ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

1915ರಲ್ಲಿ ಕಸಾಪ ಸ್ಥಾಪಿಸಲು ಕಾರಣಿಭೂತರಾದರು

Team Udayavani, Jul 24, 2024, 6:09 PM IST

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

■ ಉದಯವಾಣಿ ಸಮಾಚಾರ
ಗದಗ: ಹರಿದು ಹಂಚಿ ಹೋಗಿದ್ದ ಕನ್ನಡ ನೆಲವನ್ನು ಒಂದುಗೂಡಿಸಲು ಅವಿರತವಾಗಿ ಶ್ರಮಿಸಿದರು ಕನ್ನಡ ಕುಲಪುರೋಹಿತರೆಂದು ಖ್ಯಾತರಾಗಿದ್ದ ಆಲೂರ ವೆಂಕಟರಾಯರು. ಕನ್ನಡಿಗರಲ್ಲಿ ಕೆಚ್ಚನ್ನು ಮೂಡಿಸಿ ಏಕೀಕರಣ ಹೋರಾಟಕ್ಕೆ ಹೊಸ ರೂಪವನ್ನು ನೀಡಿದರು. ಲೇಖನ, ನಾಟಕ, ಕೀರ್ತನಗಳ ಮೂಲಕ ಜಾಗೃತಿ ಮೂಡಿಸಿದರು ಎಂದು ಬರಹಗಾರ ಬಿ.ಎಲ್‌. ಪತ್ತಾರ ಹೇಳಿದರು.

ನಗರದ ತೋಂಟದ ಶ್ರೀಗಳ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ಜರುಗಿದ ಸಾಹಿತ್ಯ ಸಿಂಚನ ಮಾಲಿಕೆಯಲ್ಲಿ “ಕನ್ನಡಕ್ಕೆ ಆಲೂರು ವೆಂಕಟರಾಯರ ಕೊಡುಗೆ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಧರ್ಮ, ಸ್ವದೇಶಿ, ಸ್ವಭಾಷೆ ಹಾಗೂ ಸ್ವರಾಜ್ಯ ಇವುಗಳ ಹುಚ್ಚು ಹಿಡಿಸಿಕೊಂಡ ಆಲೂರರು ವಕೀಲಿ ವೃತ್ತಿಯನ್ನು ಬಿಟ್ಟು ಕರ್ನಾಟಕ ಏಕೀಕರಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದರು.

ಇತಿಹಾಸದಲ್ಲಿ ಆಸಕ್ತಿಯಿದ್ದ ಆಲೂರ ವೆಂಕಟರಾಯರು ಕರ್ನಾಟಕ ಇತಿಹಾಸ ಸಂಶೋಧನಾ ಮಂಡಳಿಯನ್ನು ಸ್ಥಾಪಿಸಿದರು.
ಕರ್ನಾಟಕ ವಿದ್ಯಾವರ್ಧಕ ಸಂಘದ ಮುಖವಾಣಿಯಾಗಿದ್ದ ವಾಗ್ಭೂಷಣ ಹಾಗೂ ಜಯಕರ್ನಾಟಕ ಪತ್ರಿಕೆಯ ಮೂಲಕ ಕನ್ನಡಿಗರ ಸ್ವಾಭಿಮಾನ ಬಡಿದೆಬ್ಬಿಸುವಂತಹ ಲೇಖನ ಬರೆದು ಪ್ರಕಟಿಸಿದರು. 1915ರಲ್ಲಿ ಕಸಾಪ ಸ್ಥಾಪಿಸಲು ಕಾರಣಿಭೂತರಾದರು ಎಂದರು.

ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಲೂರು ವೆಂಕಟರಾಯರು ಮುಂಬೈದಲ್ಲಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಪಣತೊಟ್ಟರು. ನಂತರ ಕನ್ನಡಿಗರಿಗೆ ಇತಿಹಾಸದ ಪ್ರಜ್ಞೆಯನ್ನು ತಮ್ಮ ಕೃತಿ ಮತ್ತು ಲೇಖನಗಳ ಮೂಲಕ ಮಾಡಿಕೊಟ್ಟು ಹೋರಾಟಕ್ಕೆ ಮಾನಸಿಕ ಸಿದ್ಧತೆ ಮಾಡಿದರು. ಭಾಷಾಭಿಮಾನ ಮತ್ತು ದೇಶಾಭಿಮಾನವನ್ನು ಜೊತೆಯಾಗಿ ಮುನ್ನಡೆಸಿದರು ಎಂದರು.

ಎಚ್‌.ಟಿ. ಸಂಜೀವಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಂದ್ರಶೇಖರ ವಸ್ತ್ರದ, ಕೆ.ಎಚ್‌. ಬೇಲೂರ, ಸಿ.ಎಂ. ಮಾರನಬಸರಿ, ಪ್ರ.ತೋ. ನಾರಾಯಣಪೂರ, ಎಸ್‌.ಎಸ್‌. ಕಳಸಾಪುರಶೆಟ್ರಾ, ಎಸ್‌.ಯು. ಸಜ್ಜನಶೆಟ್ಟರ್‌, ಎಸ್‌.ಎಸ್‌. ಸೂಳಿಕೇರಿ, ಶಶಿಕಾಂತ ಕೊರ್ಲಹಳ್ಳಿ, ರತ್ನಕ್ಕ ಪಾಟೀಲ, ಪದ್ಮಾಕಬಾಡಿ, ಮಂಜುಳಾ ವೆಂಕಟೇಶಯ್ಯ, ರತ್ನಾ ಪುರಂತರ, ಸುಧಾ ಬಳ್ಳಿ, ಶೈಲಜಾ ಗಿಡ್ನಂದಿ, ಬಸವರಾಜ ಗಣಪ್ಪನವರ, ಎಸ್‌.ಎ. ಪಾಟೀಲ, ಜೆ.ಎ. ಪಾಟೀಲ ಅಮರೇಶ ರಾಂಪೂರ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.