Gadag; ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ
Team Udayavani, Oct 7, 2024, 1:22 PM IST
ಗದಗ: ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದರು.
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲ ಎಂದು ಹೇಳಿದರು.
ನಮ್ಮ ಹೈಕಮಾಂಡ್ ಸ್ಪಷ್ಟವಾಗಿದೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಯಾವುದೇ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ. ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದರು.
ದಸರಾ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಅವರ ಲೆಕ್ಕಾಚಾರದಲ್ಲಿ ಹೇಳಿದ್ದಾರೆ. ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರಿ ಆಗುತ್ತಿದ್ದಾರೆ ಎಂದು ಹೇಳಿದರು.
ಹರಿಪ್ರಸಾದ್ ಮನದಾಳದ ಮಾತು
ಜಾತಿಗಣತಿ ವಿಷಯವಾಗಿ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಹೇಳಿಕೆ ಪ್ರತಿಕ್ರಿಯಿಸಿ ಅವರು ಮನದಾಳದ ಮಾತು ಹೇಳಿದ್ದಾರೆ. ಜಾತಿಗಣತಿ ಮುಖ್ಯನೋ ಸರ್ಕಾರ ಬೀಳೋದು ಮುಖ್ಯವೋ ಎನ್ನುವುದನ್ನು ಬಿ.ಕೆ. ಹರಿಪ್ರಸಾದ್ ಸ್ಪಷ್ಟ ಪಡಿಸಲಿ. ಜಾತಿಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು. ನಿಖರವಾಗಿ ಜಾತಿಗಣತಿಯ ಆದೇಶವಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಕಮಿಟಿ ಕೊಟ್ಟ ವರದಿಯನ್ನು ಯಾಕೆ ಸ್ವೀಕರಿಸಿಲ್ಲ. ಜಯಪ್ರಕಾಶ್ ಹೆಗಡೆ ಅವರು ಆಯೋಗದ ಅಧ್ಯಕ್ಷರಾಗಿ 2-3 ತಿಂಗಳಲ್ಲಿ ಹೇಗೆ ವರದಿ ಕೊಡುತ್ತಾರೆ? ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ದರು. ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಉದ್ದಾರ ಮಾಡುತ್ತೇವೆ ಎಂದು ಹೇಳುತ್ತಾರೆ. ಗೊಂದಲ ಸ್ಪಷ್ಟವಾಗಬೇಕು. ವೈಜ್ಞಾನಿಕವಾಗಿ ಆಗಬೇಕು. ಹಿಂದುಳಿದವರಿಗೆ ಹೆಚ್ಚಿನ ಕಾರ್ಯಕ್ರಮ ಬರಬೇಕು. ಜಾತಿಗಣತಿ ಬಿಡುಗಡೆ ಮಾಡಿ ಎಂದು ಮೊನ್ನೆಯೇ ಹೇಳಿದ್ದೇನೆ. ವರದಿ ಕೊಟ್ಟು 8-10 ತಿಂಗಳಾಯಿತು ಯಾಕೆ ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ದ ಮುಡಾ ಹಗರಣದ ಆರೋಪ ಬಂದ ಮೇಲೆ ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮಾತಾಡುತ್ತಾರೆ. ಜಾತಿ ಗಣತಿ ವರದಿ ಬಿಡಿಗಡೆಗೆ ಅವರ ಪಕ್ಷದಲ್ಲಿ ಮೊದಲಿನಿಂದಲೂ ವಿರೋಧ ಇದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಶಾಸಕ ಶಾಮನೂರ ಶಿವಶಂಕರಪ್ಪ ವಿರೋಧಿಸಿ ಸಹಿ ಮಾಡಿಕೊಟ್ಟಿದ್ದಾರೆ. ಅವರಲ್ಲಿಯೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ. ಆದಷ್ಟು ಬೇಗ ಜಾತಿಗಣತಿ ಹೊರಬಂದು ಚರ್ಚೆಯಾಗಲಿ ಎಂದು ಹೇಳಿದರು.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಮರು ಸ್ಥಾಪಿಸುವ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ಮಾಹಿತಿ ಇಲ್ಲ. ಅವರು ಮೊನ್ನೆಯೇ ಹೇಳಿದ್ದಾರೆ ಮಾಡಲಿ. ನಮ್ಮ ಪಕ್ಷ ತನ್ನದೇ ಕಾರ್ಯಕರ್ತ ಪಡೆ ಹೊಂದಿದೆ. ನಮ್ಮದು ರಾಷ್ಟ್ರೀಯ ಪಕ್ಷ ನಾವು ನಿರಂತರ ನಮ್ಮ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಕಪ್ಪತಗುಡ್ಡದ ಜೀವ ವೈವಿದ್ಯತೆ ಕಾಪಾಡಬೇಕು
ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು ಅದನ್ನು ಸರಿಪಡಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ವನ್ಯ ಜೀವಿ ಮಂಡಳಿ ಸಭೆ ಮಾಡಿದಾಗ ನಿಸರ್ಗವನ್ನು ಕಾಪಾಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದ್ದೆ, ಈಗಲೂ ಕೂಡ, ಮುಖ್ಯಮಂತ್ರಿ ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಲು ಗಣಿಗಾರಿಕೆಯಂತ ಚಟವಟಿಕೆ ನಡೆಯಲು ಅವಕಾಶ ಕೊಡದೇ ಈ ಭಾಗದ ಮೂರುನಾಲ್ಕು ಜಿಲ್ಲೆಯ ಪರಿಸರ ಕಾಪಾಡುವ ತೀರ್ಮಾನ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.