ಗದಗ ಪೊಲೀಸರಿಗೂ ತಟ್ಟಿದ ಕೋವಿಡ್ ಕಾಟ: ಶಹರ ಪೊಲೀಸ್ ಠಾಣೆ ಸೀಲ್ ಡೌನ್
Team Udayavani, Jul 15, 2020, 2:38 PM IST
ಗದಗ: ಜನರನ್ನು ಕೋವಿಡ್-19 ಸೋಂಕಿನಿಂದ ದೂರವಿರುವಂತೆ ಶ್ರಮಿಸುತ್ತಿದ್ದ ಜಿಲ್ಲೆಯ ಪೊಲೀಸರಿಗೂ ಕೋವಿಡ್ ಕಾಟ ಎದುರಾಗಿದೆ. ಗದಗ ಶಹರ ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ.
ಠಾಣೆಯ ಪೇದೆಯೊಬ್ಬರಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಗದಗ ಶಹರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ ಪೇದೆಯ ಸಂಪರ್ಕದಲ್ಲಿದ್ದ ನಾಲ್ವರು ಪೇದೆಗಳ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ.
ಸೀಲ್ ಡೌನ್ ಕಾರಣದಿಂದ ಗದಗ ಶಹರ ಪೊಲೀಸ್ ಠಾಣೆಯ ಕಾರ್ಯ ನಿರ್ವಹಣೆಯನ್ನು ನಗರ ಸಂಚಾರಿ ಠಾಣೆಗೆ ಸ್ಥಳಾಂತರ ಮಾಡಲಾಗಿದೆ. ಮಹಿಳಾ ಹಾಗೂ ಗೆಳತಿ ಪೊಲೀಸ್ ಠಾಣೆಯನ್ನು ಬೆಟಗೇರಿ ಬಡಾವಣೆ ಠಾಣೆಗೆ ಸ್ಥಳಾಂತರ ಮಾಡಲಾಗಿದೆ.
ಶಹರ ಠಾಣೆಯ ಪೇದೆಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಆತಂಕ ಎದುರಾಗಿದ್ದು, ಜಿಲ್ಲೆಯ 300 ಕ್ಕೂ ಅಧಿಕ ಪೊಲೀಸರ ಆರೋಗ್ಯ ತಪಾಸಣೆ ಮಾಡುವಂತೆ ಎಸ್.ಪಿ ಯತೀಶ್ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.