Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು
Team Udayavani, Apr 13, 2024, 12:49 PM IST
ಗದಗ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಅವರು ನಗರದ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಉಭಯ ಗುರುಗಳಾದ ಪಂಡಿತ ಪಂಚಾಕ್ಷರ ಗವಾಯಿಗಳು, ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ದರ್ಶನಾಶೀರ್ವಾದ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಾಮಪತ್ರ ಸಲ್ಲಿಸಿ ಇಂದು ಪಂಡಿತ್ ಪುಟ್ಟರಾಜ ಗವಾಯಿಗಳು ಹಾಗೂ ಪಂಚಾಕ್ಷರಿ ಗವಾಯಿಗಳ ಗದ್ದುಗೆ ಆಶಿರ್ವಾದ ಪಡೆದಿದ್ದೇನೆ. ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ 28 ಸ್ಥಾನ ಗೆಲ್ಲುವ ಗುರಿ ನಮ್ಮದಾಗಿದೆ ಎಂದರು.
ರಾಜ್ಯ ಕಾಂಗ್ರೆಸ್ ಬಗ್ಗೆ ಜನ ಬಹಳಷ್ಟು ಬೇಸತ್ತಿದ್ದಾರೆ. ಜನರಲ್ಲಿರುವ ವಿಶ್ವಾಸವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ನುಡಿದಂತೆ ನಡೆದುಕೊಳ್ಳುತ್ತಿಲ್ಲ. ಇನ್ನು ಮುಂದೆ ಏನೇ ಗ್ಯಾರಂಟಿ ಕೊಟ್ಟರೂ ಜನ ಒಪ್ಪಲ್ಲ. ಮೋದಿಯೇ ಪಕ್ಕಾ ಗ್ಯಾರಂಟಿ. ಮೋದಿಜಿ ಹಾಗೂ ಬಿ.ಎಸ್.ವೈ ಆಶಿರ್ವಾದದಿಂದ ಎಲ್ಲಾ ಕಡೆ ಬಿಜೆಪಿ ಗೆಲ್ಲುತ್ತೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಒಬ್ಬ ವಿಶ್ವ ನಾಯಕ. ಮೋದಿ ಎಲ್ಲೇ ಹೋಗಲಿ ಅವರ ಹಿಂದೆ ಜನ ಸಾಗರವೇ ಹರಿದು ಬರುತ್ತದೆ. ಸಿಎಂ ಸಿದ್ದರಾಮಯ್ಯ ಏನೇ ರಣತಂತ್ರ ರೂಪಿಸಿದರೂ ನಡೆಯುವುದಿಲ್ಲ ಎಂದರು.
ಕಾಂಗ್ರೆಸ್ ಒಕ್ಕೂಟ ಒಡೆದು ಹೋಗಿದೆ. ಕಾಂಗ್ರೆಸ್ ಎಲ್ಲಾ ಕಡೆ ಹರಿದು ಚಿಂದಿಯಾಗಿದೆ. ಕರ್ನಾಟಕದ ಜನರು ಮೋದಿ ಗೆಲ್ಲಿಸುವ ಮೈಂಡ್ ಸೆಟ್ ನಲ್ಲಿದ್ದಾರೆ. ಮೋದಿ ಎಂದರೆ ವಿಶ್ವಾಸ, ದೇಶದ ಸುಭದ್ರತೆ, ಶಕ್ತಿ. ಮೋದಿ ಹೇಳದೆ ಗ್ಯಾರಂಟಿಗಳನ್ನು ಕೊಡುತ್ತಾರೆ. ಕಾಂಗ್ರೆಸ್ ನವರು ಹೇಳಿಯೂ ಗ್ಯಾರಂಟಿ ಕೊಡುತ್ತಿಲ್ಲ ಎಂದು ಬಿ.ಶ್ರೀರಾಮುಲು ಹೇಳಿದರು.
ದಿಂಗಾಲೇಶ್ವರ ಶ್ರೀಗಳು ಧಾರವಾಡದಿಂದ ಲೋಕಸಭಾ ಚುನಾವಣೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀರಾಮುಲು ದಿಂಗಾಲೇಶ್ವರ ಶ್ರೀಗಳು ನಮಗೆ ಗುರುಗಳು. ನಮಗೆಲ್ಲಾ ಮಾರ್ಗದರ್ಶನ, ಸಂಸ್ಕಾರ ಕೊಟ್ಟಿದಾರೆ. ಶ್ರೀಗಳ ಬಗ್ಗೆ ನಮಗೆ ಗೌರವವಿದೆ. ಧರ್ಮಕ್ಕಾಗಿ ನಿಲ್ಲುವ ವ್ಯಕ್ತಿ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆ ಸ್ಪರ್ಧಿಸಬೇಕೆ – ಬೇಡವೇ ಎಂಬ ವಿಚಾರವನ್ನು ಹಿರಿಯರು, ಶ್ರೀಗಳ ಜೊತೆ ಚರ್ಚೆ ಮಾಡಬೇಕು ಎಂದು ಹೇಳಿದರು.
ಶ್ರೀಗಳಿಗೆ ಸ್ಪರ್ಧೆ ಮಾಡಬೇಡಿ ಎಂದು ಹೇಳುವಷ್ಟು ದೊಡ್ಡವ ನಾನಲ್ಲ. ಅವರು ಸ್ಪರ್ಧೆಯ ವಿಚಾರಕ್ಕೆ ಸಮುದಾಯ, ಹಿರಿಯರು, ಅನೇಕ ಶ್ರೀಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಬಿ.ಎಸ್.ವೈ, ಪ್ರಹ್ಲಾದ್ ಜೋಷಿ, ಅನೇಕರು ಮಾತುಕತೆ ನಡೆಸಿದ್ದಾರೆ. ಗದಗ ಸೌಹಾರ್ದತೆ ಜಿಲ್ಲೆಯು ಜಾತಿ, ಧರ್ಮ, ಮತ, ಪಂಥ ಒಂದುಗೂಡಿಸಿದ ಫಕೀರೇಶ್ವರ ಮಠ. ಅಂತಹ ಮಠದ ದಿಂಗಾಲೇಶ್ವರ ಶ್ರೀಗಳು ಧರ್ಮಕ್ಕಾಗಿ ಜಯವಾಗಲಿ ಎನ್ನುತ್ತಾರೆ. ಎಲ್ಲರನ್ನೂ ಒಂದು ಗೂಡಿಸಿಕೊಂಡು ಹೋಗ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಯಿಂದ ಹಿಂದೆ ಸರಿಯಬಹುದು ಎಂಬ ಆತ್ಮವಿಶ್ವಾಸವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.