಡಾ| ಎಸ್.ಎಫ್. ಸಿದೆ°ಕೊಪ್ಪ ಹೃದಯಸ್ಪರ್ಶಿ ಕಾರ್ಯ ಎಂದರು.
ಡಾ| ಎಸ್.ಎಫ್. ಸಿದೆ°ಕೊಪ್ಪ ಮಾತನಾಡಿ, ದೇಶದ ನಿಜವಾದ ಭವಿಷ್ಯ ಅಡಗಿರುವುದು ವಿದ್ಯಾರ್ಥಿಗಳ ಕೈಯಲ್ಲಿ. ಅಂತಹ ವ್ಯಕ್ತಿತ್ವ ರೂಪಿಸುವ ಶಿಕ್ಷಕರ ಕಾರ್ಯ ಮಹತ್ವಪೂರ್ಣವಾದದ್ದು. ಆದ್ದರಿಂದ ಅವರ ಭವಿಷ್ಯಕ್ಕಾಗಿ ಶಿಕ್ಷಕ ವೃಂದ ಮತ್ತು ಪಾಲಕರು ಶ್ರಮಿಸಲು ಮುಂದಾಗಿ ಎಂದರು.
ಡಾ| ಆರ್.ಎಂ. ಕುಬೇರಪ್ಪ, ಡಾ| ಐ.ಎ. ಪಿಂಜಾರ ಮಾತನಾಡಿದರು. ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಡಾ| ಹನುಮಂತಗೌಡ ಕಲ್ಮನಿ ಪ್ರಸ್ತಾವಿಕ ಮಾತನಾಡಿದರು. ಡಾ| ಎಸ್.ಎಫ್. ಸಿದೆ°ಕೊಪ್ಪ ಅವರಿಗೆ ವಿವಿಧ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರಕಾಶ ಹೊಸಮನಿ, ಪ್ರಾಚಾರ್ಯ ಖಲೀಲ ಅಹ್ಮದ್ ಚಿಕ್ಕೇರೂರ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಾಬರ್ಜಿ, ಜಿಲ್ಲಾ ನೋಂದಣಾಧಿಕಾರಿ ಶಿವಕುಮಾರ ಅಪರಂಜಿ, ಪ್ರಾಚಾರ್ಯ ಶಿವಪ್ಪ ಕುರಿ, ಪ್ರಾಚಾರ್ಯ ಎಂ.ಯು. ಹಿರೇಮಠ, ಡಾ| ಅಪ್ಪಣ್ಣ ಹಂಜೆ, ಡಾ| ರಮೇಶ ಕಲ್ಲನಗೌಡರ, ಕಾಲೇಜು ಸಮಿತಿ ಸದಸ್ಯ ಆರ್.ಎಚ್. ಏಕಬೋಟೆ, ಶಂಕರಸಿಂಗ್ ರಜಪೂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.