ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು
Team Udayavani, Aug 29, 2018, 2:01 PM IST
ಗದಗ: ಇಲ್ಲಿನ ಶಹಪುರ ಪೇಟೆಯ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ನೂರಾರು ಭಕ್ತಾದಿಗಳು ವಿವಿಧ ರೀತಿಯಲ್ಲಿ ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ನಡೆದ ಕಡುಬಿನ ಕಾಳಗದ ಅಂಗವಾಗಿ ಸುಮಾರು 20 ಅಡಿ ಉದ್ದದಷ್ಟು ಅಗ್ನಿಕುಂಡವನ್ನು ಸಿದ್ಧಗೊಳಿಸಲಾಗಿತ್ತು. ಉದ್ಯೋಗ, ಸಂತಾನ ಹಾಗೂ ಆರೋಗ್ಯ ಸೇರಿದಂತೆ ಇನ್ನಿತರೆ ಇಷ್ಟಾರ್ಥಗಳು ನೆರವೇರಿದ ಹಿನ್ನೆಲೆಯಲ್ಲಿ ನೂರಾರು ಜನರು ಅಗ್ನಿಕುಂಡ ಹಾಯುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಿದರು.
ಈ ವೇಳೆ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಅಗ್ನಿ ಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಕೆಲವರು ಕಂದಮ್ಮಗಳನ್ನು ಎತ್ತಿಕೊಂಡು ಸುಡುವ ಅಗ್ನಿಕುಂಡದಲ್ಲಿ ಸಾಗುವ ಮೂಲಕ ನೋಡುಗರು ಹುಬ್ಬೇರಿಸುವಂತೆ ಮಾಡಿದರು. ಇಷ್ಟಾರ್ಥ ನೆರವೇರಿದ ಸಂಭ್ರಮದಲ್ಲಿದ್ದ ಭಕ್ತರು ಪುರವಂತರ ನೇತೃತ್ವದಲ್ಲಿ ವಿಧಿವಿಧಾನದ ಮೂಲಕ ಹಿತ್ತಾಳೆ, ಕಬ್ಬಿಣದ ಸಲಾಕೆಗಳು, ದಾರ ಹಾಗೂ ಸೂಜಿಯಂತಹ ಶಸ್ತ್ರಗಳನ್ನು ಬಾಯಿ, ನಾಲಿಗೆಗೆ ಚುಚ್ಚಿಸಿಕೊಂಡು, ಭಕ್ತಿ ಪರವಶರಾದರು. ಇನ್ನು, ಈ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲೆಂದೇ ಅವಳಿ ನಗರದ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದರು. ಈ ವೇಳೆ ಸಕಲ ಮಂಗಳವಾದ್ಯಗಳು ಪುರವಂತರ ಸಮ್ಮಾಳ, ಭಕ್ತ ಸಮೂಹದ ಜಯ ಘೋಷಗಳು ಮುಗಿಲು ಮುಟ್ಟಿತ್ತು. ಜಾತ್ರಮಹೋತ್ಸವದ ಅಂಗವಾಗಿ ದೇವರ ದರ್ಶನ ಪಡೆದ ಭಕ್ತರು, ದೇವರಿಗೆ ಹಣ್ಣು ಕಾಯಿ ಹಾಗೂ ನೈವೇದ್ಯ ಸಮರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.