Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Team Udayavani, May 3, 2024, 2:48 PM IST
ಗದಗ: ಲೋಕಸಭೆ ಚುನಾವಣೆ ಪಕ್ಷದ ಪ್ರಕೋಷ್ಠಗಳಿಗೂ ಪರೀಕ್ಷೆಯಾಗಿದ್ದು, ಎಲ್ಲ ಪ್ರಕೋಷ್ಠಗಳು ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಗದಗದಲ್ಲಿ ರಾಜ್ಯ ಬಿಜೆಪಿ ವಿವಿಧ ಪ್ರಕೋಷ್ಠಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಒಂದು ದೇಶ, ರಾಜ್ಯ ಅಭಿವೃದ್ಧಿ ಹೊಂದಬೇಕೆಂದರೆ ಎಲ್ಲ ವೃತ್ತಿಯವರು ಕೆಲಸ ಮಾಡಿದಾಗ ಮಾತ್ರ ಸಾಧ್ಯ. ಸರ್ಕಾರ ಮತ್ತು ಎಲ್ಲ ವೃತ್ತಿ ಬಾಂಧವರ ನಡುವೆ ಸೇತುವೆಯಾಗಿ ಕೆಲಸ ಮಾಡಲು ಪ್ರಕೋಷ್ಠಗಳನ್ನು ಮಾಡಿದೆ. ಎಲ್ಲ ಪ್ರಕೋಷ್ಠಗಳು ಸಕ್ರೀಯವಾಗಿ ಕೆಲಸ ಮಾಡಿ, ಪಕ್ಷಕ್ಕೆ ಹೆಚ್ಚಿನ ಮತ ಹಾಕುವಂತೆ ನೋಡಿಕೊಳ್ಳಬೇಕು ಎಂದರು.
ಈ ರೀತಿಯ ಪ್ರಕೋಷ್ಠಗಳು ಬೇರೆ ಪಕ್ಷದಲ್ಲಿಲ್ಲ. ಅವರು ನಿಮ್ಮ ವೃತ್ತಿಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಉದಾಹರಣೆಗೆ ವೈದ್ಯರ ಪ್ರಕೋಷ್ಠ ವೈದ್ಯರ ಸಮಸ್ಯೆ ಇದ್ದಾಗ ಅದನ್ನು ನಮ್ಮ ಪ್ರಕೋಷ್ಠ ವಿವರವಾಗಿ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಬಿಜೆಪಿ ಗೆದ್ದರೆ ನಿಮ್ಮ ವೃತ್ತಿಗಳು ಸುರಕ್ಷಿತವಾಗಿರುತ್ತವೆ. ನರೇಂದ್ರ ಮೋದಿಯವರು ಎಲ್ಲರ ಬಗ್ಗೆ ಯೋಚಿಸುತ್ತಾರೆ. ಅವರು ಬೀದಿ ಬದಿ ವ್ಯಾಪಾರಿಗಳ ಬಗ್ಗೆ ಚಿಂತನೆ ಮಾಡಿ ಅವರಿಗೆ ಆರ್ಥಿಕ ನೆರವು ನೀಡಿದರು. ಸುಮಾರು 18 ವೃತ್ತಿಗಳಿಗೆ ನೆರವು ನೀಡುವ ವಿಶ್ವಕರ್ಮ ಯೋಜನೆ ಜಾರಿ ಮಾಡಿದರು. ಎಪಿಎಂಸಿ ವ್ಯಾಪಾರಸ್ಥರು, ಮೀನುಗಾರರು, ವಿದೇಶಿ ಕಂಪನಿಗಳ ದಾಳಿಯಾದಾಗ ಸಣ್ಣ ವ್ಯಾಪಾರಸ್ಥರನ್ನು ರಕ್ಷಣೆಯನ್ನು ಬಿಜೆಪಿ ಮಾಡಿದೆ. ಈ ಚುನಾವಣೆ ಪ್ರಕೋಷ್ಠಗಳಿಗೂ ಪರೀಕ್ಷೆ. ಮೋದಿಯವರ ಅಲೆ ಇದೆ. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ. ಅದಕ್ಕಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಹೇಳಿದರು.
ಸಭೆಯಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ದತ್ತಾತ್ರೆಯ, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.