ಗದಗ: ಸೆ.11ರಂದು ವಿವೇಕಾನಂದ ಮೂರ್ತಿ ಅನಾವರಣ
Team Udayavani, Sep 10, 2024, 10:20 AM IST
ಉದಯವಾಣಿ ಸಮಾಚಾರ
ಗದಗ: ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಭಾರತದ ಅಧ್ಯಾತ್ಮದ ಶಕ್ತಿ ಪರಿಚಯಿಸಿದವರು ಸ್ವಾಮಿ ವಿವೇಕಾನಂದರು. ಸ್ವಾಮಿ ವಿವೇಕಾನಂದರ ವಿಶ್ವ ವಿಖ್ಯಾತ ಶಿಕಾಗೋ ಭಾಷಣ ಮಾಡಿದ ದಿನವಾದ ಸೆ. 11ರಂದು ಜಿಲ್ಲೆಯ ಗ್ರಾಮೀಣಾಭಿವೃದ್ಧಿ
ಪಂಚಾಯತ್‌ರಾಜ್ ವಿವಿ ನಾಗಾವಿ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ 39.5 ಅಡಿ ಎತ್ತರದ ಪುತ್ಥಳಿ ಅನಾವರಣಗೊಳಿಸುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಡಾ| ಸುರೇಶ ನಾಡಗೌಡರ ಹೇಳಿದರು.
ನಗರದ ಆರ್‌ಡಿಪಿಆರ್ ವಿವಿಯ ಕೌಶಲ್ಯ ವಿಕಾಸ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹ ಸಹೋದರತ್ವ ಭಾವನೆ ಪ್ರತೀಕ ವಿಶ್ವದ ಗಮನ ಸೆಳೆದ ಮಹಾನ್ ಚೇತನ, ಭಾರತೀಯ ಚಿಂತನ ಶೈಲಿ ಮಹತ್ವ ವಿಶ್ವ
ಮಾನ್ಯಗೊಳಿಸಿದವರು ಸ್ವಾಮಿ ವಿವೇಕಾನಂದರು. ಇಂತಹ ಆದರ್ಶ ವ್ಯಕ್ತಿತ್ವದ ಪ್ರತಿಕೃತಿ ಸ್ಥಾಪಿಸುವುದರ ಮೂಲಕ ವಿವಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ವಿವೇಕಾನಂದರ ಪ್ರಸ್ತುತಿ ಪ್ರಚುರಪಡಿಸಲು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಭವ್ಯ ಕಂಚಿನ ಪುತ್ಥಳಿಯನ್ನು ಕಲ್ಕತ್ತಾದ ಸ್ವಾಮಿ ವಿವೇಕಾನಂದ ರಾಮಕೃಷ್ಣ ಮಿಷನ್ ಅವರು ಒದಗಿಸಿದ್ದಾರೆ ಎಂದರು.
ಸಮಾರಂಭದಲ್ಲಿ ವಿಪ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರು ಉದ್ಘಾಟಿಸುವರು. ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.
ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿನಾನಂದಜೀ, ಡಾ| ತೋಂಟದ ಸಿದ್ಧರಾಮ ಶ್ರೀ, ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಶ್ರೀ ಸಾನ್ನಿಧ್ಯ ವಹಿಸುವರು ಎಂದರು. ಈ ವೇಳೆ ವಿವಿಯ ಆವರಣದಲ್ಲಿ ನಿರ್ಮಿಸಿರುವ ಖಾದಿ ಮಳಿಗೆ ಹಾಗೂ ಸ್ವಾಮಿ ವಿವೇಕಾನಂದ ಮತ್ತು ಮಹಾತ್ಮ ಗಾಂಧೀಜಿ ಕುರಿತಾದ ಪುಸ್ತಕ ಹಾಗೂ ವಿವಿಯ ಇತರ ಪ್ರಕಟಣೆಗಳ ಪ್ರಚಾರ ಹಾಗೂ ಮಾರಾಟ ಮಳಿಗೆಗಳನ್ನು ಹಾಗೂ ವಿವಿಯ ವ್ಯಾಯಾಮ ಶಾಲೆ ಕಟ್ಟಡದ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಡಾ| ಸುರೇಶ ನಾಡಗೌಡರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿವಿಯ ಹಣಕಾಸು ಅಧಿಕಾರಿ ಜೆ.ಸಿ. ಪ್ರಶಾಂತ, ಉಮೇಶ ಬಾರಕೇರ್, ಶಶಿಭೂಷಣ, ಡಾ| ಅಬ್ದುಲ್, ಗಿರೀಶ ದಿಕ್ಷೀತ್, ಪ್ರಶಾಂತ ಮೇರವಾಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.