­29 ಕೆರೆಗಳಿಗೆ ನೀರು ತುಂಬಿಸಲು ಸಿಕ್ಕೀತೇ ಹಣ?

ಬಜೆಟ್‌ನಲ್ಲಿ ಅನುದಾನ ನೀಡುವ ವಿಶ್ವಾಸ ! ಜಲ ಸಂಪನ್ಮೂಲ ಇಲಾಖೆ ಅನುಮೋದನೆಗೆ ಮರು ಪ್ರಸ್ತಾವನೆ

Team Udayavani, Mar 5, 2021, 9:01 PM IST

Gadag

ಮುಂಡರಗಿ: ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಾಲವಾಡಗಿ ಏತ ನೀರಾವರಿ ಯೋಜನೆಯಿಂದ ಮುಂಡರಗಿ- ಶಿರಹಟ್ಟಿ, ಗದಗ ಭಾಗದ 29 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಅನುದಾನ ನೀಡಬಹುದೆಂಬ ನಿರೀಕ್ಷೆಯನ್ನು ಈ ಭಾಗದ ರೈತರು ಹೊಂದಿದ್ದಾರೆ.

ಈಗಾಗಲೇ ತಾಲೂಕಿನ ಬಹುದೊಡ್ಡ ಶಿಂಗಟಾಲೂರು ಏತ ನೀರಾವರಿ ಯೋಜನೆಯ ಸೂಕ್ಷ್ಮನೀರಾವರಿ ಕಾಮಗಾರಿಗಳಡಿ ರೈತರ ಹೊಲಗಳಿಗೆ ನೀರುಣಿಸಲು ಪೈಪ್‌ಲೈನ್‌ ಹಾಕುವುದರ ಮೂಲಕಪ್ರಾಯೋಗಿಕ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಜತೆಗೆ ಇದೇ ಏತ ನೀರಾವರಿಯಿಂದ ಬಸಾಪೂರ,ಹಿರೇವಡ್ಡಟ್ಟಿ, ಡಂಬಳ, ಜಂತ್ಲಿ-ಶಿರೂರು, ಪೇಠಾಲೂರು ಕೆರೆಗಳು ಸೇರಿದಂತೆ ಮೂವತ್ತಕ್ಕಿಂತಲೂಹೆಚ್ಚು ಚೆಕ್‌ ಡ್ಯಾಂಗಳಿಗೆ ಪೈಪ್‌ಲೈನ್‌ ಮೂಲಕ ನೀರುತುಂಬಿಸಿದ್ದರಿಂದ ಈ ಭಾಗದಲ್ಲಿ ರೈತರು ನೀರಾವರಿಮೂಲಕ ಬೆಳೆ ಬೆಳೆಯುತ್ತಿದ್ದಾರೆ. ಅದರಂತೆಯೇ ತಾಲೂಕಿನ ತುಂಗಭದ್ರಾ ನದಿಯ ಹಮ್ಮಿಗಿ ಬ್ಯಾರೇಜ್‌ನಿಂದ ಜಾಲವಾಡಗಿ ಗ್ರಾಮದ ಕೆರೆ ಮೂಲಕ ಮುಂಡರಗಿ ತಾಲೂಕಿನ ಮುರುಡಿ, ಕೆಲೂರು, ಚಿಕ್ಕವಡ್ಡಟ್ಟಿ, ಕೆರೆಗಳು ಮತ್ತುಶಿರಹಟ್ಟಿ ತಾಲೂಕಿನ ಜಲ್ಲಿಗೇರಿ, ಕಡಕೋಳ,ಮಾಗಡಿ, ಸೊರಟೂರು ಕೆರೆಗಳು, ಗದಗ ತಾಲೂಕಿನ ಮುಳಗುಂದ, ಕಬಲಾದಕಟ್ಟಿ, ಮಲ್ಲಸಮುದ್ರ, ಕಣವಿ,ನೀಲಗುಂದ ಸೇರಿದಂತೆ ಒಟ್ಟು 29 ಕೆರೆಗಳಿಗೆ ನೀರುತುಂಬಿಸುವ ಯೋಜನೆಯ ಮರು ಪ್ರಸ್ತಾವನೆಯನ್ನುಜಲ ಸಂಪನ್ಮೂಲ ಇಲಾಖೆಗೆ ಅನುಮೋದನೆಗೆಕಳುಹಿಸಲಾಗಿದೆ.

ಈ ಮೊದಲಿನ ಪ್ರಸ್ತಾವನೆ ಇಲಾಖೆಯಬಾಕಿ ಕಾಮಗಾರಿಗಳ ಕಾರ್ಯಭಾರ ಅಧಿಕವಾಗಿರುವುದರಿಂದ 110.94 ಕೋಟಿ ರೂ.ಯೋಜನೆಯನ್ನು ಸದ್ಯಕ್ಕೆ ಮುಂದೂಡಲಾಗುತ್ತಿದೆಎಂದು ಸರಕಾರದ ಜಲಸಂಪನ್ಮೂಲ ಇಲಾಖೆಕಾರ್ಯದರ್ಶಿಗಳು 2019ರ ಜುಲೈ 15ರಂದುಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕನಿರ್ದೇಶಕರಿಗೆ ಪತ್ರ ಬರೆದಿದ್ದರು. ಆದರೆ ಮರುಪ್ರಸ್ತಾವನೆಯಂತೆ ಮುಂಡರಗಿ, ಶಿರಹಟ್ಟಿ, ಗದಗಭಾಗದ 29 ಕೆರೆ, ಚೆಕ್‌ಡ್ಯಾಂಗಳಿಗೆ ನೀರು ತುಂಬಿಸುವ197.05 ಕೋಟಿ ರೂ. ಮಾರ್ಪಡಿತ ಪ್ರಸ್ತಾವನೆಯನ್ನು2020ರ ಸೆಪ್ಟೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆಗೆ ಕಳುಹಿಸಲಾಗಿದೆ. ಹಾಗಾಗಿ ಜಾಲವಾಡಗಿ ಏತನೀರಾವರಿ ಯೋಜನೆಗೆ ಈ ಸಲ ಸಿಎಂ ಅನುದಾನ ನೀಡಬಹುದೆನ್ನುವ ಆಶಾಭಾವ ಇದೆ.

ಈ ಹಿಂದೆ 29 ಕೆರೆಗಳಿಗೆ ನೀರು ತುಂಬಿಸುವಜಾಲವಾಡಗಿ ಏತ ನೀರಾವರಿ ಯೋಜನೆ ಅನುದಾನ ಕೊರತೆಯಿಂದ ನನೆಗುದಿಗೆ ಬಿದ್ದಿತ್ತು. ಅಲ್ಲಿಂದಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಾರದೇ ರೈತರು ಮೀನಮೇಷ ಎಣಿಸುವಂತಾಗಿದೆ.ಜಾಲವಾಡಗಿ ಏತ ನೀರಾವರಿಯಿಂದ 29 ಕೆರೆಗಳಿಗೆನೀರು ತುಂಬಿಸಿದರೆ ಮುಂಡರಗಿ, ಶಿರಹಟ್ಟಿ, ಗದಗ ಭಾಗದ ಸಾವಿರಾರು ಏಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ದೊರೆಯಲಿದೆ. ಕೆರೆಗಳಿಗೆ ನೀರು ತುಂಬಿಸಿದರೆ ಶಾಶ್ವತ ಬರಗಾಲದಹಣೆಪಟ್ಟಿಯಿಂದ ಈ ಭಾಗದ ರೈತರು ಕಳಚಿಕೊಂಡು ನೀರಾವರಿ ಬೆಳೆ ಬೆಳೆಯಲು ಅನುಕೂಲವಾಗಲಿದೆ.

ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.