ಗದಗ: ಎಲ್ಲರಿಗೂ ಬಾಲ್ಯವಿವಾಹ ಕಾಯ್ದೆ ಅರಿವಿರಲಿ-ಗುರುಪ್ರಸಾದ್
Team Udayavani, Feb 9, 2024, 5:05 PM IST
ಉದಯವಾಣಿ ಸಮಾಚಾರ
ಗದಗ: ಪೋಕ್ಸೋ ಕಾಯ್ದೆ, ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ಕಾಯ್ದೆ ಕುರಿತು ಪ್ರತಿಯೊಬ್ಬರಿಗೂ ತಿಳಿವಳಿಕೆ ಇರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ್ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜಿಲ್ಲಾ ಪೊಲೀಸ್ ಇಲಾಖೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಆರ್‌ಟಿಇ, ಫೋಕ್ಸೋ, ಬಾಲಕಾರ್ಮಿಕ ಹಾಗೂ ಭಿಕ್ಷಾಟನೆ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲನ್ಯಾಯ ಕಾಯ್ದೆಯಲ್ಲಿ 18 ವರ್ಷದೊಳಗಿನ ಮಗು ಮತ್ತು ವ್ಯಕ್ತಿಯನ್ನು ಬಾಲಾಪರಾಧಿ ಎಂದು ಪರಿಗಣಿಸುವುದಿಲ್ಲ. ಕಾನೂನು ಸಂಘರ್ಷಕ್ಕೊಳಪಟ್ಟ ಮಗು ಎಂದು ಕರೆಯಲಾಗುತ್ತದೆ. ಇಂತಹ ಮಕ್ಕಳನ್ನು ಸಾಮಾನ್ಯವಾಗಿ ನ್ಯಾಯಾಲಯಕ್ಕೆ
ಹಾಜರುಪಡಿಸುವುದಿಲ್ಲ. ಅದರ ಬದಲಾಗಿ ಬಾಲನ್ಯಾಯ ಮಂಡಳಿಯಲ್ಲಿ ಹಾಜರು ಪಡಿಸಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲಾ ಮುಖ್ಯೋಪಾಧ್ಯಾಯರು ಬಾಲ್ಯವಿವಾಹ ನಿಷೇಧಾಧಿಕಾರಿಗಳಾಗಿರುತ್ತಾರೆ. ತಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ಇರಬೇಕು. ಅದೇ ರೀತಿ ಹಾಸ್ಟೆಲ್ ವಾರ್ಡನ್‌ಗಳು ಕೂಡ ಮಕ್ಕಳಿಗೆ ಸಂಬಂಧಿಸಿದ ನೀತಿ, ನಿಯಮ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಉಪನ್ಯಾಸಕ ಹರೀಶ ಜೋಗಿ ಅವರು ಮಕ್ಕಳ ಹಕ್ಕುಗಳ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಸಿಸ್ಟರ್ ಡುಲ್ಸಿನ್ ಅವರು, ಬಾಲನ್ಯಾಯ ಕಾಯ್ದೆ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ಕುರಿತು, ದತ್ತು ಮಾರ್ಗಸೂಚಿ ಉಪನ್ಯಾಸ ನೀಡಿದರು.
ಅಪರ ಜಿಲ್ಲಾ ಧಿಕಾರಿ ಅನ್ನಪೂರ್ಣ ಎಂ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ ಬಿದರಿ, ಪೊಲೀಸ್ ಇಲಾಖೆಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕ ಹಳ್ಳೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.