ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!


Team Udayavani, Sep 13, 2024, 2:18 PM IST

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಉದಯವಾಣಿ ಸಮಾಚಾರ
ಗದಗ: ಎರಡು ವರ್ಷಗಳಿಂದ ಮಳೆ ಇಲ್ಲದೇ ಬತ್ತಿದ್ದ ಕೆರೆಗಳಿಗೆ ಮತ್ತೆ ಜೀವಕಳೆ ಬಂದಿದೆ. ಜಿಲ್ಲೆಯ ಐತಿಹಾಸಿಕ ಡಂಬಳದ ವಿಕ್ಟೋರಿಯಾ ಕೆರೆ, ನಗರದ ಭೀಷ್ಮ ಕೆರೆ ಸೇರಿ ಬಹುತೇಕ ಕೆರೆಗಳಿಗೆ ಸಿಂಗಟಾಲೂರು ಎಡದಂಡೆ ಕಾಲುವೆ ಮೂಲಕ ತುಂಗಭದ್ರಾ ನೀರು ಹರಿಸಲಾಗುತ್ತಿದ್ದು, ಕೆರೆಗಳಿಗೆ ಜೀವಕಳೆ ಬಂದಂತಾಗಿದೆ.

ಕಳೆದ ಬೇಸಿಗೆಯಲ್ಲಿ ಕೆರೆಗಳಲ್ಲಿ ನೀರಿಲ್ಲದ ಕಾರಣ ಕೆರೆಗಳನ್ನೇ ಅವಲಂಬಿಸಿದ್ದ ಗ್ರಾಮಗಳು ತೊಂದರೆ ಅನುಭವಿಸಿದ್ದವು. ಅಲ್ಲದೇ, ಕೃಷಿಗೆ ನೆರವಾಗಿದ್ದ ಕೆರೆಗಳು ಬತ್ತಿದ್ದರಿಂದ ರೈತರು ಪರದಾಡಿದ್ದರು. ಪ್ರಸಕ್ತ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಾಗದಿದ್ದರೂ ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ನದಿ ಮೂಲಕ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ.

ಜಿಲ್ಲೆ ಕಳೆದ ಕೆಲ ವರ್ಷಗಳಿಂದ ಅತೀವೃಷ್ಟಿ, ಅನಾವೃಷ್ಟಿ ಸೇರಿ ನೆರೆ ಹಾಗೂ ಬರಗಾಲದಂತಹ ಪರಿಸ್ಥಿತಿ ಎದುರಿಸಿತ್ತು. ಇದರಿಂದ ಕೆಲ ಕೆರೆಗಳು ಭರ್ತಿ ಯಾಗಿ ಕೋಡಿ ಹರಿದಿದ್ದರೆ, ಇನ್ನು ಕೆಲವು ಕೆರೆಗಳು ನೀರಿಲ್ಲದೇ ಬತ್ತಿಹೋದ ಉದಾಹರಣೆಗಳಿದ್ದವು.

ಆದರೆ, ಪ್ರಸಕ್ತ ವರ್ಷ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ಜಿಲ್ಲೆಯ ಐತಿಹಾಸಿಕ ಡಂಬಳದ ವಿಕ್ಟೋರಿಯಾ ಕೆರೆ, ಗದಗ ಭೀಷ್ಮ ಕೆರೆ, ಮುಂಡವಾಡ, ಹಿರೇವಡ್ಡಟ್ಟಿ, ಶಿರೋಳ, ತಾಮ್ರ ಗುಂಡಿ, ಜಂತ್ಲಿಶಿರೂರು, ಸಿಂಗಟರಾಯನಕೆರೆ, ಬಾಲೆ ಹೊಸೂರಿನ ಎರಡು ಕೆರೆಗಳು ಸೇರಿ ಜಿಲ್ಲೆಯ ಬಹುತೇಕ ಕೆರೆಗಳಿಗೆ ಅವಶ್ಯಕತೆಗನುಸಾರವಾಗಿ ನೀರು ಹರಿಸುತ್ತಿರುವುದರಿಂದ ಕೆರೆ ಭರ್ತಿಯಾಗುತ್ತಿವೆ. ಇದರಿಂದ ಅಂತರ್ಜಲ ಮರುಪೂರ್ಣ ಗೊಳ್ಳುವಂತಾಗಿದೆ.

ಜಿಲ್ಲೆಯಲ್ಲಿ ನೀರಾವರಿ ಮತ್ತು ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 22 ಕುಡಿಯಲು ಯೋಗ್ಯ ಕೆರೆಗಳು, 192 ಬಳಕೆಗೆ ಸೀಮಿತವಾದ ಕೆರೆಗಳು ಸೇರಿ ಒಟ್ಟು 214 ಕೆರೆಗಳಿದ್ದು, ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ, ಡಂಬಳ, ಶಿರೋಳ, ತಾಮ್ರಗುಂಡಿ, ನಾಗರಳ್ಳಿ, ಜಂತ್ಲಿ ಶಿರೂರು ಸೇರಿ 15 ಕೆರೆಗಳು, 20ಕ್ಕೂ ಹೆಚ್ಚು ಚೆಕ್‌ಡ್ಯಾಂ ಗಳಿಗೆ ನೀರು ಹರಿಸಲಾಗುತ್ತಿದ್ದು, ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಳಸಾಪುರ, ಕಣಗಿನಹಾಳ ಸೇರಿದಂತೆ 8 ಗ್ರಾಮದ ಕೆರೆಗಳಿಗೆ ನೀರು ಹರಿಸುವುದು ಬಾಕಿಯಿದೆ.

ಸಣ್ಣ ನೀರಾವರಿ ವ್ಯಾಪ್ತಿ ಕೆರೆಗಳು 32: ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನಲ್ಲಿ 11, ಗಜೇಂದ್ರಗಡ 9, ಶಿರಹಟ್ಟಿ ತಾಲೂಕಿನಲ್ಲಿ 5, ಗದಗ ತಾಲೂಕಿನಲ್ಲಿ 4 ಹಾಗೂ ಲಕ್ಷೇ¾ಶ್ವರ ತಾಲೂಕಿನಲ್ಲಿ 3 ಸೇರಿ ಜಿಲ್ಲಾದ್ಯಂತ 32 ಕೆರೆಗಳಿದ್ದು, ಅವುಗಳಲ್ಲಿ ಮುಂಡರಗಿ ತಾಲೂಕಿನ ಡಂಬಳ, ಜಂತ್ಲಿಶಿರೂರ, ಪೇಠಾಲೂರ ಹಾಗೂ ಶಿರೋಳ ಕೆರೆಗಳಿಗೆ ಮಾತ್ರ ನದಿ ಮೂಲಕ ನೀರು ಹರಿಸಲಾಗುತ್ತಿದೆ.

ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನ 11 ಕೆರೆಗಳ 776.76 ಹೆಕ್ಟೇರ್‌ ಪ್ರದೇಶದಲ್ಲಿ 4,330.88 ಹೆಕ್ಟೇರ್‌ ಅಚ್ಚು ಪ್ರದೇಶವಿದೆ. ಶಿರಹಟ್ಟಿ ತಾಲೂಕಿನ 5 ಕೆರೆಗಳ 243.50 ಹೆಕ್ಟೇರ್‌ ಪ್ರದೇಶದಲ್ಲಿ 1,294.70 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಗಜೇಂದ್ರಗಡ-ರೋಣ ತಾಲೂಕಿನ 9 ಕೆರೆಗಳ 170.78 ಹೆಕ್ಟೇರ್‌ ಪ್ರದೇಶವಿದ್ದು, 905.31 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಗದಗ ತಾಲೂಕಿನ 4 ಕೆರೆಗಳ 126.97 ಹೆಕ್ಟೇರ್‌ ಪ್ರದೇಶವಿದ್ದು, 967 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಲಕ್ಷ್ಮೇಶ್ವರ ತಾಲೂಕಿನ 3 ಕೆರೆಗಳ 61.92 ಹೆಕ್ಟೇರ್‌ ಪ್ರದೇಶವಿದ್ದು, 222.69 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟಾರೆ 32 ಕೆರೆಗಳ ವಿಸ್ತೀರ್ಣ 1,379.93 ಹೆಕ್ಟೇರ್‌ ಪ್ರದೇಶ ಹೊಂದಿದ್ದು, ಅದರಲ್ಲಿ 7,520.58 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದೆ.

ಡಂಬಳ ವಿಕ್ಟೋರಿಯಾ ಕೆರೆ, ಗದುಗಿನ ಭೀಷ್ಮ ಕೆರೆ ಸೇರಿ ಜಿಲ್ಲೆಯ ಬಹುತೇಕ ಕೆರೆಗಳಿಗೆ ಸಿಂಗಟಾಲೂರು ಎಡದಂಡೆ ಕಾಲುವೆ
ಮೂಲಕ ನೀರು ಹರಿಸಲಾಗುತ್ತಿದೆ. ಸಣ್ಣ ನೀರಾವರಿ ಇಲಾಖೆ ಮೂಲಕ ಸಿಂಗಟರಾಯನಕೆರೆ ಹಾಗೂ ಬಾಲೆಹೊಸೂರಿನ ಎರಡು ಕೆರೆಗಳಿಗೆ ವರದಾ ನದಿ ನೀರು ನೀರು ತುಂಬಿಸಲಾಗುತ್ತಿದೆ. ನೀರು ಹರಿಸುತ್ತಿರುವುದರಿಂದ ಕೆರೆಗಳಿಗೆ ಮರುಜೀವ
ಬಂದಂತಾಗಿದೆ.

ಮುರಳೀಧರ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಸಣ್ಣ ನೀರಾವರಿ

■ ಅರುಣಕುಮಾರ ಹಿರೇಮಠ

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡ ಜನ: ಬೊಮ್ಮಾಯಿ

ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡ ಜನ: ಬೊಮ್ಮಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.