ಜಿಲ್ಲೆಯಲ್ಲಿ ಬೀಜ-ಗೊಬ್ಬರ ದಾಸ್ತಾನು
ರೈತರಿಗೆ ಸಚಿವರ ಅಭಯ
Team Udayavani, Apr 10, 2020, 5:55 PM IST
ಗದಗ: ಕೊರೊನಾದಿಂದಾಗಿ ಕೃಷಿ ಚಟುವಟಿಕೆ ನಡೆಸಲು ರೈತ ಬಾಂಧವರಿಗೆ, ರೈತ ಕಾರ್ಮಿಕರಿಗೆ ಯಾವುದೇ ನಿರ್ಬಂಧವಿಲ್ಲ. ಆದರೆ ಜನರು ತಮ್ಮ ಆರೋಗ್ಯ ರಕ್ಷಣೆಗೆ ಸಾಮಾಜಿಕ ಅಂತರ, ವೈಯಕ್ತಿಕ ಮತ್ತು ಪರಿಸರ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಜಿಲ್ಲಾಡಳಿತ ಭವನದ ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಏ. 1 ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಪ್ರಾರಂಭಿಸಲಾಗಿದೆ. ಆದರೆ ಗದಗ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದೃಢ ಪಟ್ಟಿರುವುದು ವಿಷಾದದ ಸಂಗತಿ. ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಗಳ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹಾಪ್‌ಕಾಮ್ಸ್ ಮಳಿಗೆ ತೆರೆಯುವಂತೆ ಸೂಚಿಸಿದ್ದೇನೆ. ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 47 ಹೆಕ್ಟೆರ್ ಪ್ರದೇಶದಷ್ಟು ತೋಟಗಾರಿಕೆ ಬೆಳೆ ನಾಶವಾಗಿದೆ. ಎನ್‌ಡಿಆರ್‌ಎಫ್ ನಿಧಿ ಯಡಿ ಪರಿಹಾರ ಒದಗಿಸಲು ಅಗತ್ಯದ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಶಾಸಕರಾದ ರಾಮಣ್ಣ ಲಮಾಣಿ, ವಿಪ ಸದಸ್ಯ ಎಸ್.ವಿ. ಸಂಕನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಗಣರಾಜ್ಯೋತ್ಸವ ಸ್ತಬ್ಧಚಿತ್ರ -2025: ಪೂರ್ವಾಭ್ಯಾಸದಲ್ಲಿ ಮೂಡಿಬಂದ ಸ್ತಬ್ಧಚಿತ್ರ
ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಣ್ಣ ತಮ್ಮಂದಿರ ಜಗಳ ಬಗೆ ಹರಿಸುವ ವಿಶ್ವಾಸ ಇದೆ: ಬೊಮ್ಮಾಯಿ
ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…
ಆಕರ್ಷಕ ಪ್ರವಾಸಿ ತಾಣ, ಸುಂದರ ಊರು…ಸೂಡಿ ಪ್ರಾಚೀನ ಪರಂಪರೆಗೆ ಸಾಕ್ಷಿ…
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Gudibanda: ಧರಣಿ ನಿರತ ವ್ಯಕ್ತಿಗೆ ಹೃದಯಾಘಾತ, ಸಾವು
Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು
Trump ಹೊಸ ನೀತಿಗೆ ಹಿನ್ನಡೆ: ಪೌರತ್ವ ರದ್ದು ಆದೇಶಕ್ಕೆ ಅಮೆರಿಕ ಕೋರ್ಟ್ ತಡೆಯಾಜ್ಞೆ
Sandalwood: ಚಿಕ್ಕಣ್ಣ ನಟನೆಯ ʼಫಾರೆಸ್ಟ್ʼ ಇಂದು ತೆರೆಗೆ
Sandalwood: ತೆರೆಗೆ ಬಂತು ರಿಷಿ ನಟನೆಯ ʼರುದ್ರ ಗರುಡ ಪುರಾಣ’ ಚಿತ್ರ