Gadag; ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮಾಜದ ಪ್ರತಿಭಟನೆ
Team Udayavani, Dec 12, 2024, 2:27 PM IST
ಗದಗ: ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದವರ ಮೇಲೆ ಲಾಠಿ ಚಾರ್ಜ್ ಹಾಗೂ ಸರ್ಕಾರ ದೌರ್ಜನ್ಯ ಖಂಡಿಸಿ ಗದಗದಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು.
ಗದಗನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬಹು ಸಂಖ್ಯಾತ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಹೋರಾಟ, ಹಲ್ಲೆ ಮಾಡಿದ ಸರ್ಕಾರ ಹಾಗೂ ಪೋಲೀಸ್ ಸಿಬ್ಬಂದಿಯನ್ನು ವಜಾಮಾಡುವಂತೆ ಒತ್ತಾಯಿಸಲಾಯಿತು.
ಕಾರ್ಯಪ್ಪ ಸರ್ಕಲ್ ನಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಕಾರರು ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ನೂಕುನುಗ್ಗಲು ತಳ್ಳಾಟ ನಡೆಯಿತು.
ಪ್ರತಿಭಟನೆ ವೇಳೆ ಟಯರ್ ಗೆ ಬೆಂಕಿ ಹಚ್ಚುವ ವೇಳೆ ಕಾರ್ಯಕರ್ತನಿಗೆ ಬೆಂಕಿ ತಗುಲಿದೆ. ಟಯರ್ ಗೆ ಪೆಟ್ರೋಲ್ ಸುರಿದಿದ್ದು, ಮತ್ತೋರ್ವ ಕಾರ್ಯಕರ್ತನ ಪ್ಯಾಂಟ್ ಗೆ ಬೆಂಕಿ ತಗುಲಿದೆ. ಪೊಲೀಸರು ಹಾಗೂ ಇತರೆ ಕಾರ್ಯಕರ್ತರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಶಿವರಾಜ ಹಿರೇಮನಿ ಪಾಟೀಲ ಎಂಬ ಕಾರ್ಯಕರ್ತನಿಗೆ ಬೆಂಕಿ ತಗುಲಿದೆ.
ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪಂಚಮಸಾಲಿ 2ಎ ಮೀಸಲಾತಿ ನೀಡದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಗೆಹರಿಯದ ಆಸ್ತಿ ವಿವಾದ: ದಯಾಮರಣ ಕೋರಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ
ಅನಾರೋಗ್ಯಕರ ಜೀವನಶೈಲಿಯೇ ಹೃದಯಾಘಾತಕ್ಕೆ ಕಾರಣ: ಹಿರೇಮಠ
Panchamasali; ಡಿ.10ರಂದು 50 ಸಾವಿರಕ್ಕೂ ಹೆಚ್ಚು ಜನರಿಂದ ಸುವರ್ಣ ವಿಧಾನಸೌಧ ಮುತ್ತಿಗೆ
Mundargi: ಬೀದಿ ನಾಯಿ ದಾಳಿ; ಮಗುವಿನ ಸ್ಥಿತಿ ಗಂಭೀರ
ಬಯಲು ಸೀಮೆಗೆ ವಿದೇಶ ಅತಿಥಿ ಬಂಟಿಂಗ್: ಬೈರಾಪುರ ಬೆಟ್ಟದಲ್ಲಿ ಬಾನಾಡಿಗಳ ಕಲರವ
MUST WATCH
ಹೊಸ ಸೇರ್ಪಡೆ
SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು
Chikkamagaluru: ನಾಲ್ಕು ವರ್ಷದಿಂದ ಪತ್ನಿಗೆ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ
One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್ ನಿಲ್ದಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.