Gadag; ಯಶಸ್ಸು ಸಾಧಿಸಲು ಸತತ ಪ್ರಯತ್ನ ಅಗತ್ಯ: ಬಸವರಾಜ ಹೊರಟ್ಟಿ
Team Udayavani, Feb 3, 2024, 5:22 PM IST
ಗದಗ: ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಅತೀ ಅವಶ್ಯ. ಸಂಸ್ಕಾರವಂತ ಯವಕರ ಕೊರತೆ ಸಮಾಜವನ್ನು ಕಾಡುತ್ತಿದ್ದು ಮಕ್ಕಳಿಗೆ ಪಠ್ಯ ಪುಸ್ತಕಗಳ ಬೋಧನೆ ಜೊತೆಗೆ ನೈತಿಕ ಶಿಕ್ಷಣವನ್ನು ಬೋಧಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರಿಗೆ ಸಲಹೆ ನೀಡಿದರು.
ತಾಲೂಕಿನ ಹುಲಕೋಟಿಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಕರ್ನಾಟಕ ಪತ್ರಗಾರ ಇಲಾಖೆ ಹಾಗೂ ಕೆ.ಎಚ್.ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಶನಿವಾರ ಜರುಗಿದ ಕರ್ನಾಟಕ ಏಕೀಕರಣ ಚಳುವಳಿ ಹಾಗೂ ವಿಚಾರ ಸಂಕೀರಣ ಉದ್ಘಾಟಿಸಿ ಅವರು ಮತನಾಡಿದರು.
ತಂದೆ ತಾಯಿಗಳು ತಮ್ಮ ಸರ್ವಸ್ವವನ್ನು ತ್ಯಜಿಸಿ ಮಕ್ಕಳ ಭವಿಷ್ಯ ರೂಪಿಸಲು ಬದುಕಿನ ಬಂಡಿ ದೂಡುತ್ತಾರೆ. ಅವರ ಆಶಯಕ್ಕೆ ಧಕ್ಕೆ ಬಾರದಂತೆ ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಂಡು ಹೆತ್ತವರ ಹೆಸರು ತರಬೇಕು. ಕಳೆದುಕೊಂಡ ನಂತರ ಹುಡುಕುವುದು ಕಷ್ಟ. ಅದಕ್ಕೂ ಮುಂಚೆಯೇ ಎಚ್ಚರ ವಹಿಸಿಕೊಳ್ಳಬೇಕು. ಸುಶಿಕ್ಷಿತರಾಗಿ ಉತ್ತಮ ಜೀವನ ತಮ್ಮದಾಗಿಸಿಕೊಳ್ಳಬೇಕು. ಯಶಸ್ಸು ಸಾಧಿಸಲು ಸತತ ಪ್ರಯತ್ನ ಅಗತ್ಯವಿದೆ. ಕಾಲ ಬದಲಾದಂತೆ ಶೈಕ್ಷಣಿಕ ವ್ಯವಸ್ಥೆಯು ಬದಲಾಗುತ್ತಿದೆ. ಬದಲಾವಣೆ ಮಧ್ಯೆಯು ಮಕ್ಕಳು ಪಾಲಕರಿಗೆ, ಪೋಷಕರಿಗೆ, ಕಲಿಸಿದ ಗುರುಗಳಿಗೆ ಗೌರವ ನೀಡುವದರ ಜೊತೆಗೆ ಹುಟ್ಟಿದ ಊರು, ಕಷ್ಟ ಕಾಲದಲ್ಲಿ ಸಹಾಯವಾದವರನ್ನು ಎಂದೂ ಮರೆಯಬಾರದು ಎಂದು ಹೇಳಿದರು.
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ಅದರಲ್ಲಿ ಗದಗ ಜಿಲ್ಲೆಯ ಪಾತ್ರ ಬಹು ಪ್ರಮುಖವಾಗಿದೆ. ಪತ್ರಗಾರ ಇಲಾಖೆಯು ಮಹತ್ವದ ದಾಖಲೆಗಳನ್ನು ಪ್ರದರ್ಶನಕ್ಕೆ ಇಟ್ಟಿದೆ. ವಿಧ್ಯಾರ್ಥಿಗಳು ದಾಖಲೆಗಳ ಬಗ್ಗೆ ಅರಿತುಕೊಂಡು ಜ್ಞಾನ ಬೆಳೆಸಿಕೊಳ್ಳುವದರ ಮೂಲಕ ಸಧೃಡ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಬಸವರಾಜ ಹೊರಟ್ಟಿ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.