ಗದಗ: ಶಿವಮೊಗ್ಗ ಸಂಗೀತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ
ರಾಗ-ದ್ವೇಷಗಳಿಲ್ಲದ ಸಮಾಜ ನಿರ್ಮಾಣವಾಗಬೇಕಾದರೆ ಬಸವತತ್ವಗಳು ಅತ್ಯವಶ್ಯ
Team Udayavani, May 13, 2024, 4:36 PM IST
ಉದಯವಾಣಿ ಸಮಾಚಾರ
ಗದಗ: ಶಿವಮೊಗ್ಗದ ಡಾ| ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಹಾಗೂ ಸಂಸ್ಕೃತ ಪಾಠಶಾಲೆಗೆ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ನೀಡಿರುವ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ಕಾರ್ಯ ಅಭಿನಂದನೀಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ವಿ. ಪರಮಶಿವಮೂರ್ತಿ ಹೇಳಿದರು.
ನಗರದ ತೋಂಟದಾರ್ಯ ಮಠದಲ್ಲಿ ಬಸವ ಜಯಂತಿ ಅಂಗವಾಗಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ವತಿಯಿಂದ “ಮಾನವತಾವಾದಿ ಬಸವೇಶ್ವರ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಮೊಗ್ಗದ ಡಾ| ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಹಾಗೂ ಸಂಸ್ಕೃತ ಪಾಠಶಾಲೆಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಬಸವ ಜಯಂತಿಯಂದು ತೋಂಟದಾರ್ಯ ಮಠದಲ್ಲಿ ಬಸವಣ್ಣನಿಗೆ ಪ್ರಿಯವಾದ ಶ್ರಮಜೀವಿಗಳಿಗೆ ಸನ್ಮಾನ ಹಾಗೂ ಜ್ಞಾನದಾಸೋಹದಂತಹ ಸತ್ಕಾರ್ಯಗಳು ನಡೆದಿರುವುದು ವಿಶೇಷವಾಗಿದೆ. ವಿಜಯನಗರದ ಪ್ರಸಿದ್ಧ ದೊರೆ ಪ್ರೌಢದೇವರಾಯನ ಕಾಲದಲ್ಲಿ ಕನ್ನಡ ಸಾಹಿತ್ಯದ ಸ್ಥಿತಿಗತಿಗಳ ಕುರಿತು ವಿವರಣೆ ನೀಡುವ ಅಪರೂಪದ ಕೃತಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಡಾ| ತೋಂಟದ ಸಿದ್ಧರಾಮ ಮಹಾಸ್ವಾಮಿಗಳೇ ಈ ಕೃತಿಯ ಪರಿಷ್ಕರಣೆ ಕಾರ್ಯ ಮಾಡಿರುವುದು ಅವರ ಸಾಹಿತ್ಯ ಕಾಳಜಿಗೆ ಹಿಡಿದ ಕೈ ಗನ್ನಡಿಯಾಗಿದೆ ಎಂದರು.
ಬಸವಣ್ಣನವರ ಆದರ್ಶಗಳ ಕುರಿತು ಮಾತನಾಡಿದ ಅವರು, ಮಾನವಕುಲವನ್ನು ಕಾಡುತ್ತಿರುವ ಸಮಕಾಲೀನ ಸಮಸ್ಯೆಗಳಿಗೆ ಬಸವತತ್ವವು ಎಳೆ ಎಳೆಯಾಗಿ ಪರಿಹಾರ ಸೂಚಿಸಿದ್ದು, ಬಸವತತ್ವವವನ್ನು ಅಧ್ಯಯನ ಮಾಡುವ ವ್ಯವಧಾನ ನಮ್ಮಲ್ಲಿ
ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರಾಗ-ದ್ವೇಷಗಳಿಲ್ಲದ ಸಮಾಜ ನಿರ್ಮಾಣವಾಗಬೇಕಾದರೆ ಬಸವತತ್ವಗಳು
ಅತ್ಯವಶ್ಯವಾಗಿವೆ ಎಂದರು.
ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರಕಾಶ ಲಿಂಬಯ್ಯಸ್ವಾಮಿಮಠ ಪ್ರಾಸ್ತಾವಿಕ ಮಾತನಾಡಿ, ಲಿಂಬಯ್ಯಸ್ವಾಮಿ ಪ್ರತಿಷ್ಠಾನ ನಮ್ಮ ತಂದೆಯವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಸದುದ್ದೇಶದಿಂದ ಸ್ಥಾಪಿಸಿದ ಸಂಸ್ಥೆಯಾಗಿದೆ. ಪರಿಸರವಾದಿಗಳು, ವಿಕಲಾಂಗ ಸಂಸ್ಥೆ ಹಾಗೂ ಆದರ್ಶ ದಂಪತಿಗಳು ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡುತ್ತಿದ್ದೇವೆ.
ಈ ಬಾರಿ ಡಾ| ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಮಾರ್ಗದರ್ಶನದ ಮೇರೆಗೆ ಶಿವಮೊಗ್ಗದ ಪುಟ್ಟರಾಜ ಗವಾಯಿಗಳ ಉಚಿತ ಸಂಗೀತ ಪಾಠಶಾಲೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ನಿಸ್ವಾರ್ಥ ಸೇವಾ ಮನೋಭಾವದಿಂದ ಸಮಾಜಕ್ಕೆ ಅರ್ಪಿತವಾದ ಸಂಸ್ಥೆಯೊಂದಕ್ಕೆ ಪ್ರಶಸ್ತಿ ನೀಡುತ್ತಿರುವುದು ತೃಪ್ತಿ ತಂದಿದೆ ಎಂದರು.
ಶಿವಮೊಗ್ಗದ ಡಾ| ಪುಟ್ಟರಾಜ ಕವಿ ಗವಾಯಿಗಳ ಉಚಿತ ಸಂಗೀತ ಮತ್ತು ಸಂಸ್ಕೃತ ಪಾಠಶಾಲೆಯ ಸಂಸ್ಥಾಪಕ ಆರ್.ಬಿ. ಸಂಗಮೇಶ್ವರ ಗವಾಯಿಗಳು ಮಾತನಾಡಿ, ಪುಟ್ಟರಾಜ ಗವಾಯಿಗಳ ಪ್ರೇರಣೆಯಿಂದ ಆಶ್ರಮ ಸ್ಥಾಪಿಸಿದ ಬಗೆಯನ್ನು
ವಿವರಿಸಿದರು.
ಡಾ| ಶಿವಾನಂದ ವಿರಕ್ತಮಠ ರಚಿಸಿದ “ಪ್ರೌಢದೇವರಾಯನ ಕಾಲದ ಕನ್ನಡ ಸಾಹಿತ್ಯ’ ಲೋಕಾರ್ಪಣೆಗೊಂಡಿತು. ಹಂಪಿ ಕನ್ನಡ
ವಿಶ್ವವಿದ್ಯಾಯದ ಹಸ್ತಪ್ರತಿ ವಿಭಾಗದ ಮುಖ್ಯಸ್ಥ ಡಾ| ಕೆ. ರವೀಂದ್ರನಾಥ ಗ್ರಂಥ ಲೋಕಾರ್ಪಣೆ ಮಾಡಿ ಗ್ರಂಥದ ವೈಶಿಷ್ಟ್ಯ ಗಳ ಕುರಿತು ಮಾತನಾಡಿದರು.
ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿದರು. ರೇವಣಸಿದ್ದಯ್ಯ ಮರಿದೇವರಮಠ ಹಾಗೂ ಡಾ| ಪುಟ್ಟರಾಜ ಕವಿ ಗವಾಯಿಗಳ ಉಚಿತ ಸಂಗೀತ ಮತ್ತು ಸಂಸ್ಕೃತ ಪಾಠಶಾಲೆಯ ಅಂಧ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ನೆರವೇರಿತು. ಸಾಹಿತಿ ಜ್ಯೋತಿರ್ಲಿಂಗ ಹೊನಕಟ್ಟಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪುರ, ಅಮರೇಶ ಅಂಗಡಿ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.